ಕುಶಾಲನಗರ, ನ. ೨೧: ೨೦೨೪ ಜನವರಿ ೩ಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಭೇಟಿ ನೀಡಲಿದ್ದು ಈ ಸಂದರ್ಭ ಕುಶಾಲ ನಗರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಘಟಕಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ತಿಳಿಸಿದ್ದಾರೆ.

ಅವರು ಕುಶಾಲನಗರದಲ್ಲಿ ಶಾಸಕರ ಕಚೇರಿ ಉದ್ಘಾಟನೆ ಸಂದರ್ಭ ಮಾತನಾಡಿ, ಕುಶಾಲನಗರ ಬಸವನ ಹಳ್ಳಿ ಬಳಿ ಸರಕಾರಿ ಬಸ್ ಡಿಪೋ ನಿರ್ಮಾಣಕ್ಕೆ ಈಗಾಗಲೇ ಎಂಟು ಕೋಟಿ ರೂ. ಅನುದಾನ ಸರಕಾರದಿಂದ ದೊರೆತಿದೆ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ.

ಜಿಲ್ಲೆಯಲ್ಲಿ ಹೆಚ್ಚುವರಿ ೩ ಇಂದಿರಾ ಕ್ಯಾಂಟೀನ್ ಆರಂಭಗೊಳ್ಳಲಿದ್ದು, ಕುಶಾಲನಗರ ಮಡಿಕೇರಿ ಮತ್ತು ಸೋಮವಾರಪೇಟೆಯಲ್ಲಿ ಜಾಗ ಗುರುತಿಸಲಾಗಿದೆ. ಕುಶಾಲನಗರದಲ್ಲಿ ಸರಕಾರಿ ಬಸ್ ನಿಲ್ದಾಣ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಾ ಗುವುದು ಎಂದು ಹೇಳಿದರು..

ಕುಶಾಲನಗರದಲ್ಲಿ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರ ತೆರೆಯಲಾಗುವುದು ಎಂದು ಶಾಸಕರು ಮಾಹಿತಿ ನೀಡಿ ದರು. ಕುಶಾಲನಗರ ಮುಳ್ಳುಸೋಗೆ ವ್ಯಾಪ್ತಿಗೆ ನಾಗರಿಕರಿಗೆ ಶುದ್ಧ ಕುಡಿ ಯುವ ನೀರು ಒದಗಿಸುವ ನಿಟ್ಟಿನಲ್ಲಿ ರೂ. ೪೦ ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಕುಶಾಲ ನಗರ ಪುರಸಭಾ ವ್ಯಾಪ್ತಿಯ ಮುಳ್ಳು ಸೋಗೆ ಗ್ರಾಮ ನಾಗರಿಕರ ಸಮಸ್ಯೆಗಳ ಬಗ್ಗೆ ಚರ್ಚೆಗೆ ಸ್ಥಳೀಯ ಜನಪ್ರತಿ ನಿಧಿಗಳ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಹಾರಂಗಿ ಕುಶಾಲನಗರ ಕಾಂಕ್ರೀಟ್ ರಸ್ತೆ ಸದ್ಯದಲ್ಲಿಯೇ ಪೂರ್ಣಗೊಳ್ಳಲಿದೆ. ಹಾರಂಗಿ ಜಲಾಶಯದ ಹೊಳೆತ್ತುವ ಕಾಮಗಾರಿ ವಿಳಂಬಗೊಳ್ಳುತ್ತಿದೆ. ಅಂದಾಜು ರೂ. ೧೪೦ ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯುತ್ತಿದ್ದು ಗುತ್ತಿಗೆ ದಾರರ ನಿರ್ಲಕ್ಷö್ಯದಿಂದ ವಿಳಂಬ ಗೊಳ್ಳುತ್ತಿದೆ, ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಗುತ್ತಿಗೆದಾರರನ್ನು ಬದಲಿಸಲು ಪ್ರಸ್ತಾವನೆ ಸಲ್ಲಿಸಲಾ ಗುವುದು ಎಂದು ತಿಳಿಸಿದರು.

ಈ ಸಂದರ್ಭ ಪಕ್ಷದ ಪ್ರಮುಖ ರಾದ ಕೆ.ಪಿ. ಚಂದ್ರಕಲಾ, ವಿ.ಪಿ. ಶಶಿ ಧರ್, ಪ್ರಮೋದ್ ಮುತ್ತಪ್ಪ, ಕೆ.ಕೆ. ಮಂಜು ನಾಥ್ ಕುಮಾರ್ ಮತ್ತಿತರರು ಇದ್ದರು.