ಮಡಿಕೇರಿ, ನ. ೨೦: ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್, ಕೊಡವ ಎಂ.ಎ. ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ಮತ್ತು ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ತಾ.೨೪ ರಂದು ವಿಚಾರ ಮಂಡನೆ, ಪುಸ್ತಕ ಬಿಡುಗಡೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಅಂದು ಬೆಳಿಗ್ಗೆ ೧೦ ಗಂಟೆಗೆ ಫೀ.ಮಾ. ಕೆ.ಎಂ.ಕಾರ್ಯಪ್ಪ ಕಾಲೇಜ್‌ನ ಸಭಾಂಗಣದಲ್ಲಿ ನಿರ್ಮಾಪಕ, ನಿರ್ದೇಶಕ, ನಟ, ಸಾಹಿತಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಬರೆದಿರುವ ಕೊಡವ ಮಕ್ಕಡ ಕೂಟದ ೭೬ನೇ ಪುಸ್ತಕ "ನಾಡ ಕೊಡಗ್" ಅನಾವರಣಗೊಳ್ಳಲಿದೆ. ಸಾಹಿತಿ ಹಾಗೂ ಎಂ.ಎ.ಕೊಡವ ವಿಭಾಗದ ಉಪನ್ಯಾಸಕ ಬಾಚರಣಿಯಂಡ ಅಪ್ಪಣ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ, ಎಂ.ಎ.ಕೊಡವ ವಿಭಾಗದ ಉಪನ್ಯಾಸಕಿ ಬಾಚರಣಿಯಂಡ ರಾಣು ಅಪ್ಪಣ್ಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಪ್ಪ ಕಾಲೇಜ್‌ನ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ, ಕೊಡವ ಎಂ.ಎ ವಿಭಾಗದ ಸಂಯೋಜಕ ಮೇಚಿರ ರವಿಶಂಕರ್ ನಾಣಯ್ಯ, “ನಾಡ ಕೊಡಗ್” ಪುಸ್ತಕ ಬರಹಗಾರ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಬರಹಗಾರ್ತಿ ಐಚಂಡ ರಶ್ಮಿ ಮೇದಪ್ಪ "ನಂಗಡ ಮಕ್ಕಳ ಸಂಸ್ಕಾರವAತAಗ ಳಾಯಿತ್ ಬೊಳ್ತುವಲ್ಲಿ ಅವ್ವಂಗಡ ಪಾತ್ರ" ಎಂಬ ವಿಷಯದ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡವ ಎಂ.ಎ ವಿದ್ಯಾರ್ಥಿಗಳಾದ ಬೊಪ್ಪಂಡ ಶ್ಯಾಮ್ ಪೂಣಚ್ಚ, ಲೆ.ಕರ್ನಲ್ ಬಿ.ಎಂ.ಪಾರ್ವತಿ, ಐಚಂಡ ರಶ್ಮಿ ಮೇದಪ್ಪ, ಪುತ್ತರಿರ ವನಿತ ಮುತ್ತಣ್ಣ, ಬೊಳ್ಳಾರ್ ಪಂಡ ಎನ್.ಹೇಮಾವತಿ (ಜಾನ್ಸಿ), ಬೊಳ್ಳಜಿರ ಬಿ.ಅಯ್ಯಪ್ಪ, ಚೌಂಡಿರ ಶಿಲ್ಪ ಪೊನ್ನಪ್ಪ, ಬೊಳ್ಳಜಿರ ಯಮುನಾ ಅಯ್ಯಪ್ಪ, ಕವರಂಡ ಸೀಮಾ ಗಣಪತಿ ಅವರನ್ನು ಸನ್ಮಾನಿಸಿ, ಗೌರವಿಸಲಾಗುವುದು.