ಮಡಿಕೇರಿ, ನ. ೧೯: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಬದುಕು ದೇಶದ ಎಲ್ಲಾ ಮಹಿಳೆಯರಿಗೆ ಮಾದರಿ ಎಂದು ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್ ಹೇಳಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ೧೦೬ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿರಾ ಗಾಂಧಿ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದರು.
ಮುಖ್ಯ ಅತಿಥಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ, ಬದುಕುವ ಜನರಿಗೆ ಭೂಮಿಯ ಹಕ್ಕು ನೀಡಿದ ಇಂದಿರಾ ಗಾಂಧಿ ಜಗತ್ತಿನ ಸಮಾಜ ಸುಧಾರಕರ ಸಾಲಿಗೆ ಸೇರುತ್ತಾರೆ ಎಂದು ಹೇಳಿದರು.
ಮಡಿಕೇರಿ ನಗರ ಸಭೆಯ ಮಾಜಿ ಉಪಾಧ್ಯಕ್ಷ ಟಿ.ಎಂ. ಅಯ್ಯಪ್ಪ ಮಾತನಾಡಿ, ಇಂದಿರಾ ಗಾಂಧಿಯವರ ದಿಟ್ಟತನದ ಆಡಳಿತದಿಂದ ಭಾರತ ಸುಭದ್ರವಾಯಿತು ಎಂದು ಹೇಳಿದರು.
ನಗರ ಕಾಂಗ್ರೆಸ್ ಉಪಾಧ್ಯಕ್ಷ ಯಾಕುಬ್ ಮಾತನಾಡಿ, ಪೊಖ್ರಾನ್ ಅಣು ಪರೀಕ್ಷೆ ನಡೆಸುವ ಮೂಲಕ ಭಾರತವನ್ನು ಬಲಿಷ್ಠ ರಾಷ್ಟç ಎಂದು ಇಂದಿರಾ ಗಾಂಧಿ ಪ್ರಪಂಚಕ್ಕೆ ಪರಿಚಯಿಸಿದರು ಎಂದು ನುಡಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ಮಾಜಿ ನಗರಸಭೆ ಅಧ್ಯಕ್ಷೆ ಜುಲೇಕಾಬಿ, ಸೈನಿಕ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ನಗರ ಮಹಿಳಾ ಘಟಕದ ಅಧ್ಯಕ್ಷೆ ಫ್ಯಾನ್ಸಿ, ಪ್ರಮುಖರಾದ ಮಮ್ತಾಜ್ ಬೇಗಂ, ಸದಾ ಡೆನ್ನಿಸ್, ಕಿಮ್ಮುಡಿರ ಸೋಮಣ್ಣ, ಪ್ರೇಮಾ ಕೃಷ್ಣಪ್ಪ, ಪ್ರೇಮಾ ಲಿಂಗಪ್ಪ, ರಿಯಾಜ್, ಸೈಮನ್, ರಾಣಿ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಮುನೀರ್ ಮಾಚರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.