ಶನಿವಾರಸಂತೆ, ಫೆ. ೧೧: ಸಮೀಪದ ದುಂಡಳ್ಳಿ ಗ್ರಾಮ ಪಂಚಾ ಯಿತಿಗೆ ಸಂವಿಧಾನ ದಿನಾಚಾರಣೆ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಮೆರವಣಿಗೆ ಮಂಗಳವಾರ ಬೆಳಿಗ್ಗೆ ಆಗಮಿಸಿದಾಗ ಪಂಚಾಯಿತಿ ವತಿಯಿಂದ ಸ್ವಾಗತಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿರುವ ಸಂವಿ ಧಾನ ಜಾಗೃತಿ ಜಾಥಾವನ್ನು ಅಧ್ಯಕ್ಷೆ ಸತ್ಯವತಿ, ಸದಸ್ಯರಾದ ಡಿ.ಪಿ. ಬೋಜಪ್ಪ, ಸಿ.ಜೆ. ಗಿರೀಶ್, ಇತರರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ, ಸೋಮವಾರಪೇಟೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಶಿಕಲಾ, ನಿವೃತ್ತ ಪ್ರಾಂಶುಪಾಲ ಡಾ. ಸಿ.ಕೆ. ಲೋಕೇಶ್, ದಸಂಸ ಮುಖಂ ಡರು, ವಿವಿಧ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸ್ತಿçÃಶಕ್ತಿ ಸಂಘದ ಸದಸ್ಯರು, ವಿವಿಧ ಸಂಘ-ಸAಸ್ಥೆಗಳು ಹಾಗೂ ಗ್ರಾಮ ಪ್ರಮುಖರು ಸ್ವಾಗತಿಸಿದರು.

ಜಾಥಾ ವಾಹನದಲ್ಲಿ ಪ್ರತಿಷ್ಠಾಪಿ ಸಲ್ಪಟ್ಟಿದ್ದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು. ನಂತರ ಮುಖ್ಯರಸ್ತೆಯಲ್ಲಿ ಸಾಗಿದ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಮೆರವಣಿಗೆ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪಕ್ಕೆ ಆಗಮಿಸಿತು. ಅಲ್ಲಿನ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ಸತ್ಯಾವತಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

ಮುಖ್ಯ ಭಾಷಣಕಾರ ನಿವೃತ್ತ ಪ್ರಾಂಶುಪಾಲ ಡಾ. ಸಿ.ಕೆ. ಲೋಕೇಶ್ ಮಾತನಾಡಿ, ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಅತ್ಯುತ್ತಮ ಕಾರ್ಯಕ್ರಮವಾಗಿದೆ. ಜಾಥಾದ ಉದ್ದೇಶ ಸಂವಿಧಾನ ವಿಚಾರವನ್ನು ಮನೆಮನೆಗೆ ತಲುಪಿಸುವುದಾಗಿದೆ. ಸಂವಿಧಾನದಲ್ಲಿ ಸಾರ್ವಭೌಮತ್ವ, ಸಮಾನತೆ, ಸಮಾಜವಾದಿ, ಪ್ರಜಾಸತ್ಯಾತ್ಮಕ ಎಂಬ ೪ ಅಂಶಗಳಿವೆ. ಸಂವಿಧಾನ ಶಿಲ್ಲಿ ಡಾ. ಅಂಬೇಡ್ಕರ್ ಎಲ್ಲಾ ಕಷ್ಟಗಳನ್ನು ನುಂಗಿ ತಾವು ರಚಿಸಿದ ಸಂವಿಧಾನದ ಮೂಲಕ ದೀನದಲಿತರಿಗೆ ಬೆಲ್ಲ-ಸಕ್ಕರೆಯಂ ತಾದರು ಎಂದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಶಿಕಲಾ ಪ್ರಾಸ್ತಾವಿಕ ನುಡಿಯಾಡಿದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಶೆಟ್ಟಿ ಪೀಠಿಕೆ ವಾಚಿಸಿ, ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಪಂಚಾಯಿತಿ ಸದಸ್ಯರಾದ ಡಿ.ಪಿ. ಬೋಜಪ್ಪ, ಸಿ.ಜೆ. ಗಿರೀಶ್, ನಿತಿನ್, ಮನು ಮಹಾಂತೇಶ್, ಕಾಂತರಾಜ್, ಎಸ್.ಪಿ. ಭಾಗ್ಯಾ, ಪೂರ್ಣಿಮಾ ಕಿರಣ್, ಜಾನಕಿ, ನಂದಿನಿ, ಭವಾನಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಶಿಕಲಾ, ಸಿಬ್ಬಂದಿ, ವಿಘ್ನೇ ಶ್ವರ ವಿದ್ಯಾಸಂಸ್ಥೆ ಶಿಕ್ಷಕ ಕೆ.ಪಿ. ಜಯ ಕುಮಾರ್, ವಿವಿಧ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಪೊಲೀಸ್ ಇಲಾಖೆ, ಅರಣ್ಯ ಇಲಾಖೆಯವರು, ದಸಂಸ ತಾಲೂಕು ಅಧ್ಯಕ್ಷ ವೀರೇಂದ್ರ, ಇತರ ಮುಖಂಡರು, ಸ್ವಸಹಾಯ ಸಂಘದವರು ಹಾಜರಿದ್ದರು.