ಶನಿವಾರಸAತೆ, ನ. ೨೧: ಗ್ರಂಥಾಲಯ ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವ ಮೂಲಕ ಶೈಕ್ಷಣಿಕ ಪ್ರಗತಿ ಸಾಧಿಸಬಹುದು ಎಂದು ದುಂಡಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ ಅಭಿಪ್ರಾಯ ವ್ಯಕ್ತಪಡಿಸಿದರು.

ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯದಲ್ಲಿ ನಡೆದ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಪುಸ್ತಕಗಳು ನಾಡಿನ ಸಂಸ್ಕೃತಿಯ ಪ್ರತೀಕವಾಗಿವೆ. ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯದಲ್ಲಿ ಇಂಟರ್‌ನೆಟ್ ವ್ಯವಸ್ಥೆ ಇರುವ ಕಂಪ್ಯೂಟರ್, ಪತ್ರಿಕೆಗಳು, ಪುಸ್ತಕಗಳು ಇತ್ಯಾದಿ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಳಸಿಕೊಳ್ಳಬಹುದಾಗಿದೆ ಎಂದರು.

ಗ್ರAಥಪಾಲಕಿ ಎಸ್.ಪಿ.ದಿವ್ಯಾ ಮಾತನಾಡಿ, ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಆಚರಣೆ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸವನ್ನು ಉತ್ತೇಜಿಸುವ ಉತ್ತಮ ವೇದಿಕೆಯಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸತ್ಯವತಿ ದೇವರಾಜ್ ಪಾಲ್ಗೊಂಡಿದ್ದರು. ಶಾಲಾ ಶಿಕ್ಷಕಿ ಧನು, ಅಂಚೆ ಇಲಾಖೆ ನೌಕರ ತಮ್ಮೇಗೌಡ, ಅಂಗನವಾಡಿ ಶಿಕ್ಷಕಿ ಅಶ್ವಿನಿ, ಮೀನಾಕ್ಷಿ, ವೀಣಾ, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.