ಮಡಿಕೇರಿ, ನ. ೧೯: ರೈತರ ಅನುಕೂಲಕ್ಕಾಗಿ ಫ್ರೂಟ್ಸ್ ತಂತ್ರಾAಶವನ್ನು (ರೈತ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ-ಈಚಿಡಿmeಡಿ ಖegisಣಡಿಚಿಣioಟಿ ಚಿಟಿಜ Uಟಿiಜಿieಜ ಃeಟಿeಜಿiಛಿiಚಿಡಿಥಿ Iಟಿಜಿoಡಿmಚಿಣioಟಿ Sಥಿsಣem- ಈಖUIಖಿS) ಸರ್ಕಾರದ ವತಿಯಿಂದ ಅಭಿವೃದ್ದಿಗೊಳಿಸಿದ್ದು, ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಬಯಸುವ ಎಲ್ಲಾ ರೈತರು ಫ್ರೂಟ್ಸ್ ತಂತ್ರಾAಶದಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸೋಮಸುಂದರ್ ತಿಳಿಸಿದ್ದಾರೆ.

ರೈತರು ತಮ್ಮ ಜಮೀನಿಗೆ ಸಂಬAಧಿಸಿದ ವಿವರಗಳನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿಕೊAಡು ಗುರುತಿನ ಸಂಖ್ಯೆ (ಎಫ್‌ಐಡಿ) ಪಡೆಯಬಹುದು. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕಂದಾಯ ಇಲಾಖೆ ಮತ್ತು ಇತರೆ ಸಂಬAಧಿಸಿದ ಇಲಾಖೆಗಳಿಂದ ದೊರೆಯುವ ಸಹಾಯಧನ ಸೌಲಭ್ಯ ಪಡೆಯಲು ಮತ್ತು ಬೆಂಬಲ ಬೆಲೆ, ಬೆಳೆ ವಿಮೆ, ಬೆಳೆ ಸಾಲ, ಬೆಳೆಹಾನಿ ಪರಿಹಾರ, ಬ್ಯಾಂಕ್ ಸಾಲ ಪಡೆಯಲು ಹಾಗೂ ಯೋಜನೆಗಳಿಗೆ ಫ್ರೂಟ್ಸ್ ಸಂಖ್ಯೆ ಬಳಸಲಾಗುತ್ತಿದ್ದು, ಈ ಯೋಜನೆಯ ಪ್ರಯೋಜನ ಪಡೆಯುವಂತೆ ಕೋರಿದ್ದಾರೆ.

೨೦೨೩-೨೪ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಸಂಭವಿಸಿರುವ ಬರ ಪರಿಸ್ಥಿತಿಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ೫ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರದ ವತಿಯಿಂದ ಘೋಷಣೆ ಮಾಡಲಾಗಿದೆ. ಈ ಸಂಬAಧ ಸರ್ಕಾರದಿಂದ ಪರಿಹಾರ ಧನ ಬಿಡುಗಡೆಯಾದ ಸಂದರ್ಭದಲ್ಲಿ ರೈತರಿಗೆ ಅವರ ಫ್ರೂಟ್ಸ್ ಐಡಿ ಗೆ ಸೇರಿಸಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪರಿಹಾರ ಧನವನ್ನು ನೇರವಾಗಿ ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತದೆ.

ಜಿಲ್ಲೆಯಲ್ಲಿ ಒಟ್ಟು ೨,೬೯,೯೦೧ ಸರ್ವೇ ನಂಬರ್‌ಗಳು ಫ್ರೂಟ್ಸ್ ತಂತ್ರಾAಶ ಸೇರ್ಪಡೆಯಾಗಬೇಕಾಗಿದ್ದು, ಇದರಲ್ಲಿ ೧,೩೧,೨೧೮ ಸರ್ವೇ ನಂಬರ್‌ಗಳು ಫ್ರೂಟ್ಸ್ ತಂತ್ರಾAಶದಲ್ಲಿ ಸೇರ್ಪಡೆಯಾಗಲು ಬಾಕಿ ಇರುತ್ತದೆ. ಆದ್ದರಿಂದ, ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ತಮ್ಮ ಎಫ್‌ಐಡಿ ಗೆ ಸೇರಿಸಲು ಮತ್ತು ಯಾವ ರೈತರು ಇಲ್ಲಿಯವರೆಗೆ ಎಫ್‌ಐಡಿ ಯನ್ನು ಮಾಡಿಸಿಕೊಂಡಿಲ್ಲವೋ ಅವರು ತಮ್ಮ ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಪಶು ಸಂಗೋಪನಾ ಇಲಾಖೆ, ರೇಷ್ಮೆ ಇಲಾಖೆಯನ್ನು ಸಂಪರ್ಕಿಸಲು ಕೋರಿದೆ.

ಎಫ್‌ಐಡಿಯನ್ನು ಮಾಡಿಸಲು ತಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನುಗಳ ಪಹಣಿ ಪ್ರತಿಗಳು, ರೈತರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ತಮ್ಮ ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ (ಪರಿಶಿಷ್ಟ ವರ್ಗದ ರೈತರಿಗೆ ಕಡ್ಡಾಯ) ಹಾಗೂ ಪಾಸ್‌ಪೋರ್ಟ್ ಅಳತೆಯ ಒಂದು ಭಾವಚಿತ್ರ ಈ ದಾಖಲಾತಿಗಳು ಕಡ್ಡಾಯವಾಗಿದ್ದು, ರೈತರು ಈ ದಾಖಲಾತಿಗಳನ್ನು ತಪ್ಪದೇ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.