ವೀರಾಜಪೇಟೆ, ನ. ೨೧: ಪ್ರತಿಭೆ ಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಸೆಂಟ್ ಆನ್ಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಐಸಾಕ್ ರತ್ನಾಕರ್ ಅಭಿಪ್ರಾಯಪಟ್ಟರು.

ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ವೀರಾಜಪೇಟೆ ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಕಾರ್ಯಕ್ರಮಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಗುರುತಿಸಲಾಗುತ್ತದೆ. ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕುವುದರಲ್ಲಿ ಪೋಷಕರು, ಶಿಕ್ಷಕರು ಮಹತ್ವವಾದ ಪಾತ್ರವನ್ನು ನಿರ್ವಹಿಸುತ್ತಾರೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮೀಣ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿನ ಪ್ರತಿಭೆ ಗುರುತಿಸಬಹುದಾಗಿದೆ ಎಂದರು.

ವೀರಾಜಪೇಟೆ ತಾಲೂಕು ತಹಶೀಲ್ದಾರ್ ಹೆಚ್.ಎನ್. ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ತೊಡಗಬೇಕು.

ಪ್ರತಿಯೊಂದು ಮಗುವು ಕಲೆ, ಸಂಗೀತ ಮತ್ತು ಚಿತ್ರಕಲೆ ಇಂತಹ ವಿಭಿನ್ನ ಕಲೆಗಳನ್ನು ಹೊಂದಿರುತ್ತದೆ ಇದನ್ನು ನಾವು ಪ್ರೋತ್ಸಾಹಿಸಿದಾಗ ಮಕ್ಕಳಲ್ಲಿನ ಪ್ರತಿಭೆ ಹೊರಹೊಮ್ಮಲಿದೆ. ಆದರೆ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇಂತಹ ಅವಕಾಶಗಳು ಇರುವುದಿಲ್ಲ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಸಂತ ಅನ್ನಮ್ಮ ಶಾಲೆಯ ಮುಖ್ಯ ಶಿಕ್ಷಕ ಬೆನ್ನಿ, ಜಿಲ್ಲಾ ಅನುದಾನಿತ ನೌಕರರ ಸಂಘದ ಅಧ್ಯಕ್ಷ ಪಿ.ಎ. ಪ್ರಭುಕುಮಾರ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎ.ವಿ. ಮಂಜುನಾಥ್, ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ತಮ್ಮಯ್ಯ, ತಹಶೀಲ್ದಾರ್ ಹೆಚ್.ಎನ್. ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ತೊಡಗಬೇಕು.

ಪ್ರತಿಯೊಂದು ಮಗುವು ಕಲೆ, ಸಂಗೀತ ಮತ್ತು ಚಿತ್ರಕಲೆ ಇಂತಹ ವಿಭಿನ್ನ ಕಲೆಗಳನ್ನು ಹೊಂದಿರುತ್ತದೆ ಇದನ್ನು ನಾವು ಪ್ರೋತ್ಸಾಹಿಸಿದಾಗ ಮಕ್ಕಳಲ್ಲಿನ ಪ್ರತಿಭೆ ಹೊರಹೊಮ್ಮಲಿದೆ. ಆದರೆ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇಂತಹ ಅವಕಾಶಗಳು ಇರುವುದಿಲ್ಲ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಸಂತ ಅನ್ನಮ್ಮ ಶಾಲೆಯ ಮುಖ್ಯ ಶಿಕ್ಷಕ ಬೆನ್ನಿ, ಜಿಲ್ಲಾ ಅನುದಾನಿತ ನೌಕರರ ಸಂಘದ ಅಧ್ಯಕ್ಷ ಪಿ.ಎ. ಪ್ರಭುಕುಮಾರ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎ.ವಿ. ಮಂಜುನಾಥ್, ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ತಮ್ಮಯ್ಯ, ಕ್ಲಸ್ಟರ್‌ಗೆ ಸೇರಿದ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸ್ದಿರು.

ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವನಜಾಕ್ಷಿ ಸ್ವಾಗತಿಸಿದರೆ, ಸಿಆರ್‌ಪಿಗಳಾದ ಅನಿತಾ ಕುಮಾರಿ, ಕರುಂಬಯ್ಯ, ಜೀವನ್ ಅವರು ನಿರೂಪಿಸಿದರೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯತ್ರಿ ವಂದಿಸಿದರು.

ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್ ಪ್ರಾರ್ಥಿಸಿದರು. ಬೇರೆ ಬೇರೆ ವೇದಿಕೆಗಳಲ್ಲಿ ವೈಯಕ್ತಿಕ ಸ್ಪರ್ಧೆ ಹಾಗೂ ಗುಂಪು ಸ್ಪರ್ಧೆಗಳು ನಡೆದವು.