ಸೋಮವಾರಪೇಟೆ, ಫೆ. ೧೦: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಈಗಾಗಲೇ ಕೆಲವೊಂದು ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಇದಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಹೇಳಿದರು.

ಇಲ್ಲಿನ ಜಾನಕಿ ಕನ್ವೆನ್‌ಷನ್ ಸಭಾಂಗಣದಲ್ಲಿ ನಡೆದ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಪದಾಧಿಕಾರಿಗಳ ವಿಶೇಷ ಸಭೆಗೆ ಆಗಮಿಸಿದ ಶಾಸಕರೊಂದಿಗೆ, ಸಮಿತಿಯ ಪದಾಧಿಕಾರಿಗಳು ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮುಕ್ತ ಚರ್ಚೆ ನಡೆಸಿದರು.

ಸಮಿತಿಯ ಅಧ್ಯಕ್ಷ ಅರುಣ್ ಕೊತ್ನಳ್ಳಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಅನೇಕ ದಶಕಗಳಿಂದ ಆಗದೇ ಉಳಿದಿರುವ ಅಭಿವೃದ್ಧಿ ಕಾರ್ಯಗಳು, ಮೂಲಭೂತ ಸೌಕರ್ಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿ, ಈ ಸಂಬAಧಿತ ವಿಸ್ತೃತ ಹಾಗೂ ಪ್ರತ್ಯೇಕ ಮನವಿಯನ್ನು ಶಾಸಕರಿಗೆ ಸಲ್ಲಿಸಲಾಯಿತು.

ಆಸ್ಪತ್ರೆಯಲ್ಲಿ ಸಮಸ್ಯೆ

ಪ್ರಮುಖವಾಗಿ ಸೋಮವಾರಪೇಟೆ ತಾಲೂಕು ಕೇಂದ್ರದಲ್ಲಿರುವ ಆಸ್ಪತ್ರೆಯನ್ನು ಸಾವಿರಾರು ಮಂದಿ ಆಶ್ರಯಿಸಿದ್ದು, ಇಲ್ಲಿ ಖಾಲಿ ಉಳಿದಿರುವ ಶಸ್ತç ಚಿಕಿತ್ಸಕರು, ತಜ್ಞರು, ರೇಡಿಯಾಲಜಿಸ್ಟ್ ತಜ್ಞರನ್ನು ನಿಯೋಜಿಸಬೇಕೆಂದು ಗಮನ ಸೆಳೆಯಲಾಯಿತು.

ಇದರೊಂದಿಗೆ ಸ್ಕಾö್ಯನಿಂಗ್, ಡಯಾಲಿಸಿಸ್ ಉನ್ನತೀಕರಣ, ಎಕ್ಸ್ರೇ ಕೇಂದ್ರದ ಉನ್ನತೀಕರಣಕ್ಕೆ ಮನವಿ ಮಾಡಲಾಯಿತು. ರಕ್ತನಿಧಿ ಘಟಕ ಕಾರ್ಯನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವುದು, ಶಾಂತಳ್ಳಿ, ಸೂರ್ಲಬ್ಬಿ, ಮಾದಾಪುರ, ಗೌಡಳ್ಳಿ, ಆಲೂರು ಸಿದ್ದಾಪುರ, ಶನಿವಾರಸಂತೆ, ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ವೈದ್ಯರು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ವಹಿಸುವಂತೆ ಮನವಿ ಮಾಡಲಾಯಿತು.

ಕಂದಾಯ ಇಲಾಖೆ ಅವ್ಯವಸ್ಥೆ

ಸೋಮವಾರಪೇಟೆ ತಾಲೂಕು ಕಂದಾಯ ಇಲಾಖೆಯಲ್ಲಿ ಸಮಸ್ಯೆಗಳು ಮಿತಿಮೀರಿದ್ದು, ಜಾಗಕ್ಕೆ ಸಂಬAಧಿಸಿದ ಕೆಲಸ ಕಾರ್ಯಗಳು ಆಗುತ್ತಿಲ್ಲ. ಈ ಹಿನ್ನೆಲೆ ತುರ್ತಾಗಿ ಪ್ರತಿ ಕಂದಾಯ ಗ್ರಾಮಗಳಲ್ಲಿ ಗ್ರಾಮದ ವಿಸ್ತೀರ್ಣ, ಗ್ರಾö್ಯಂಟ್, ದುರಸ್ತಿಯಾಗಿರುವ, ದುರಸ್ತಿಯಾಗದ, ಬಾಕಿ ಉಳಿದಿರುವ ಜಾಗವನ್ನು ಗುರುತು ಮಾಡಲು ಕ್ರಮವಹಿಸಬೇಕು. ಸರ್ವೆ ನಡೆಸಿ ಗ್ರಾಮದ ಗಡಿ ಗುರುತು ಮಾಡಿ ಕಂದಾಯ ನಿಗದಿಪಡಿಸಬೇಕು. ದುರಸ್ತಿ, ಪೋಡಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ಫಾರಂ ೫೦, ೫೩, ೫೭, ೯೪ಸಿ, ೯೪ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕೆಂದು ಮನವಿ ಸಲ್ಲಿಸಲಾಯಿತು.

ಹೆದ್ದಾರಿ - ಪ್ರವಾಸೋದ್ಯಮ

ಸೋಮವಾರಪೇಟೆ ತಾಲೂಕಿನಲ್ಲಿ ಹಾದುಹೋಗಿರುವ ಮಾಗಡಿ-ಜಾಲ್ಸೂರು ಹೆದ್ದಾರಿ ಮತ್ತು ಚನ್ನರಾಯಪಟ್ಟಣ-ಚೆಟ್ಟಳ್ಳಿ-ಮಾಕುಟ್ಟ ಹೆದ್ದಾರಿ ಕಾರ್ಯ ಪ್ರಗತಿಯಾಗಿಲ್ಲ. ಇದರೊಂದಿಗೆ ಸೋಮವಾರಪೇಟೆಯು ರಾಷ್ಟಿçÃಯ ಹೆದ್ದಾರಿಯಿಂದ ವಂಚಿತವಾಗಿದೆ. ಈ ಹಿನ್ನೆಲೆ ಎರಡೂ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಬೇಕೆಂದು ಸದಸ್ಯರುಗಳು ಬೇಡಿಕೆ ಮುಂದಿಟ್ಟರು.

ಸೋಮವಾರಪೇಟೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬAಧಿಸಿದAತೆ ಮಲ್ಲಳ್ಳಿ ಜಲಪಾತ, ಹೊನ್ನಮ್ಮನ ಕೆರೆ, ಕೋಟೆ ಬೆಟ್ಟ, ಗವಿ ಬೆಟ್ಟದಲ್ಲಿ ಕೇಬಲ್ ಕಾರ್ ಅಳವಡಿಸಲು ಕ್ರಮಕೈಗೊಳ್ಳಬೇಕು. ಮಲ್ಲಳ್ಳಿ ಜಲಪಾತದಲ್ಲಿ ಹೆಚ್ಚಿನ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಗಮನ ಸೆಳೆದರು.

ಸೋಮವಾರಪೇಟೆಯಿಂದ ಬೆಂಗಳೂರು, ಮೈಸೂರು, ಮಂಗಳೂರಿಗೆ ತೆರಳಲು ಬಸ್‌ಗಳು ಹಾಗೂ ಗ್ರಾಮೀಣ ಪ್ರದೇಶಗಳಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ವ್ಯವಸ್ಥೆ ಮಾಡಬೇಕು. ಸರ್ಕಾರಿ ಕಚೇರಿಗಳಲ್ಲಿ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಬೇಕು. ಅಂತಹ ಅಧಿಕಾರಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷಕ್ಕೆ ಇತಿಶ್ರೀ ಹಾಡಬೇಕು. ತಾಲೂಕಿನಲ್ಲಿ ೨ ಒಳಾಂಗಣ ಕ್ರೀಡಾಂಗಣ ನಿರ್ಮಾಣ, ಕಾನೂನು ಮತ್ತು ನರ್ಸಿಂಗ್ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು.

೧೭ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶತಮಾನೋತ್ಸವ ಭವನವನ್ನು ಪೂರ್ಣಗೊಳಿಸುವುದು, ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯಗಳಲ್ಲಿ ಶುಚಿತ್ವ ಕಾಯ್ದುಕೊಳ್ಳಲು ಪ.ಪಂ.ಗೆ ನಿರ್ದೇಶನ ನೀಡುವುದು, ಈಗಿರುವ ಮಾರುಕಟ್ಟೆ ಪ್ರದೇಶದ ತಳಭಾಗದಲ್ಲಿ ಪಾರ್ಕಿಂಗ್‌ಗೆ ಸ್ಥಳಾವಕಾಶ ಕಲ್ಪಿಸಿ, ಮೇಲ್ಭಾಗದಲ್ಲಿ ಮಾರುಕಟ್ಟೆ ನಿರ್ಮಿಸುವುದು, ವಿವೇಕಾನಂದ ವೃತ್ತ ಬಳಿಯಿರುವ ಮಾಂಸ, ಮೀನು ಮಾರಾಟದ ಅಂಗಡಿಗಳನ್ನು ಸುಸಜ್ಜಿತವಾಗಿ ನಿರ್ಮಿಸಿ, ಶುಚಿತ್ವ ಕಾಯ್ದುಕೊಳ್ಳಲು ಸೂಚಿಸಬೇಕೆಂದು ಪದಾಧಿಕಾರಿಗಳು ಮನವಿ ಮಾಡಿದರು.

ಕ್ರಮದ ಭರವಸೆ

ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು. ಇದರೊಂದಿಗೆ ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅವ್ಯವಸ್ಥೆ ಸರಿಪಡಿಸಲಾಗುವುದು. ಕಂದಾಯ ಇಲಾಖೆಯಲ್ಲಿ ‘ಒನ್ ಟು ಫೈವ್’ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವ ಸಂಬAಧ ಉಪ ವಿಭಾಗಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು. ಮಾಗಡಿ-ಜಾಲ್ಸೂರು ರಸ್ತೆ ಅಭಿವೃದ್ಧಿಗೆ ೨೦ಕೋಟಿ ಅನುದಾನಕ್ಕೆ ಬೇಡಿಕೆಯಿಟ್ಟಿದ್ದು, ಅನುದಾನ ಲಭ್ಯವಾದೊಡನೆ ಕೆಲಸ ಆರಂಭಿಸಲಾಗುವುದು ಎಂದು ಶಾಸಕ ಮಂಥರ್ ಗೌಡ ಭರವಸೆ ನೀಡಿದರು.

ಈಗಾಗಲೇ ಮಲ್ಲಳ್ಳಿ ಜಲಪಾತದಲ್ಲಿ ಕೇಬಲ್ ಕಾರ್ ಅಳವಡಿಸುವ ಸಂಬAಧ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೆ ೬ ಕೇಬಲ್ ಕಾರ್‌ಗಳಿದ್ದು, ೭ನೇ ಕೇಬಲ್ ಕಾರ್‌ನ್ನು ಮಲ್ಲಳ್ಳಿಯಲ್ಲಿ ಅಳವಡಿಸುವ ಬಗ್ಗೆ ಮನವಿ ಸಲ್ಲಿಸಲಾಗಿದೆ. ಕುಶಾಲನಗರದಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ಆದ ನಂತರ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ ಎಂದರು.

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ, ಅನಗತ್ಯ ಅಲೆದಾಟ ಆಗುತ್ತಿದ್ದರೆ ಸೂಕ್ತ ದಾಖಲೆಗಳೊಂದಿಗೆ ಮಾಹಿತಿ ನೀಡಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ನಮ್ಮೊಂದಿಗೆ ಕೈಜೋಡಿಸಬೇಕು ಎಂದ ಶಾಸಕರು, ಕಾನೂನು ಕಾಲೇಜು ಆರಂಭಿಸುವ ಬಗ್ಗೆ ಗಮನ ಹರಿಸಲಾಗುವುದು. ಶತಮಾನೋತ್ಸವ ಭವನ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ. ಅನುದಾನ ಲಭ್ಯವಾದಂತೆ ಕಾಮಗಾರಿ ಆರಂಭಿಸಲಾಗುವುದು. ಈ ಪ್ರದೇಶದಲ್ಲಿಯೇ ಒಳಾಂಗಣ ಕ್ರೀಡಾಂಗಣ ಸ್ಥಾಪನೆಗೂ ಚಿಂತಿಸಲಾಗುವುದು ಎಂದು ಭರವಸೆ ನೀಡಿದರು.

ಮಾರುಕಟ್ಟೆ ಆವರಣದಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಿ, ಮೇಲ್ಭಾಗದಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಚಿಂತನೆಯಿದೆ ಎಂದ ಅವರು, ಮಾಂಸದ ಅಂಗಡಿಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳುವಂತೆ ಸಂಬAಧಿಸಿದ ಗ್ರಾ.ಪಂ.ಗಳಿಗೆ ಸೂಚನೆ ನೀಡಲಾಗುವುದು ಎಂದರು.

ತಾಲೂಕಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೆಲಸ ಮಾಡಲಾಗುವುದು. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ನಮ್ಮೊಂದಿಗೆ ಕೈಜೋಡಿಸಬೇಕೆಂದು ಶಾಸಕರು ಮನವಿ ಮಾಡಿದರು. ಸಭೆಯಲ್ಲಿ ಸಮಿತಿಯ ಕಾರ್ಯದರ್ಶಿ ಆದರ್ಶ್ ತಮ್ಮಯ್ಯ, ಉಪಾಧ್ಯಕ್ಷ ಕೆ.ಎನ್.ದೀಪಕ್, ಖಜಾಂಚಿ ಅಬ್ದುಲ್ ರಜಾಕ್, ನಿರ್ದೇಶಕ ಜೀವನ್‌ಕುಮಾರ್, ವಿ.ಎಂ. ಗೌತಮ್, ತ್ರಿಶೂಲ್, ಮಂಜುನಾಥ್ ಬಿ.ಎಸ್., ಕೆ.ಎ. ಪ್ರಕಾಶ್, ಜಿ.ಎಂ. ಹೂವಯ್ಯ, ರವಿ ಕುಮಾರ್, ಗರಗಂದೂರು ಲಕ್ಷö್ಮಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.