ಮುಳ್ಳೂರು, ಫೆ. ೧೧: ಸಮೀಪದ ಬೆಸೂರು ಗ್ರಾ.ಪಂ.ವ್ಯಾಪ್ತಿಯ ದೊಡ್ಡಭಂಡಾರ ಗ್ರಾಮದ ಶ್ರೀ ಮಲ್ಲೇಶ್ವರಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ ಮತ್ತು ನೂತನ ದೇವಾಲಯದ ಉದ್ಘಾಟನೆ ಹಾಗೂ ಪೂಜಾ ಮಹೋತ್ಸವ ತಾ. ೧೨ ರಂದು (ಇಂದು) ನಡೆಯಲಿರುವ ಹಿನ್ನೆಲೆಯಲ್ಲಿ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಭಾನುವಾರ ದೇವಸ್ಥಾನದಲ್ಲಿ ವಿವಿಧ ಪೂಜಾ ವಿಧಿ ವಿಧಾನ, ಹೋಮಹವನಗಳನ್ನು ನೆರವೇರಿಸಿ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಸೋಮವಾರ ಮಧ್ಯಾಹ್ನ ೨.೩೦ ರಿಂದ ಧಾರ್ಮಿಕ ಸಮಾರಂಭ ನಡೆಯಲಿದೆ.