ನ. ೨೦: ವಿದ್ಯಾರ್ಥಿ ಗಳು ಓದಿನೊಂದಿಗೆ ಕ್ರೀಡಾ ಚಟುವಟಿಕೆಗಳಿಗೆ ಒತ್ತು ನೀಡುವ ಮೂಲಕ ತಮ್ಮಲ್ಲಿನ ಪ್ರತಿಭೆಗಳನ್ನು ಪ್ರದರ್ಶಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಎಚ್.ಡಿ. ಕೋಟೆಯ ಸಂತ ಮೇರಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಅಂಥೋಣಿ ಪ್ರಭುರಾಜ್ ಹೇಳಿದರು.

ಕುಶಾಲನಗರ ವಿವೇಕಾನಂದ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಮಹಾನ್ ಪುರುಷರ ಜೀವನ ಹಾಗೂ ಸಾಧನೆಗಳು ಆದರ್ಶವಾಗಬೇಕು ಎಂದರು. ವಿವೇಕಾನಂದ ಕಾಲೇಜು ಶಿಕ್ಷಣ ಸಂಸ್ಥೆ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ಮಕ್ಕಳ ವ್ಯಾಸಾಂಗಕ್ಕೆ ನೀಡುವಷ್ಟೇ ಆದ್ಯತೆಯನ್ನು ಮಕ್ಕಳಲ್ಲಿ ಹುದುಗಿರುವ ಸುಪ್ತವಾದ ಪ್ರತಿಭೆಗಳನ್ನು ಹೊರತರುವ ಪ್ರಾಮಾಣಿಕ ಪ್ರಯತ್ನವಾಗುತ್ತಿದೆ.

ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸನ್ನಡತೆ ಹಾಗೂ ಸಂಯಮವನ್ನು ಕಲಿಸುತ್ತದೆ ಎಂದರು. ಕಣಿವೆ ರಾಮಲಿಂಗೇಶ್ವರ ದೇವಾಲಯ ಅಭಿವೃದ್ದಿ Æಳ್ಳುವಂತೆ ಕರೆಸಮಿತಿ ಅಧ್ಯಕ್ಷ ಕೆ.ಎನ್.ಸುರೇಶ್ ಹಾಗೂ ಪ್ರಭುರಾಜ್ ಅವರ ಸಾಧನೆಗಳನ್ನು ಗೌರವಿಸಿ ಕ್ರೀಡಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಮಹಾತ್ಮ ಗಾಂಧಿ ಕಾಲೇಜಿನ ಪ್ರಾಂಶುಪಾಲೆ ಟಿ.ಎ.ಲಿಖಿತಾ, ಕಛೇರಿ ಅಧೀಕ್ಷಕ ಎನ್.ಎನ್.ನಂಜಪ್ಪ, ಆಡಳಿತಾಧಿಕಾರಿ ಮಹೇಶ್ ಅಮೀನ್, ಉಪನ್ಯಾಸಕರಾದ ವಿಕ್ರಮ್, ಚಂದ್ರಶೇಖರ್, ಕಬಡ್ಡಿ ಆಟದ ತೀರ್ಪುಗಾರ ಕಾರ್ತಿಕ್ ಇತರರು ಇದ್ದರು. ವಿವೇಕಾನಂದ ಪಿಯು ಕಾಲೇಜಿನ ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಸ್ವಾಗತಿಸಿದರು. ಉಪನ್ಯಾಸಕಿ ಮೇರಿ ಪ್ರಿಯ ನಿರೂಪಿಸಿದರು. ಕ್ರೀಡಾ ಶಿಕ್ಷಕ ದಿನೇಶ್ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಕ್ರೀಡಾ ಕೂಟಗಳು ನಡೆದವು.