ಶನಿವಾರಸಂತೆ, ನ. ೨೧: ಶನಿವಾರಸಂತೆ ಗ್ರಾಮ ಪಂಚಾಯಿತಿ ವತಿಯಿಂದ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಮಳಿಗೆಗಳು ಹಾಗೂ ಗ್ರಾಮ ವೈಜ್ಞಾನಿಕ ಕಸ ವಿಲೇವಾರಿ ಘಟಕದ ಉದ್ಘಾಟನಾ ಸಮಾರಂಭ ತಾ.೨೨ ರಂದು (ಇಂದು) ಬೆಳಿಗ್ಗೆ ೧೦-೩೦ ಗಂಟೆಗೆ ನಡೆಯಲಿದೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಮಳಿಗೆಗಳನ್ನು ಹಾಗೂ ಸಮಾರಂಭ ಉದ್ಘಾಟಿಸಲಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಭೋಜೇಗೌಡ ಹಾಗೂ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಯಣ್ಣ ಪಾಲ್ಗೊಳ್ಳುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.