ರೂ. ೧೫ ಸಾವಿರ ಕೋಟಿ ಮೊತ್ತದ ವಿದ್ಯುತ್ ಯೋಜನೆಗೆ ಒಪ್ಪಂದ

ಬೆAಗಳೂರು, ನ. ೯: ಜಲ ವಿದ್ಯುತ್, ಸೋಲಾರ್ ಸೇರಿದಂತೆ ರೂ. ೧೧೫ ಸಾವಿರ ಕೋಟಿ ಮೊತ್ತದ ವಿವಿಧ ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಗುರುವಾರ ಒಪ್ಪಂದ ಮಾಡಿಕೊಂಡಿತು. ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹಾಗೂ ತೆಹ್ರ ಹೈಡ್ರ ಡೆವಲಪ್‌ಮೆಂಟ್ ಕಾರ್ಪೊರೇಶನ್ (ಟಿಎಚ್‌ಡಿಸಿಎಲ್) ತಾಂತ್ರಿಕ ನಿರ್ದೇಶಕ ಭೂಪೇಂದ್ರ ಗುಪ್ತ ಅವರು ಒಪ್ಪಂದಕ್ಕೆ ಸಹಿ ಹಾಕಿದರು. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಇಂಧನ ಸಚಿವ ಕೆ.ಜೆ. ಜಾರ್ಜ್, ಕೇಂದ್ರ ಸರ್ಕಾರದ ಟಿಹೆಚ್‌ಡಿಸಿಎಲ್ ಜೊತೆ ಮಾಡಿಕೊಂಡಿರುವ ಈ ಒಪ್ಪಂದ ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು, ಕೊರತೆ ನೀಗಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು. ಒಪ್ಪಂದದAತೆ ಕದ್ರಾ ಜಲಾಶಯದಲ್ಲಿ ೧೦೦ ಮೆಗಾವಾಟ್ ಸಾಮರ್ಥ್ಯದ ಫ್ಲೋಟಿಂಗ್ ಸೋಲಾರ್, ೧೭೦ ಮೆಗಾವಾಟ್ ಸಾಮರ್ಥ್ಯದ ನೆಲದಡಿಯ ವಿದ್ಯುತ್ ಯೋಜನೆ, ಕೆಪಿಸಿಎಲ್ ಆವರಣದಲ್ಲಿ ಮೇಲ್ಛಾವಣಿ ಸೌರ ಸ್ಥಾವರ, ವಾರಾಹಿಯಲ್ಲಿ ೧.೫೦೦ ಮೆಗಾವಾಟ್ ಸಾಮರ್ಥ್ಯದ ಪಂಪ್ ಸ್ಟೋರೇಜ್ ಘಟಕ ಸ್ಥಾಪನೆ ಮಾಡಲಾಗುವುದು ಎಂದು ವಿವರಿಸಿದರು.

ರಾಜ್ಯ ಸರಕಾರದ ವಿರುದ್ಧ ಬಿ.ಎಸ್.ವೈ. ಕಮೀಷನ್ ಆರೋಪ

ಬೆಂಗಳೂರು, ನ. ೯: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಸರ್ಕಾರದ ವಿರುದ್ಧ ಬಿಲ್ ಇತ್ಯರ್ಥಕ್ಕೆ ಗುತ್ತಿಗೆದಾರರ ಬಳಿ ಶೇ. ೮ ರಷ್ಟು ಕಮಿಷನ್ ಕೇಳುತ್ತಿರುವ ಆರೋಪ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಕಾರ್ಯನಿರ್ವಹಣೆ ಶೈಲಿ ಹಾಗೂ ನೀತಿಗಳ ವಿರುದ್ಧ ನಗರದಲ್ಲಿ ಮೂರು ದಿನಗಳ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಯಡಿಯೂರಪ್ಪ ಎಚ್ಚರಿಸಿದ್ದಾರೆ. ಗುತ್ತಿಗೆದಾರರಿಗೆ ಸರಿಯಾದ ಸಮಯಕ್ಕೆ ಬಿಲ್ ಪಾವತಿಯಾಗದ ಪರಿಣಾಮ ಇಂದು ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುವುದಕ್ಕೆ ಮುಂದಾಗುತ್ತಿಲ್ಲ. ಬಿಲ್‌ಗಳನ್ನು ಇತ್ಯರ್ಥಗೊಳಿಸುವುದಕ್ಕಾಗಿ ಗುತ್ತಿಗೆದಾರರಿಂದ ಈ ಸರ್ಕಾರ ಶೇ. ೭.೫-೮ ರಷ್ಟು ಕಮೀಷನ್ ಕೇಳುತ್ತಿದೆ. ಈ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನೆ ಮಾಡಲು ವಿಧಾನಸೌಧದ ಎದುರು ಸತ್ಯಾಗ್ರಹ ನಡೆಸುತ್ತೇವೆ. ಬಹುಶಃ ಬೆಳಗಾವಿ ವಿಧಾನಸಭೆ ಅಧಿವೇಶನಕ್ಕೆ ಮುಂಚಿತವಾಗಿ, ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಮೀಸಲಾತಿ ಹೆಚ್ಚಳ ಮಸೂದೆಗೆ ಬಿಹಾರ ವಿಧಾನಸಭೆ ಅನುಮೋದನೆ

ಪಾಟ್ನಾ, ನ. ೯: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅತ್ಯಂತ ಹಿಂದುಳಿದ ವರ್ಗಗಳು ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಈಗಿರುವ ಮೀಸಲಾತಿಯನ್ನು ಶೇ. ೫೦ ರಿಂದ ಶೇ. ೬೫ಕ್ಕೆ ಹೆಚ್ಚಿಸಲು ಬಿಹಾರ ವಿಧಾನಸಭೆ ಗುರುವಾರ ಅನುಮೋದನೆ ನೀಡಿದೆ. ನಿತೀಶ್ ಕುಮಾರ್ ಸರ್ಕಾರ ನಡೆಸಿದ ಸಮಗ್ರ ಜಾತಿ ಸಮೀಕ್ಷೆಯ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಅದೇ ರೀತಿ ಮೀಸಲಾತಿ ಒದಗಿಸುವ ಮಸೂದೆಗಳನ್ನು ಧ್ವನಿ ಮತದ ಮೂಲಕ ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಜಿAಬಾಬ್ವೆ ಪ್ರಜೆಗೆ ೧೦ ವರ್ಷಗಳ ಕಠಿಣ ಜೈಲು ಶಿಕ್ಷೆ

ಬೆಂಗಳೂರು, ನ. ೯: ಹೆರಾಯಿನ್ ಕಳ್ಳಸಾಗಣೆ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಿಂಬಾಬ್ವೆ ಪ್ರಜೆ ಮಸುಂಬಾ ತಫದ್ಜ್ವಾಗೆ (೩೫) ೧೦ ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ವಿಧಿಸಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ, ಬೆಂಗಳೂರು ವಲಯ ಘಟಕದ ಗುಪ್ತಚರ ಅಧಿಕಾರಿ ಪ್ರಕಾರ, ಆರೋಪಿ ಮುಸುಂಬಾ ತಫದ್ಜ್ವಾ ಅವರು ಜೂನ್ ೩೦, ೨೦೨೧ ರಂದು ದೋಹಾದಿಂದ ಬೆಂಗಳೂರಿಗೆ ಬಂದಾಗ ಭಾರತಕ್ಕೆ ಭಾರೀ ಪ್ರಮಾಣದ ೮,೨೪೦ ಗ್ರಾಂ ಹೆರಾಯಿನ್ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದಿದ್ದ. ನಂತರ ವಿಚಾರಣೆ ನಡೆಸಿದಾಗ, ಲಗೇಜಿನಲ್ಲಿ ಕೆಲವೊಂದು ವಸ್ತುಗಳನ್ನು ಇಟ್ಟಿದ್ದ ಜಿಂಬಾಬ್ವೆಯಲ್ಲಿರುವ ತನ್ನ ಸ್ನೇಹಿತೆ ಕ್ಯಾರೋಲಿನ್, ಭಾರತ ತಲುಪಿದಾಗ ಯಾರಾದರೂ ಸಂಪರ್ಕಿಸಿದರೆ ಅದನ್ನು ಅವರಿಗೆ ಕೊಡುವಂತೆ ಹೇಳಿದ್ದಾಗಿ ಆರೋಪಿ ನ್ಯಾಯಾಲಯಕ್ಕೆ ತಿಳಿಸಿದರು.

ಜನಪ್ರತಿನಿಧಿಗಳ ವಿರುದ್ಧದ ಪ್ರಕರಣ : ತ್ವರಿತ ವಿಚಾರಣೆಗೆ ವಿಶೇಷ ಪೀಠ

ನವದೆಹಲಿ, ನ. ೯: ಶಾಸಕರು ಹಾಗೂ ಸಂಸದರ ವಿರುದ್ಧ ದಾಖಲಾಗಿರುವ ಐದು ಸಾವಿರಕ್ಕೂ ಹೆಚ್ಚಿನ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯು ತ್ವರಿತವಾಗಿ ನಡೆಯುವಂತೆ ನೋಡಿಕೊಳ್ಳಲು ವಿಶೇಷ ಪೀಠ ರಚಿಸಬೇಕು ಎಂದು ಹೈಕೋರ್ಟ್ಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ. ಹೈಕೋರ್ಟ್ಗಳು, ಜಿಲ್ಲಾ ನ್ಯಾಯಾಧೀಶರು ಹಾಗೂ ಶಾಸಕರು, ಸಂಸದರಿಗೆ ಸಂಬAಧಿಸಿದ ಪ್ರಕರಣಗಳ ವಿಚಾರಣೆಗೆ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯಗಳಿಗೆ ಹಲವು ಮಾರ್ಗದರ್ಶನಗಳನ್ನು ನೀಡಿರುವ ಸುಪ್ರೀಂ ಕೋರ್ಟ್, ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಆದ್ಯತೆ ನೀಡಬೇಕು ಎಂದು ಹೇಳಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ಈ ಸೂಚನೆಗಳನ್ನು ನೀಡಿದೆ.

ಶಬರಿಮಲೆಯ ಮುಖ್ಯ ಅರ್ಚಕರ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ

ಕೊಚ್ಚಿ, ನ. ೯: ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರ (ಮೇಲ್‌ಶಾಂತಿ) ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಅನಿಲ್ ಕೆ. ನರೇಂದ್ರನ್ ಮತ್ತು ಜಿ. ಗಿರೀಶ್ ಅವರಿದ್ದ ನ್ಯಾಯಪೀಠವು ಅರ್ಜಿದಾರರ ವಾದ ಹಾಗೂ ಆಯ್ಕೆ ಪ್ರಕ್ರಿಯೆಯನ್ನು ದಾಖಲಿಸಿರುವ ಸಿಸಿಟಿವಿ ದೃಶ್ಯಾವಳಿಯನ್ನು ಗಮನಿಸಿ ಅರ್ಜಿ ತಿರಸ್ಕರಿಸಿದೆ. ೨೦೨೩-೨೪ನೇ ಸಾಲಿಗೆ ಮಹೇಶ್ ಪಿ.ಎನ್. ಅವರನ್ನು ದೇವಸ್ಥಾನದ ಮೇಲ್‌ಶಾಂತಿ ಆಗಿ ಆಯ್ಕೆ ಮಾಡಿದ್ದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು. ಅಯ್ಯಪ್ಪ ಸ್ವಾಮಿಯ ಭಕ್ತ ಎಂದು ಹೇಳಿಕೊಂಡಿರುವ ಮಧುಸೂದನನ್ ನಂಬೂದರಿ ಎನ್ನುವವರು ಈ ಅರ್ಜಿ ಸಲ್ಲಿಸಿದ್ದರು. ಆಯ್ಕೆ ಪ್ರಕ್ರಿಯೆಯನ್ನು ಹೊಸದಾಗಿ ನಡೆಸುವಂತೆ ಸೂಚಿಸಬೇಕು ಎಂದು ಕೂಡ ಅವರು ಕೋರಿದ್ದರು.

ಮಾನವ ಕಳ್ಳಸಾಗಣೆ ಪ್ರಕರಣ-೧೦ ಮಂದಿ ಬಂಧನ

ಬೆAಗಳೂರು, ನ. ೯: ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬAಧಿಸಿದAತೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ ರಾಷ್ಟಿçÃಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು, ೧೦ ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧನಕ್ಕೊಳಪಡಿಸಿದ್ದಾರೆ. ಗುವಾಹಟಿ, ಚೆನ್ನೆöÊ, ಬೆಂಗಳೂರು ಮತ್ತು ಜೈಪುರದ ಎನ್‌ಐಎ ಕಚೇರಿಗಳಲ್ಲಿ ಈ ಹಿಂದೆ ನಾಲ್ಕು ಮಾನವ ಕಳ್ಳಸಾಗಣೆ ಪ್ರಕರಣಗಳು ದಾಖಲಾಗಿದ್ದವು. ಅಕ್ರಮ ಬಾಂಗ್ಲಾ ವಲಸಿಗರು ಮಾನವ ಕಳ್ಳಸಾಗಾಣಿಕೆ ಮತ್ತು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಬAಧ ಬೆಂಗಳೂರು ಎನ್‌ಐಎ ಪ್ರಕರಣ ದಾಖಲಿಸಿಕೊಂಡಿತ್ತು. ಈ ದೂರು ಆಧರಿಸಿ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿ ಕರ್ನಾಟಕವಷ್ಟೇ ಅಲ್ಲದೆ, ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಹರಿಯಾಣ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು ೫೫ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.

ಸಂಸದೆ ಮಹುವಾ ಮೊಯಿತ್ರಾ ಉಚ್ಛಾಟನೆಗೆ ಶಿಫಾರಸು

ನವದೆಹಲಿ, ನ. ೯: ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪಕ್ಕೆ ಸಂಬAಧಿಸಿದAತೆ ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದಿಂದ ಉಚ್ಛಾಟಿಸಲು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಸಮಿತಿಯು ಇಲ್ಲಿ ಸಭೆ ಸೇರಿ, ತನ್ನ ವರದಿಯನ್ನು ಅಂಗೀಕರಿಸಿ ಮಹುವಾರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡಿದೆ ಎನ್ನಲಾಗಿದೆ. ನೈತಿಕ ಸಮಿತಿಯ ಒಟ್ಟು ೧೦ ಮಂದಿಯಲ್ಲಿ ಆರು ಸದಸ್ಯರು ವರದಿಯನ್ನು ಅಂಗೀಕರಿಸುವುದನ್ನು ಬೆಂಬಲಿಸಿದ್ದಾರೆ ಮತ್ತು ಉಳಿದ ನಾಲ್ವರು ಅದನ್ನು ವಿರೋಧಿಸಿದರು ಎಂದು ಸಭೆಯ ನಂತರ ಸೋಂಕರ್ ಸುದ್ದಿಗಾರರಿಗೆ ತಿಳಿಸಿದರು.