ಮಡಿಕೇರಿ, ಫೆ. ೧೦: ಮಡಿಕೇರಿ ನಗರಕ್ಕೆ ನೀರು ಸರಬರಾಜು ಆಗುವ ಮೂಲವಾದ ಕುಂಡಾಮೇಸ್ತಿçಯಲ್ಲಿನ ನೀರಿನ ಸಂಗ್ರಹ ಹಾಗೂ ಮೋಟಾರಿನ ಕಾರ್ಯನಿರ್ವಹಣೆಯನ್ನು ಎಂ.ಎಲ್.ಸಿ. ಸುಜಾ ಕುಶಾಲಪ್ಪ, ಮಾಜಿ ಶಾಸಕ ಅಪ್ಪಚ್ಚು ರಂಜನ್ ಹಾಗೂ ನಗರಸಭಾ ಪ್ರಮುಖರು ವೀಕ್ಷಿಸಿದರು. ಈ ಸಂದರ್ಭ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್ ಸೇರಿದಂತೆ ಸದಸ್ಯರುಗಳು ಹಾಜರಿದ್ದರು.