ಮಡಿಕೇರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಾಪೋಕ್ಲು ವೃತ್ತದ ಮಕ್ಕಳ ದಿನಾಚರಣೆ ಮತ್ತು ಅಂಗನವಾಡಿ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಬೇಂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಿಲನ ಹಾಗೂ ಕಾರ್ಯನಿರ್ವಹಣಾಧಿಕಾರಿ ಬಿಪಿನ್ ಹಾಗೂ ಸದಸ್ಯೆ ಬಿಂದು, ಶಾಲಾ ಅಧ್ಯಾಪಕರು ಹಾಗೂ ಆರೋಗ್ಯ ಇಲಾಖೆಯವರು ಪಾಲ್ಗೊಂಡಿದ್ದರು.

ಸುಮಾರು ೮೦ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶೀಲ ಪ್ರಾಸ್ತಾವಿಕ ಭಾಷಣ ಹಾಗೂ ಸದಸ್ಯೆ ಬಿಂದು, ಶಾಲಾ ಅಧ್ಯಾಪಕರು ಹಾಗೂ ಆರೋಗ್ಯ ಇಲಾಖೆಯವರು ಪಾಲ್ಗೊಂಡಿದ್ದರು.

ಸುಮಾರು ೮೦ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶೀಲ ಪ್ರಾಸ್ತಾವಿಕ ಭಾಷಣ ಹಾಗೂ ಸದಸ್ಯೆ ಬಿಂದು, ಶಾಲಾ ಅಧ್ಯಾಪಕರು ಹಾಗೂ ಆರೋಗ್ಯ ಇಲಾಖೆಯವರು ಪಾಲ್ಗೊಂಡಿದ್ದರು.

ಸುಮಾರು ೮೦ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶೀಲ ಪ್ರಾಸ್ತಾವಿಕ ಭಾಷಣ ಹಾಗೂ ಸದಸ್ಯೆ ಬಿಂದು, ಶಾಲಾ ಅಧ್ಯಾಪಕರು ಹಾಗೂ ಆರೋಗ್ಯ ಇಲಾಖೆಯವರು ಪಾಲ್ಗೊಂಡಿದ್ದರು.

ಸುಮಾರು ೮೦ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶೀಲ ಪ್ರಾಸ್ತಾವಿಕ ಭಾಷಣ ಭೂಷಣಧಾರಿಗಳಾಗಿ ಮಕ್ಕಳು ನಾನಾ ರೀತಿಯ ನಾಟಕ, ನೃತ್ಯ, ಅಭಿನಯಗೀತೆ, ಭಾಷಣ ಮುಂತಾದ ಚಟುವಟಿಕೆಗಳ ಮೂಲಕ ಎಲ್ಲರನ್ನು ಮನರಂಜಿಸಿದರು. ಮಕ್ಕಳಿಗೆ ಸಿಹಿ ಊಟ ನೀಡಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಸದಸ್ಯರು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ಚೆಯ್ಯಂಡಾಣೆ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವೀರಾಜಪೇಟೆಯ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವಾರ್ಡನ್ ಸುಮಯ್ಯ ಕೆ.ಎಂ. ದಿನದ ಮಹತ್ವದ ಕುರಿತು ಮಾತನಾಡಿದರು. ವಿವಿಧ ಆಟೋಟ ಸ್ಪರ್ಧೆ, ನೃತ್ಯ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ನಿಲಯದ ಸಿಬ್ಬಂದಿಗಳು ಹಾಜರಿದ್ದರು.ವೀರಾಜಪೇಟೆ: ಇಲ್ಲಿನ ಮೌಂಟೇನ್ ವ್ಯೂ ಶಾಲೆಯಲ್ಲಿ ಮಕ್ಕಳ ದಿನವನ್ನು ಆಚರಿಸಲಾಯಿತು. ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಕ್ಕಳು ಚಾಚಾ ನೆಹರೂ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಆಗಮಿಸಿದ್ದ ವೀರಾಜಪೇಟೆ ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಜಿತ ಕಾರ್ಯಪ್ಪ ಮಾತನಾಡಿ, ಸ್ವಾತಂತ್ರ÷್ಯ ಭಾರತವು ಅಭಿವೃದ್ಧಿಯತ್ತ ಸಾಗಬೇಕೆಂದರೆ ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ಉತ್ತಮ ಆರೋಗ್ಯ, ಮಕ್ಕಳ ಹಕ್ಕು ರಕ್ಷಣೆ, ಶಿಕ್ಷೆ ರಹಿತ ಶಿಕ್ಷಣ, ಪರಿಶುದ್ಧ ಪ್ರೇಮ ಕಲಿಕೆ, ಬದುಕುವ, ವಿಕಸಿಸುವ, ಭಾಗವಹಿಸುವ ಹಕ್ಕುಗಳ ಅನುಪಾಲನೆ ಮಾಡಿದಾಗ ಮಾತ್ರ ಸಾಧ್ಯ ಎಂದರು.

ಮುಖ್ಯ ಅತಿಥಿ ಹಾಗೂ ಮತ್ತೋರ್ವ ತೀರ್ಪುಗಾರರಾಗಿ ಆಗಮಿಸಿದ್ದ ವೀರಾಜಪೇಟೆಯ ವಕೀಲರಾದ ಅನುಪಮ ಕಿಶೋರ್ ಮಾತನಾಡಿ, ನಮ್ಮ ದೇಶದಲ್ಲಿ ವಿಭಿನ್ನ ಸಂಸ್ಕೃತಿ ಆಚಾರ ವಿಚಾರ ಅಡಗಿದೆ. ದೇಶದ ಭವಿಷ್ಯದಲ್ಲಿ ಮಕ್ಕಳ ಪಾತ್ರ ಮಹತ್ವ. ಮಕ್ಕಳು ವಿದ್ಯಾವಂತರಾಗಬೇಕು. ಶಿಕ್ಷಣದ ಮೂಲಕ ದೇಶದ ಭವಿಷ್ಯ ರೂಪಿಸಬಹುದು ಎಂದರು.

ಮತ್ತೋರ್ವ ಮುಖ್ಯ ಅತಿಥಿ ಮಡಿಕೇರಿಯ ರಾಜೇಶ್ವರಿ ಶಾಲೆಯ ಮುಖ್ಯೋಪಾಧ್ಯಾಯಿನಿ ದಿವ್ಯ ಅರೋರಾ ಮಾತನಾಡಿ, ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿರುವುದು ಮಕ್ಕಳಲ್ಲಿ ಸ್ಪರ್ಧಾ ಮನೊಭಾವ ಬೆಳೆಯಲು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶು ಪಾಲರು, ಸಂಸ್ಥೆಯ ಕಾರ್ಯದರ್ಶಿ ಗಳು ಆದ ಸಯ್ಯೆದ್ ನೆಖಾತ್ ನಜೀರ್ ಅವರು, ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಭಾಗವಹಿಸು ವುದರ ಮೂಲಕ ಶಾಲೆಗೂ ಪೋಷಕರಿಗೂ ನಮ್ಮ ನಾಡಿಗೆ ಕೀರ್ತಿ ತರುವಂತಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು ರಾಜ್ಯಗಳ ಸಂಸ್ಕೃತಿ, ಆಚಾರ-ವಿಚಾರ, ಭಾಷೆ, ಉಡುಗೆ-ತೊಡುಗೆಗಳನ್ನು ಬಿಂಬಿಸುವ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಎಲ್ಲವೂ ಮಕ್ಕಳಿಂದಲೇ ಆಯೋಜಿಸಿ ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು. ವೇಷಭೂಷಣ ಸ್ಪರ್ಧೆಗಳಲ್ಲಿ ವಿಜೇತ ಎಲ್ಲಾ ಮಕ್ಕಳಿಗೂ ಶಾಲಾ ವತಿಯಿಂದ ಬಹುಮಾನಗಳನ್ನು ನೀಡಲಾಯಿತು. ರುಚಿ ಶುಚಿ ಉಪಹಾರ, ಭೋಜನ ವ್ಯವಸ್ಥೆ ಸೇರಿದಂತೆ ಎಲ್ಲಾ ಪುಟಾಣಿಗಳು ಮಕ್ಕಳ ದಿನದ ಆನಂದವನ್ನು ಸವಿದರು.

ಪುಟ್ಟ ಮಕ್ಕಳಿಗೆ ಬಣ್ಣದ ಚಿತ್ರಕಲೆ, ಹಾಡು, ಅಭಿನಯಗೀತೆ, ಕಥೆ ಹೇಳುವುದು ಬಣ್ಣ ಬಣ್ಣದ ಬಲೂನು ಶೃಂಗಾರ ಇವುಗಳ ನಡುವೆ ಸುಮಾರು ನೂರು ಪುಟಾಣಿ ಗಳು ಮಕ್ಕಳ ದಿನಾಚರಣೆಯಲ್ಲಿ ಸಂಭ್ರಮಿಸಿದರು.

ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಸಯ್ಯೆದ್ ಕಶ್ಮೀರ ನಜೀರ್, ಉಪಾಧ್ಯಕ್ಷರಾದ ಸಯ್ಯೆದ್ ಕರೀನ ನಜೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.ಮುಳ್ಳೂರು: ಸಮೀಪದ ಆಲೂರು-ಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯನ್ನು ಜಂಟಿಯಾಗಿ ಆಚರಿಸಲಾಯಿತು.

೬೮ನೇ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ಶಾಲೆಯ ಮುಂಭಾಗದ ಧ್ವಜಸ್ತಂಭದಲ್ಲಿ ಕನ್ನಡ ಧ್ವಜಾರೋಹಣವನ್ನು ನೆರವೇರಿಸಿದ ಬಳಿಕ ಶಾಲೆಯ ವಿದ್ಯಾರ್ಥಿಗಳು ಆಲೂರು-ಸಿದ್ದಾಪುರ ಜಂಕ್ಷನ್‌ವರೆಗೆ ಮೆರವಣಿಗೆ ತೆರಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಕನ್ನಡ ಗಾಯನ, ಕನ್ನಡ ನಾಡು ನುಡಿ, ಸಂಸ್ಕೃತಿ ಕುರಿತಾದ ವಿವಿಧ ನೃತ್ಯರೂಪಕಗಳು, ಕಿರು ನಾಟಕ ಪ್ರದರ್ಶನ ಇನ್ನು ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಗ್ರಾಮಸ್ಥರು ಮತ್ತು ಸಾರ್ವಜನಿಕರನ್ನು ರಂಜಿಸಿದರು.

ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ದಿನದ ಮಹತ್ವವಾಗಿದ್ದ ಹಿನ್ನೆಲೆಯಲ್ಲಿ ಸದರಿ ವಿದ್ಯಾಸಂಸ್ಥೆಯು ತಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಸಂಪೂರ್ಣ ಹೊಣೆಗಾರಿಕೆಯ ಅವಕಾಶ ನೀಡಿತ್ತು. ವಿದ್ಯಾರ್ಥಿಗಳು ಶಾಲೆಯು ನೀಡಿದ ಅವಕಾಶವನ್ನು ಉತ್ತಮವಾಗಿ ಸದ್ಬಳಕೆ ಮಾಡುವ ಮೂಲಕ ಶಾಲೆಯ ಪೋಷಕರ, ಗ್ರಾಮಸ್ಥರ ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

ಈ ಸಂದರ್ಭ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯ ಮೇನೆಜಿಂಗ್ ಟ್ರಸ್ಟಿ ಹೆಚ್.ಕೆ. ಶಿವಪ್ರಕಾಶ್, ಪೋಷಕರ ಸಮಿತಿ ಪದಾಧಿಕಾರಿಗಳು, ಸದಸ್ಯರು, ಶಿಕ್ಷಕರ ವರ್ಗದವರು, ಗ್ರಾಮಸ್ಥರು ಸಾರ್ವಜನಿಕರು ಪಾಲ್ಗೊಂಡಿದ್ದರು.ಶನಿವಾರಸAತೆ: ಪಟ್ಟಣದ ಸುಪ್ರಜ ಗುರುಕುಲ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾ ಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಪ್ರಿಕೆಜಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.

ಪ್ರಾಂಶುಪಾಲೆ ಡಿ. ಸುಜಲಾದೇವಿ ಮಾತನಾಡಿ, ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಕ್ಕಳ ಮನಸ್ಥಿತಿ ಹಾಗೂ ಅಳತೆ ಮೀರಿದ ಅವರ ವರ್ತನೆಯನ್ನು ಪೋಷಕರು ಸದಾ ಗಮನಿಸುತ್ತಿರಬೇಕು. ಮನಸ್ಥಿಯನ್ನು ಅರಿತು ಮಕ್ಕಳ ಮೇಲೆ ಹೆಚ್ಚಿನ ನಿಗಾ ವಹಿಸುವುದು ಪೋಷಕರ ಜವಾಬ್ದಾರಿಯಾಗಿದೆ ಎಂದರು.

ಹಿರಿಯ ಶಿಕ್ಷಕಿ ಕೆಂಚಮ್ಮ, ಕನ್ನಡ ರಾಜ್ಯೋತ್ಸವ ಆಚರಣೆಯ ಮಹತ್ವ ಹಾಗೂ ಭಾಷೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ, ರಂಜಿಸಿದರು. ಕಾರ್ಯಕ್ರಮದ ಪ್ರಯುಕ್ತ ನಡೆಸಲಾಗಿದ್ದ ತಾಲೂಕು ಮಟ್ಟದ ಕನ್ನಡ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಹಿರಿಯ ಶಿಕ್ಷಕಿ ಆಶಾ, ಸಹಶಿಕ್ಷಕರು, ಜಾನಪದ ಪರಿಷತ್ ಹೋಬಳಿ ಘಟಕದ ನಿರ್ದೇಶಕ ಸಿ. ಪ್ರಕಾಶ್ಚಂದ್ರ ಇತರರು ಉಪಸ್ಥಿತರಿದ್ದರು.ನಾಪೋಕ್ಲು: ಇಲ್ಲಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸ ಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕ ಕಾಳಯ್ಯ, ಶಿಕ್ಷಕಿ ಕೆ.ಎಸ್. ಶೋಭಾ, ಪ್ರಾಂಶುಪಾಲೆ ಬಿ.ಎಂ. ಶಾರದ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿ ಆಫ್ರಿನ ಕೆ.ಎ. ನೆಹರು ಕುರಿತು ಮಾತ ನಾಡಿದರು. ಸಭೆಯ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ಹರ್ಷಿತ ಕುಶಾಲಪ್ಪ ವಹಿಸಿದ್ದರು. ವಿದ್ಯಾರ್ಥಿಗಳಿಗಾಗಿ ಛದ್ಮವೇಷ, ಹಾಡುಗಾರಿಕೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಶಿಕ್ಷಕಿ ಶೋಭ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಮರ್ಲಿನ್ ಪ್ರಿಯ ವಂದಿಸಿದರು.ಕಾಜೂರು: ಕಾಜೂರು ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಸರಳಕುಮಾರಿ ದಿನದ ಕುರಿತು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಶಾಲಾ ಮಂತ್ರಿಮAಡಲದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ತೀರ್ಥಶ್ರೀಯ ಪ್ರಾರ್ಥಿಸಿ, ರೋಸ್ನಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮಕ್ಕಳು ಮತ್ತು ಶಿಕ್ಷಕರಿಂದ ಚಾಚಾ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ನಂತರ ಮಕ್ಕಳಿಂದ ಭಾಷಣ, ನೃತ್ಯ, ಹಾಡು, ವೇಷಭೂಷಣ ಸ್ಪರ್ಧೆಗಳು ನಡೆಯಿತು. ೧ ರಿಂದ ೭ನೇ ತರಗತಿ ವಿದ್ಯಾರ್ಥಿಗಳಿಗೆ ಮನರಂಜನಾ ಆಟಗಳನ್ನು ಆಡಿಸಲಾಯಿತು. ನಂತರ ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಸ್ಥಾನ ಪಡೆದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಅಜಿತ್ ಕುಮಾರ್, ಅನುಸೂಯ, ಭಾರತಿ, ವೇದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹರ್ಷಿಕ ವಂದಿಸಿದರು.ಸೋಮವಾರಪೇಟೆ, ನ. ೨೧: ಇಲ್ಲಿನ ಜೇಸೀ ಪುಷ್ಪಗಿರಿ ವತಿಯಿಂದ ಸ್ಥಳೀಯ ನಂಜಮ್ಮ ಕಲ್ಯಾಣ ಮಂಟಪ ದಲ್ಲಿ ಆಯೋಜನೆಗೊಂಡಿರುವ ಭರವಸೆಯ ಜೇಸಿ ಸಪ್ತಾಹದಲ್ಲಿ ಮೂಡಿಬಂದ ಮಕ್ಕಳ ಕವಿಗೋಷ್ಠಿ ಗಮನ ಸೆಳೆಯಿತು.

ಮಕ್ಕಳು ಸ್ವರಚಿತ ಕವನಗಳನ್ನು ವಾಚಿಸಿ ಮೆಚ್ಚುಗೆ ಪಡೆದರು. ಮಕ್ಕಳ ಸಾಹಿತ್ಯಾಸಕ್ತಿಗೆ ಕೇಳುಗರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು. ಕಾರ್ಯ ಕ್ರಮದ ಮುಖ್ಯ ಅತಿಥಿಯಾಗಿದ್ದ ಯುವ ಸಾಹಿತಿ ಚಂದನ್ ನಂದರಬೆಟ್ಟು ಮಾತನಾಡಿ, ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಬೇಕು. ಆಧುನಿಕ ಯುಗದಲ್ಲಿ ಮೊಬೈಲ್ ದಾಸರಾಗಿ ರುವ ಮಕ್ಕಳಲ್ಲಿ ಸಾಹಿತ್ಯದ ಅರಿವು ಮೂಡಬೇಕೆಂದರೆ ಹಿರಿಯ ಸಾಹಿತಿಗಳ ಕಾದಂಬರಿಗಳು, ಬರಹ ಗಳು ಹಾಗೂ ಪತ್ರಿಕೆಗಳ ಓದುವಿಕೆ ಮುಖ್ಯ ಎಂದರು. ಜೇಸಿ ನಡೆಸುತ್ತಿರುವ ಇಂತಹ ಕಾರ್ಯಕ್ರಮಗಳಿಂದ ಮಕ್ಕಳ ಪ್ರತಿಭೆ ಹೊರ ಪ್ರಪಂಚಕ್ಕೆ ತಿಳಿಯು ತ್ತದೆ. ಇಂತಹ ಕಾರ್ಯಕ್ರಮಗಳು ಹೆಚ್ಚು ಆಯೋಜನೆಗೊಳ್ಳಬೇಕು ಎಂದು ಅಭಿಪ್ರಾಯಿಸಿದರು. ಸೋಮವಾರ ಪೇಟೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಡಿ. ವಿಜೇತ್ ಮಾತನಾಡಿ, ಕನ್ನಡ ನಾಡು, ನುಡಿಗೆ ಸಂಬAಧಿಸಿದ ಮಕ್ಕಳ ಕವನಗಳಿಗೆ ಅವಕಾಶ ಸಿಕ್ಕಿರುವುದು ಶ್ಲಾಘನೀಯ ಎಂದರು. ಅಧ್ಯಕ್ಷತೆ ವಹಿಸಿದ್ದ ಎಸ್.ಆರ್. ಸ್ಪೂರ್ತಿ ಅವರು ಮಾತನಾಡಿ, ಸಾಹಿತ್ಯ ರಚಿಸಲು ಓದುವಿಕೆ ಅಗತ್ಯ ಎಂದು ಅಭಿಪ್ರಾಯಿಸಿದರು. ತಾಯಿ, ಕನ್ನಡ, ದೇಶ, ಪ್ರಕೃತಿಯ ಕುರಿತಾದ ಕವನಗಳು ಮಕ್ಕಳ ಮನಸ್ಸಿನಿಂದ ಮೂಡಿದ್ದು ವಿಶೇಷವಾಗಿತ್ತು. ಮಕ್ಕಳಿಗೆ ಚಿತ್ರಕಲೆ ಹಾಗೂ ಬರವಣಿಗೆ ಸ್ಪರ್ಧೆ ನಡೆಸಲಾಯಿತು. ವಿವಿಧ ಶಾಲಾ ಕಾಲೇಜುಗಳ ಮಕ್ಕಳು ಕಾರ್ಯಕ್ರಮ ದಲ್ಲಿ ಹಾಜರಿದ್ದರು. ಜೆಸಿಐ ಪುಷ್ಪಗಿರಿ ಸೋಮವಾರಪೇಟೆಯ ರುಬೀನಾ, ನಿಕಟಪೂರ್ವಾ ಧ್ಯಕ್ಷ ನೆಲ್ಸನ್ ಡಿಸೋಜಾ, ಕಾರ್ಯ ದರ್ಶಿ ಜಗದಾಂಭ ಗುರುಪ್ರಸಾದ್, ಜೆಸಿಐ ಪವಿತ್ರ ಲಕ್ಷ್ಮೀಕುಮಾರ್, ಯೋಜನಾ ನಿರ್ದೇಶಕಿ ವಿನುತಾ ಸುದೀಪ್ ಹಾಗೂ ತೀರ್ಪುಗಾರರಾದ ಪ್ರೆöÊಸಿ ಹಾಗೂ ಚರಣ್ ಬಲ್ಯದ ಉಪಸ್ಥಿತರಿದ್ದರು.

ಶನಿವಾರಸಂತೆ, ನ. ೨೧: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆ ವತಿಯಿಂದ ಅರಕಲಗೂಡಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶನಿವಾರಸಂತೆಯ ವಿಘ್ನೇಶ್ವರ ವಿದ್ಯಾಸಂಸ್ಥೆ, ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆ ಹಾಗೂ ಕಾವೇರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಘ್ನೇಶ್ವರ ಶಾಲೆಯ ಜೀವನ್ ಕಥಾ ಮತ್ತು ಕುಮಿತೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ, ಗುರುದತ್ ಕುಮಿತೆಯಲ್ಲಿ ಪ್ರಥಮ ಮತ್ತು ಕಥಾದಲ್ಲಿ ತೃತೀಯ ಸ್ಥಾನ ಹಾಗೂ ಸಾನಿಕಾ ಗೌಡ ಕಥಾದಲ್ಲಿ ಪ್ರಥಮಸ್ಥಾನ ಗಳಿಸಿರುತ್ತಾರೆ. ಸೇಕ್ರೆಡ್ ಹಾರ್ಟ್ ಶಾಲೆಯ ಚಿನ್ಮಯ್ ಕಥಾದಲ್ಲಿ ಪ್ರಥಮ ಮತ್ತು ಕುಮಿತೆಯಲ್ಲಿ ತೃತೀಯ ಸ್ಥಾನ ಹಾಗೂ ಕಾವೇರಿ ಕಾಲೇಜಿನ ಮನೀಶ್ ಕಥಾದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ.