ಮಡಿಕೇರಿ, ಫೆ. ೧೦: ಜೀತ ಕಾರ್ಮಿಕ ಪದ್ಧತಿ ಎಂಬುದು ಒಂದು ಸಾಮಾಜಿಕ ಪಿಡುಗಾಗಿದ್ದು, ಅದರ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ. ಪ್ರಸಾದ್ ತಿಳಿಸಿದರು.
ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಶುಕ್ರವಾರ ನಗರದ ಜಿ.ಪಂ. ಸಭಾಂಗಣದಲ್ಲಿ ನಡೆದ ‘ಜೀತ ಕಾರ್ಮಿಕ ಪದ್ಧತಿ ನಿರ್ಮೂಲನಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಜೀತ ಪದ್ಧತಿ ಎಂಬ ಪಿಡುಗನ್ನು ಸಂಪೂರ್ಣವಾಗಿ ಕಿತ್ತೊಗೆಯಬೇಕು. ಈ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿ ಸ್ಪೆಷಲ್ ಟಾಸ್ಕ್ಫೋರ್ಸ್ ಸಹ ಆರಂಭಿಸಲಾಗಿದೆ. ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ೧೪ ವಿವಿಧ ಇಲಾಖಾಧಿಕಾರಿಗಳು ಸಹ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಲುವಾಗಿ ಸ್ಪೆಷಲ್ ಟಾಸ್ಕ್ಫೋರ್ಸ್ ಮುಖಾಂತರ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ನಮ್ಮೆಲ್ಲರಲ್ಲಿ ಸಂವಿಧಾನದ ಬಗ್ಗೆ ಗೌರವ ಇರಬೇಕು. ಭಾರತದ ಸಂವಿಧಾನವು ಸರ್ವ ಶ್ರೇಷ್ಠವಾದುದಾಗಿದ್ದು, ಅದರ ಪ್ರಕಾರವೇ ದೇಶದಲ್ಲಿ ಕಾನೂನು ರೂಪಿತವಾಗಿದೆ. ಅಂರ‍್ರಾಷ್ಟಿçÃಯ ಕಾರ್ಮಿಕ ಸಂಘಟನೆಯ ನಿಯಮದಂತೆ ಸಮಾನ ಕೆಲಸಕ್ಕೆ ಸಮಾನ ಕೂಲಿ ನೀಡಬೇಕು. ಸಂವಿಧಾನದ ೨೩ ನೇ ವಿಧಿಯ ಅನುಸಾರ ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ದುಡಿಸಿಕೊಳ್ಳುವಂತಿಲ್ಲ, ಜೀತ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಹೊರಹಾಕಿ ಶಾಂತಿಯುತ ಮತ್ತು ಸಮ ಸಮಾಜವನ್ನು ನಾವೆಲ್ಲರೂ ರೂಪಿಸುವಂತಾಗಬೇಕು ಎಂದು ಅವರು ತಿಳಿಸಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಿ. ಧನರಾಜು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಜಾಥಾ: ಜೀತ ಕಾರ್ಮಿಕ ಪದ್ಧತಿ ನಿರ್ಮೂಲನ ದಿನಾಚರಣೆ ಅಂಗವಾಗಿ ಜಿ.ಪಂ. ಕಚೇರಿ ವ್ಯಾಪ್ತಿಯಲ್ಲಿ ವಿಶೇಷ ಜಾಥಾ ಹಮ್ಮಿಕೊಳ್ಳಲಾಯಿತು. ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬAಧಿಸಿದAತೆ ಘೋಷಣೆಗಳನ್ನು ಕೂಗುತ್ತಾ ಜಿ.ಪಂ. ಅಧಿಕಾರಿಗಳು ಮತ್ತು ಸಿಬ್ಬಂದಿಗಳಿAದ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್, ಜಿ.ಪಂ. ಅಧಿಕಾರಿಗಳು ಇತರರು ಇದ್ದರು.