ಪಾಲಿಬೆಟ್ಟ, ಫೆ. ೯: ಆದಿವಾಸಿಗಳ ಅಭಿವೃದ್ಧಿ ಹಾಗೂ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದರ ಮೂಲಕ ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಇದನ್ನು ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಕರೆ ನೀಡಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಾಡಿ ನಿವಾಸಿಗಳ ಸಂಯುಕ್ತ ಆಶ್ರಯದಲ್ಲಿ ದಿಡ್ಡಳ್ಳಿ ಗಿರಿಜನ ಆಶ್ರಮ ಶಾಲೆಯ ೬೦ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯ ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಕಾಡಂಚಿನಲ್ಲಿ ವಾಸವಾಗಿರುವ ಆದಿವಾಸಿಗಳ ಗ್ರಾಮಗಳನ್ನು ಅಭಿವೃದ್ಧಿ ಕಾರ್ಯ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಹಂತ ಹಂತವಾಗಿ ನಡೆಯಲಿದೆ ಎಂದರು

ಜಿಲ್ಲಾ ಪಂಚಾಯಿತಿ ಮೂಲಕ ಈ ಭಾಗದ ಹಾಡಿಗೆ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಮಾಡಲಾಗುತ್ತಿದ್ದು, ಸದ್ಯದಲ್ಲೇ ಕಾಮಗಾರಿ ಪೂರ್ಣಗೊಳ್ಳಲಿದೆ. ಹಾಡಿ ಮುಖಂಡರುಗಳ ಬೇಡಿಕೆಯಂತೆ ಆಶ್ರಮ ಶಾಲೆಯ ಅಭಿವೃದ್ಧಿಗೆ ರೂ. ೬೦ ಲಕ್ಷ ಅನುದಾನ ಸರ್ಕಾರ ಬಿಡುಗಡೆಗೊಳಿಸಿದ್ದು ಆಶ್ರಮ ಶಾಲೆಯನ್ನು ಮತ್ತಷ್ಟು ಅಭಿವೃದ್ಧಿಯೊಂದಿಗೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು. ಈ ಸಂದರ್ಭ ಆಶ್ರಮ ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ವಾರ್ಷಿಕೋತ್ಸವ ಅಂಗವಾಗಿ ನಡೆದ ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರ ಅರುಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಅಂರ‍್ರಾಷ್ಟಿçÃಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್. ಹೊನ್ನೇಗೌಡ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಎ.ಎಂ. ನವೀನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್, ವನ್ಯಜೀವಿ ಛಾಯಾಗ್ರಾಹಕ ಕುಞಂಡ ಮಹೇಶ್ ಅಪ್ಪಯ್ಯ, ಮುಳಿಯ ವ್ಯವಸ್ಥಾಪಕ ಬಿ.ಎಸ್. ಕಿಶೋರ್, ಚೆನ್ನಯ್ಯನಕೋಟೆ ಗಾ.್ರಪಂ. ಅಭಿವೃದ್ಧಿ ಅಧಿಕಾರಿ ಬಿ.ಸಿ. ಪ್ರಕಾಶ್, ಶಾಲಾ ಮುಖ್ಯ ಶಿಕ್ಷಕ ಸಿದ್ದಲಿಂಗ ಶೆಟ್ಟಿ, ಆದಿವಾಸಿ ಮುಖಂಡರುಗಳಾದ ಜೆ.ಕೆ. ರಾಮು, ಜೆ.ಕೆ. ಅಪ್ಪಾಜಿ, ಜೆ.ಕೆ. ಮುತ್ತಮ್ಮ, ಲಿಂಗಮ್ಮ, ಇಂದಿರಾ, ಶಂಕರ ಪ್ರಮುಖರಾದ ಧರ್ಮಜ ಉತ್ತಪ್ಪ, ಕರವಟೀರ ಬೆಲ್ಲು ಮೇದಪ್ಪ ಮೂಡಗದ್ದೆ ಎಂ.ಕೆ. ಪೂಣಚ್ಚ, ರಾಕೇಶ್ ಸಾಗರ್, ಹೆಚ್.ಆರ್. ಅರ್ಜುನ್, ಬಾವ ಮಾಲ್ದಾರೆ, ಕುಮಾರ್, ಹನೀಫ್ ಶಾಲಾ ಸಹ ಶಿಕ್ಷಕರುಗಳಾದ ವೆಂಕಟಮೂರ್ತಿ, ಪವಿತ್ರ, ಲೋಹಿತ್, ಸಿಂಧು, ಪೂರ್ಣಿಮಾ, ವಿದ್ಯಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.