ಮಡಿಕೇರಿ, ನ. ೨೦: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮೂರ್ನಾಡು ವೃತ್ತದ ೨೦ ಅಂಗನವಾಡಿ ಕೇಂದ್ರದ ಹಾಗೂ ಪಿಎಂಶ್ರೀ ಶಾಲೆ ಮೂರ್ನಾಡುವಿನ ಸುಮಾರು ೪೦೦ ಮಕ್ಕಳ ಪ್ರತಿಭೆಗೆ ಒಂದು ಸುಂದರ ವೇದಿಕೆಯನ್ನು ಕಲ್ಪಿಸಲಾಗಿತ್ತು. ಪುಟಾಣಿ ಮಕ್ಕಳು ಛದ್ಮವೇಷ, ನೃತ್ಯ, ಅಭಿನಯ ಗೀತೆ, ಸ್ಪರ್ಧೆಗಳಲ್ಲಿ ಪಾಲ್ಗೊಂಡು ಪದಕಗಳನ್ನು ಪಡೆದರು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಪ್ರಶಸ್ತಿ ಪತ್ರ, ಬಹುಮಾನ, ಡ್ರಾಯಿಂಗ್ ಪುಸ್ತಕ ವಿತರಣೆ ಮಾಡಲಾಯಿತು. ಮಕ್ಕಳ ಪೋಷಕರು, ಶಿಕ್ಷಕರು, ಅಂಗನವಾಡಿ ಶಿಕ್ಷಕರು, ಸಹಾಯಕರಿಗೂ ವಿವಿಧ ರೀತಿಯ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ವಿಜೇತರಿಗೆ ಪದಕಗಳನ್ನು ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಿ ವೇದಿತ ಪೊನ್ನಮ್ಮ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಕಾಂತೂರು-ಮೂರ್ನಾಡು ಗ್ರಾ.ಪಂ. ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷೆ ದಿವ್ಯ, ಶಾಲಾ ಶಿಕ್ಷಕ ರಾಜೇಶ್, ದಸರಾ ಸಾಂಸ್ಕೃತಿಕ ಸಮಿತಿಯ ಸಂಚಾಲಕ ತೆನ್ನಿರಾ ಮೈನಾ, ನವೆಂಬರ್‌ನಲ್ಲಿ ನಿವೃತ್ತಿ ಹೊಂದುವ ಹಿರಿಯ ಮುಖ್ಯ ಶಿಕ್ಷಕಿ ವಿ.ಕೆ. ಲಲಿತಾ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನಿತರಾದ ತೆನ್ನಿರ ಮೈನಾ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಅಂಗನವಾಡಿ ಕೇಂದ್ರದ ಮಕ್ಕಳ ಪ್ರತಿಭೆಗೆ ಹಾಗೂ ಅಂಗನವಾಡಿ ಶಿಕ್ಷಕರು ಮತ್ತು ಸಹಾಯಕಿಯರ ಪರಿಶ್ರಮಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಎಸ್‌ಜಿಎಂಸಿ ಅಧ್ಯಕ್ಷ ದಿನೇಶ್ ಪಾಲ್ಗೊಂಡಿದ್ದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಿದಂತ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷೆ ದಿವ್ಯ, ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಹಾಗೂ ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿಯ ಸರ್ವ ಸದಸ್ಯರಿಗೂ, ಅಮ್ಮ ಮೆಡಿಕಲ್ಸ್ ಮೂರ್ನಾಡು ಇವರ ಸಹಕಾರವನ್ನು ಸ್ಮರಿಸಿದರು.

ಆಟೋಟ ಸ್ಪರ್ಧೆಗಳನ್ನು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರೇಮಲತಾ ನಡೆಸಿಕೊಟ್ಟರು. ನಿರೂಪಣೆಯನ್ನು ಶಾಲಾ ವಿದ್ಯಾರ್ಥಿನಿ ನಿಶಾ ಪೊನ್ನಮ್ಮ, ಪ್ರಾರ್ಥನೆ ಶಾಲಾ ವಿದ್ಯಾರ್ಥಿನಿ ಸುಕನ್ಯಾ, ಸ್ವಾಗತ ಮತ್ತು ವಂದನಾರ್ಪಣೆ ಶಾಲಾ ವಿದ್ಯಾರ್ಥಿನಿಯರಾದ ರಚನಾ ಮತ್ತು ಸಿಂಚನ ನಡೆಸಿಕೊಟ್ಟರು. ಕಾರ್ಯಕ್ರಮಕ್ಕೆ ಶ್ರಮಿಸಿದ ಬಾಡಗ ಅಂಗನವಾಡಿ ಕಾರ್ಯಕರ್ತೆ ಜಯಂತಿ ಬಿ.ಬಿ., ಗಾಂಧಿನಗರ ಅಂಗನವಾಡಿ ಕಾರ್ಯಕರ್ತೆ ಚೈತ್ರ ಪಿ.ಯು., ಶಾಸ್ತಿçÃನಗರ ಕಾರ್ಯಕರ್ತ ಪ್ರಮೀಳಾ, ಬಾಡಗ ಸೆಕೆಂಡ್ ಅಂಗನವಾಡಿ ಕಾರ್ಯಕರ್ತೆ ಭವ್ಯರವರನ್ನು ಪದಕಗಳ ನೀಡುವುದರ ಮೂಲಕ ಗೌರವಿಸಲಾಯಿತು. ಮೂರ್ನಾಡು ವೃತ್ತದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.