ನಾಪೋಕ್ಲು, ಫೆ. ೧೦: ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಹೇಳಿದರು.

ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದ್ದೂರು ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಮೂರು ವರ್ಷದಿಂದ ಆರು ವರ್ಷದೊಳಗಿನ ಮಕ್ಕಳಿಗೆ ಉತ್ತಮ ಆಹಾರ ಹಾಗೂ ಸರ್ಕಾರದಿಂದ ಅನುಷ್ಠಾನಗೊಂಡ ಯೋಜನೆಗಳ ಸೌಲಭ್ಯಗಳನ್ನು ದೊರಕಿಸಿ ಕೊಡುವಂತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಅಂಗನವಾಡಿ ಕೇಂದ್ರ ಶಾಲೆಗಳಿಗೆ ನೀಡುವಂತೆ ಇಲಾಖಾ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಸ ಮಾತನಾಡಿ ಅಂಗನವಾಡಿ ಕೇಂದ್ರಕ್ಕೆ ಮೂರು ವರ್ಷದಿಂದ ಆರು ವರ್ಷದೊಳಗಿನ ಮಕ್ಕಳನ್ನು ದಾಖಲು ಮಾಡಿ ಇಲಾಖೆ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿ ಕೊಳ್ಳಬೇಕೆಂದರು.

ಪAಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ ಮಾತನಾಡಿ ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗಬಾರದು ಎಂದರು. ಗ್ರಾಮ ಪಂಚಾಯಿತಿ ಸದಸ್ಯೆ ಕುಸುಮ ಮಾತನಾಡಿ ಪ್ರತಿಯೊಬ್ಬರೂ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ದಾಖಲಿಸುವಂತೆ ಸಲಹೆ ನೀಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾ ಲಕ್ಷಿö್ಮ ಮಾತನಾಡಿ ಸಾರ್ವಜನಿಕರಿಗೆ ಅಂಗನವಾಡಿ ಆಶಾ ಕಾರ್ಯಕರ್ತೆ ಯರು ಮಾಹಿತಿ ನೀಡಿ ಸರ್ಕಾರದ ಸೌಲಭ್ಯವನ್ನು ಸಾರ್ವಜನಿಕರಿಗೆ ಸಿಗುವಂತೆ ಮಾಡಬೇಕು ಎಂದರು.

ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಸರಸ್ವತಿ , ಇಂಜಿನಿಯರ್ ನವಾನಿ ಹಾಗೂ ಸಾಮಗ್ರಿ ಸರಬರಾಜುದಾರ ಕರುಣಾಕರ್ ರೈ ಅವರುಗಳನ್ನು ಗಣ್ಯರು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷೆ ಅನುರಾವತಿ, ಸದಸ್ಯರಾದ ಹಮೀದ್, ಮೊಣ್ಣಪ್ಪ , ಸರಸು , ಲಕ್ಷಿö್ಮ, ಮಡಿಕೇರಿ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಸಂಘದ ಅಧ್ಯಕ್ಷ ಪವಿತ್ರ, ಕಾರ್ಯದರ್ಶಿ ಆಶಾ ಲತಾ , ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಮಮತಾ, ಅಂಗನವಾಡಿ ಕೇಂದ್ರದ ಕಾರ್ಯಕರ್ತ ಶೋಭಾ ಸಹಾಯಕಿ ಸುಜಾತ ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆ ಯರು, ಸಹಾಯಕಿಯರು, ಪೋಷಕರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಮಹಿಳಾ ಮೇಲ್ವಿಚಾರಕಿ ಶೀಲಾ ಅಶೋಕ್ ನಿರೂಪಿಸಿ, ಆಶಾಲತಾ ವಂದಿಸಿದರು.