ವೀರಾಜಪೇಟೆ, ನ. ೮: ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅತೀ ಮುಖ್ಯವಾಗಿದೆ ಎಂದು ವೀರಾಜಪೇಟೆ ಉಪ ಖಜಾನೆಯ ಪ್ರಥಮ ದರ್ಜೆ ಸಹಾಯಕ ಬಲರಾಮೇಗೌಡ ಅಭಿಪ್ರಾಯಪಟ್ಟರು.

ಇಲ್ಲಿನ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಆಚರಿಸಲಾದ ಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಭ್ರಷ್ಟಾಚಾರದ ನಿಯಂತ್ರಣ ದೇಶದ ಯುವ ಜನರ ಕೈಯಲ್ಲಿದ್ದು ಅದನ್ನು ಬುಡಸಮೇತ ತೊಡೆದು ಹಾಕಬೇಕು. ಭ್ರಷ್ಟಾಚಾರದಿಂದ ಅಭಿವೃದ್ಧಿ ಕುಂಠಿತವಾಗಿ ಸಮಾಜದ ಸಾಸ್ಥö್ಯ ಕೆಡುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಭ್ರಷ್ಟಾಚಾರ ನಿವಾರಣೆಯಲ್ಲಿ ಯುವ ಜನರ ಪಾತ್ರ ಅಪಾರವಾಗಿದೆ. ರಾಷ್ಟçಕ್ಕೆ ಹಾಗೂ ರಾಷ್ಟçದ ವ್ಯವಸ್ಥೆಗೆ ಭ್ರಷ್ಟಾಚಾರ ಮಾರಕವಾಗಿದ್ದು ಅದನ್ನು ನಿಯಂತ್ರಿಸದಿದ್ದರೆ ಆಡಳಿತ ಯಂತ್ರ ಕುಸಿಯುತ್ತದೆ ಎಂದರು.

ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಶಾಂತಿಭೂಷಣ್ ಪ್ರಾಸ್ತಾವಿಕ ನುಡಿಯೊಂದಿಗೆ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕಿ ಹೇಮ ಉಪಸ್ಥಿತರಿದ್ದರು. ಈ ಸಂದರ್ಭ ಉಪನ್ಯಾಸಕರು, ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.