ಮಡಿಕೇರಿ, ನ. ೨೦: ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ೩೧ ನೇ ರಾಷ್ಟಿçÃಯ ಮಕ್ಕಳ ವಿಜ್ಞಾನ ಸಮಾವೇಶ-೨೦೨೩ಕ್ಕೆ ಪೂರ್ವಭಾವಿಯಾಗಿ ತಾ.೨೧ ರಂದು (ಇಂದು) ಬೆಳಿಗ್ಗೆ ೯.೩೦ ಗಂಟೆಗೆ ಮಡಿಕೇರಿ ನಗರದ ರೋಟರಿ ಮಕ್ಕಳ ವಿಜ್ಞಾನ ಕೇಂದ್ರದಲ್ಲಿ ಮಾರ್ಗದರ್ಶಿ ಶಿಕ್ಷಕರಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ನಡೆಯಲಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ ಹಾಗೂ ಮಡಿಕೇರಿ ನಗರದ ಲಯನ್ಸ್ ಕ್ಲಬ್ ಸಹಯೋಗ ದೊಂದಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಜ್ಞಾನ ಶಿಕ್ಷಕರು/ ಆಸಕ್ತ ಶಿಕ್ಷಕರಿಗೆ ಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರದಲ್ಲಿ ಸಮಾವೇಶದ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯದಡಿ ಮಕ್ಕಳಿಂದ ವೈಜ್ಞಾನಿಕ ಯೋಜನಾ ಪ್ರಬಂಧ ತಯಾರಿಸುವ ಕುರಿತು ತರಬೇತಿ ನೀಡಲಾಗುವುದು ಎಂದು ಡಿಡಿಪಿಐ ಎಂ.ಚAದ್ರಕಾAತ್ ತಿಳಿಸಿದ್ದಾರೆ.
ಡಿಸೆಂಬರ್ ೨೦೨೩ ರ ಮೊದಲ ವಾರದಲ್ಲಿ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ ನಡೆಯಲಿದ್ದು, ಜಿಲ್ಲಾಮಟ್ಟದ ಸಮಾವೇಶದಲ್ಲಿ ಉತ್ತಮವಾಗಿ ಪ್ರಬಂಧ ಮಂಡಿಸುವ ೧೦ ಮಂದಿ ಬಾಲವಿಜ್ಞಾನಿಗಳು ನಂತರ ಡಿಸೆಂಬರ್ ಎರಡನೇ ವಾರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿ ಪ್ರಬಂಧ ಮಂಡಿಸಲಿದ್ದಾರೆ.
ತಾ.೨೧ ರಂದು ಬೆಳಿಗ್ಗೆ ೧೦.೦೦ ಕ್ಕೆ ನಡೆಯಲಿರುವ ಜಿಲ್ಲಾಮಟ್ಟದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರವನ್ನು ಜಿ.ಪಂ. ಸಿಇಓ ವರ್ಣಿತ್ ನೇಗಿ ಉದ್ಘಾಟಿಸಲಿದ್ದು, ಲಯನ್ಸ್ ಸಂಸ್ಥೆಯ ಅಧ್ಯಕ್ಷ ಮಧುಕರ್ ಶೇಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಡಿಪಿಐ ಎಂ.ಚAದ್ರಕಾAತ್, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಅಂಬೇಕಲ್ ನವೀನ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ, ಮುಳಿಯ ಪ್ರತಿಷ್ಠಾನದ ಮುಖ್ಯಸ್ಥ ಕೇಶವಪ್ರಸಾದ್, ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ನಟರಾಜ್ ಕೆಸ್ತೂರು ಹಾಗೂ ವಿಜ್ಞಾನ ಪರಿಷತ್ತಿನ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಸಮಾವೇಶದ ಕುರಿತು ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ (ಮೊ: ೯೪೮೧೪೩೧೨೬೩), ವಿಜ್ಞಾನ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಡಿ.ಕೃಷ್ಣಚೈತನ್ಯ (ಮೊ:೯೪೪೯೨೦೨೦೫೫) ಅಥವಾ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್ (ಮೊ.೯೪೪೮೫ ೮೮೩೫೨) ಅವರನ್ನು ಸಂಪರ್ಕಿಸಬಹುದು.