ಗುಡ್ಡೆಹೊಸೂರು, ನ. ೧೯: ಇಲ್ಲಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ತಾಲೂಕು ಮಟ್ಟದ ಮಕ್ಕಳಲ್ಲಿ ತೀವ್ರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ನಡೆಯಿತು.
ಆರೋಗ್ಯ ಇಲಾಖೆ ವತಿಯಿಂದ ನವೆಂಬರ್ ತಿಂಗಳ ೧೫ ರಿಂದ ೩೦ ರ ತನಕ ಪಾಕ್ಷಿಕ ಆಚರಿಸಲಾಗುತ್ತಿದೆ. ಶಾಲೆಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಚರಿಸಲಾಗುತ್ತದೆ. ತಾಲೂಕು ಆರೋಗ್ಯಧಿಕಾರಿಗಳ ಕಚೇರಿ ಮತ್ತು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ಸಂದರ್ಭ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ಹಾಜರಿದ್ದು, ಮಕ್ಕಳಲ್ಲಿ ಅತಿಸಾರ ಭೇದಿಯನ್ನು ನಿಯಂತ್ರಿಸುವ ಬಗ್ಗೆ, ತಡೆಗಟ್ಟುವ ವಿಧಾನದ ಬಗ್ಗೆ, ಅಲ್ಲದೆ ಓ.ಆರ್.ಎಸ್. ಮತ್ತು ಜಿಂಕ್ ಮಾತ್ರೆಗಳನ್ನು ಉಪಯೋಗಿಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.
ಹಿರಿಯ ಆರೋಗ್ಯ ಕಾರ್ಯಕರ್ತೆ ಭವಾನಿ, ಆರೋಗ್ಯಾಧಿಕಾರಿ ಪ್ರಿಯಾ, ಈ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.