ಮಡಿಕೇರಿ, ಫೆ. ೧೦: ಪ್ರವಾಸೋದ್ಯಮ ಇಲಾಖೆಯಿಂದ ೨೦೨೩-೨೪ನೇ ಸಾಲಿನ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮದಡಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಹಾಗೂ ಮೊರಾರ್ಜಿ ದೇಸಾಯಿ ಹಾಗೂ ಕ್ರೆöÊಸ್ ವಸತಿ ಶಾಲೆಗಳಲ್ಲಿ ೮ನೇ ತರಗತಿಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ) ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿನ ಹಿಂದುಳಿದ ಅಲ್ಪಸಂಖ್ಯಾತ ಹಾಗೂ ಇತರ ವರ್ಗದ (ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ) ಮಡಿಕೇರಿ ತಾಲೂಕಿನ ೧೦೦, ವೀರಾಜಪೇಟೆ ತಾಲೂಕಿನ ೧೪೦, ಸೋಮವಾರಪೇಟೆ ತಾಲೂಕಿನ ೨೦೦ ಒಟ್ಟು ೪೮೦ ವಿದ್ಯಾರ್ಥಿಗಳಿಗೆ ರಾಜ್ಯದ ವಿವಿಧ ಪ್ರವಾಸಿ ಸ್ಥಳಗಳಿಗೆ ಪ್ರವಾಸ ಕೈಗೊಂಡರು.

ನಗರದ ಗಾಂಧಿ ಮೈದಾನದಲ್ಲಿ ಮಡಿಕೇರಿ ತಾಲೂಕಿನ ವಿದ್ಯಾರ್ಥಿಗಳಿಗೆ ಬೀಳ್ಕೊಟ್ಟು ಶುಭ ಕೋರಲಾಯಿತು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಎಂ. ಚಂದ್ರಕಾAತ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಅನಿತಾ ಭಾಸ್ಕರ್, ಶಿಕ್ಷಣಾಧಿಕಾರಿ ಎಂ. ಮಹಾದೇವ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಕ್ಷೇತ್ರ ಸಮನ್ವಯಾಧಿಕಾರಿ ಗುರುರಾಜು, ಶಿಕ್ಷಣ ಸಂಯೋಜಕ ಹರೀಶ್, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ಜತೀನ್ ಬೋಪಣ್ಣ ಇತರರು ಇದ್ದರು.

ಮೈಸೂರು, ಚಿತ್ರದುರ್ಗ, ಹಂಪಿ, ಬೇಲೂರು-ಹಳೇಬಿಡು, ಶ್ರವಣಬೆಳಗೋಳ ಮತ್ತಿತರ ಪ್ರವಾಸ ಕೇಂದ್ರಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ತಿಳಿಸಿದ್ದಾರೆ.