ಮಡಿಕೇರಿ, ನ. ೯: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟ ಕಾರ್ಯಕ್ರಮ ತಾ. ೧೨ ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪೂರ್ವಾಹ್ನ ೧೦ ಗಂಟೆಗೆ ಕಾಲೇಜಿನ ಆವರಣದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ. ರಾಘವ ಭಾಗವಹಿಸಲಿದ್ದಾರೆ ಎಂದರು.

ಸಭೆಯ ನಂತರ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಏರ್ಪಡಿಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಗುವುದು. ಈಗಾಗಲೇ ರಸಪ್ರಶ್ನೆ, ಪ್ರಬಂಧ ಹಾಗೂ ಪುಸ್ತಕ ವಿಮರ್ಶೆ ಮಾಡುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಅಲ್ಲದೇ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತ ಶಯನ ಬರೆದ ಸೊಡರು ಪುಸ್ತಕವನ್ನು ಪತ್ರಿಕೋದ್ಯಮ ವಿದ್ಯಾರ್ಥಿಗಳು ವಿಮರ್ಶೆ ಮಾಡಲಿದ್ದಾರೆ ಎಂದರು.

ಹಳೇ ವಿದ್ಯಾರ್ಥಿ ಸಂಘದಿAದ ವಿದ್ಯಾರ್ಥಿಗಳಿಗೆ ತರಗತಿಯನ್ನು ಕಟ್ಟಿಸಿಕೊಡುವ ಯೋಜನೆಯಿದ್ದು, ಈಗಾಗಲೇ ಹಣ ಸಂಗ್ರಹಣೆ ಮಾಡಲಾಗಿದೆ. ಮುಂದಿನ ವರ್ಷದ ಕಾರ್ಯಯೋಜನೆ ಹಾಗೂ ಕಾಲೇಜಿನಲ್ಲಿ ಪ್ರಸ್ತುತ ಇರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದೆಂದರು.

ಇದೇ ಸಂದರ್ಭ ಹೆಚ್‌ಆರ್‌ಡಿ ವಿಭಾಗದಲ್ಲಿ ರ‍್ಯಾಂಕ್ ಪಡೆದಿರುವವರನ್ನು ಹಾಗೂ ಕ್ರೀಡೆ, ಎನ್‌ಸಿಸಿ, ರಾಷ್ಟಿçÃಯ ಪಂದ್ಯದಲ್ಲಿ ಹೆಸರು ಪಡೆದವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ತಿಳಿಸಿದರು.

ಮುಂದಿನ ವರ್ಷ ಕಟ್ಟಡ ನಿರ್ಮಾಣವಲ್ಲದೆ ಬಡ ವಿದ್ಯಾರ್ಥಿ ಗಳಿಗೆ ಸಹಾಯ, ಪತ್ರಿಕೋದ್ಯಮ ವಿಭಾಗದ ಅಭಿವೃದ್ಧಿ, ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ತಪಾಸಣಾ ಶಿಬಿರ ಮೊದಲಾದ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳ ಲಾಗುವುದು ಎಂದು ಪಾರ್ವತಿ ಅಪ್ಪಯ್ಯ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎನ್.ಡಿ. ಚರ್ಮಣ, ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ, ನಿರ್ದೇಶಕರಾದ ನಂದಿನೆರವAಡ ಅಪ್ಪಯ್ಯ, ಪದ್ಮಶ್ರೀ ಪುರಸ್ಕೃತೆ ರಾಣಿ ಮಾಚಯ್ಯ, ಬಿ.ಕೆ. ಪೂಣಚ್ಚ, ಉಪಸ್ಥಿತರಿದ್ದರು.