ಕತಾರ್ನಿಂದ ನೌಕಾಪಡೆಯ ಅಧಿಕಾರಿಗಳ ಬಿಡುಗಡೆ
ನವದೆಹಲಿ, ಫೆ. ೧೨: ಬೇಹುಗಾರಿಕೆ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ೮ ಮಂದಿ ಭಾರತೀಯ ನೌಕಾಪಡೆಯ ಅಧಿಕಾರಿಗಳು ಕತಾರ್ನಿಂದ ಭಾರತಕ್ಕೆ ಮರಳಿದ್ದಾರೆ. ಕತಾರ್ ನ್ಯಾಯಾಲಯವು ಸೋಮವಾರ ತನ್ನ ವಶದಲ್ಲಿದ್ದ ಎಲ್ಲಾ ೮ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ ೭ ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಈ ಹಿಂದೆ ಭಾರತದ ಮಧ್ಯಸ್ಥಿಕೆಯ ನಂತರ ಮರಣದಂಡನೆಯನ್ನು ದೀರ್ಘಾವಧಿಯ ಜೈಲು ಶಿಕ್ಷೆಗೆ ಪರಿವರ್ತಿಸಲಾಗಿತ್ತು. ಈ ಹಿಂದೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಯನ್ನು ಬಿಡುಗಡೆ ಮಾಡುವ ಕತಾರ್ ನ್ಯಾಯಾಲಯದ ನಿರ್ಧಾರವನ್ನು ಎಂಇಎ ತನ್ನ ಅಧಿಕೃತ ಹೇಳಿಕೆಯಲ್ಲಿ ಸ್ವಾಗತಿಸಿದೆ. ಕತಾರ್ನಲ್ಲಿ ಬಂಧಿತರಾಗಿರುವ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ನಿತೀಶ್ ಕುಮಾರ್ ವಿಶ್ವಾಸ ಮತ ಸಾಬೀತು
ಪಾಟ್ನಾ, ಫೆ. ೧೨: ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ. ೨೪೩ ವಿಧಾನಸಭೆ ಕ್ಷೇತ್ರಗಳ ಪೈಕಿ ವಿಶ್ವಾಸ ಮತ ಸಾಬೀತುಪಡಿಸಲು ೧೨೨ ಮತಗಳ ಅವಶ್ಯಕತೆ ಇತ್ತು. ನಿತೀಶ್ ಸರ್ಕಾರದ ಪರವಾಗಿ ೧೨೯ ಮತಗಳು ಚಲಾವಣೆಯಾಗಿವೆ. ಬಿಹಾರ ವಿಧಾನಸಭೆಯಲ್ಲಿ ನಿತೀಶ್ಕುಮಾರ್ ಸರ್ಕಾರದ ವಿಶ್ವಾಸಮತ ಪರೀಕ್ಷೆಗೂ ಮುನ್ನವೇ ಎನ್ಡಿಎ ಸಮ್ಮಿಶ್ರ ಸರ್ಕಾರದ ಬಹುಮತ ಸಾಬೀತಾಗಿತ್ತು. ಆರ್ಜೆಡಿ ಕೋಟಾದಿಂದ ಸ್ಪೀಕರ್ ಆದ ಅವಧ್ ಬಿಹಾರಿ ಚೌಧರಿ ಅವರನ್ನು ಪದಚ್ಯುತಗೊಳಿಸುವ ಪ್ರಸ್ತಾಪದ ಮೇಲಿನ ಮತದಾನದಲ್ಲಿ ೧೨೫ ಶಾಸಕರು ಸರ್ಕಾರವನ್ನು ಬೆಂಬಲಿಸಿ ಮತ ಚಲಾಯಿಸಿದರೆ ೧೧೨ ಶಾಸಕರು ಮಾತ್ರ ವಿರೋಧ ಪಕ್ಷದಲ್ಲಿ ಉಳಿದಿದ್ದಾರೆ.
ವಿಧಾನಸಭೆಯಲ್ಲಿ ಮೊಳಗಿದ ಜೈಶ್ರೀರಾಮ್, ಜೈ ಭೀಮ್ ಘೋಷಣೆ
ಬೆಂಗಳೂರು, ಫೆ. ೧೨: ರಾಜ್ಯ ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮುಗಿಸುತ್ತಿದ್ದಂತೆ ಬಿಜೆಪಿ ಶಾಸಕರು ಜೈ ಶ್ರೀ ರಾಮ್ ಎಂದು ಕೂಗಿದ್ದು, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಶಾಸಕರು ಜೈ ಭೀಮ್ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ. ಅದಲ್ಲದೆ ಇಂದು ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಸದನ ಆರಂಭಕ್ಕೂ ಮುನ್ನವೇ ಸದನದ ಒಳಗೆ ಕೇಸರಿ ಶಾಲು ಹಾಕಿಕೊಂಡು ಬಂದ ವಿಧಾನಸಭೆ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರು ಜೈ ಶ್ರೀ ರಾಮ್ ಘೋಷಣೆ ಕೂಗಿದರು. ಅಧಿವೇಶನದ ಮೊದಲ ದಿನವಾದ ಇಂದು ರಾಜ್ಯಪಾಲರು ಸದನವನ್ನು ಉದ್ದೇಶಿಸಿ ಭಾಷಣ ಮಾಡಿದರು. ಭಾಷಣ ಮುಗಿಸಿ ರಾಜ್ಯಪಾಲರು ಜೈ ಹಿಂದ್, ಜೈ ಕರ್ನಾಟಕ, ಧನ್ಯವಾದ ಎಂದು ಹೇಳುತ್ತಿದ್ದಂತೆ ಬಿಜೆಪಿ ಸದಸ್ಯರು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಿದರು. ಅಷ್ಟರಲ್ಲಿ ರಾಷ್ಟçಗೀತೆ ಮೊಳಗಿತು. ರಾಷ್ಟçಗೀತೆ ಮುಗಿಯುತ್ತಿದ್ದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್. ಕೆ.ಪಾಟೀಲ್ ಅವರು ಸಭೆಯಿಂದ ನಿರ್ಗಮಿಸಿದರು. ರಾಜ್ಯಪಾಲರು ತೆರಳುವವರೆಗೂ ಬಿಜೆಪಿ ಸದಸ್ಯರು ಜೈ ಶ್ರೀರಾಮ್ ಘೋಷಣೆ ಕೂಗುತ್ತಿದ್ದರು. ಇದಕ್ಕೆ ಪ್ರತಿಯಾಗಿ ಸಚಿವರಾದ ಸಂತೋಷ್ ಲಾಡ್, ಬೈರತಿ ಸುರೇಶ್, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸೇರಿದಂತೆ ಇತರ ಕಾಂಗ್ರೆಸ್ ಶಾಸಕರು 'ಜೈ ಭೀಮ್, ಜೈ ಸಂವಿಧಾನ' ಎಂದು ಘೋಷಣೆ ಕೂಗಿದರು.
ಗ್ಯಾರಂಟಿ ಯೋಜನೆ ಶ್ಲಾಘಿಸಿದ ರಾಜ್ಯಪಾಲ
ಬೆಂಗಳೂರು, ಫೆ. ೧೨: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಸದನ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಹುಪರಾಕ್ ಹೇಳಿದ್ದಾರೆ. ಇಂದು ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, 'ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ. ಸರ್ಕಾರವು ನಡೆ ನುಡಿಗಳನ್ನು ಒಂದಾಗಿಸಿಕೊAಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದರು. ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ ೧೦ನೇ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದರು.
ಮನೀಶ್ ಸಿಸೋಡಿಯಾಗೆ ಮಧ್ಯಂತರ ಜಾಮೀನು
ನವದೆಹಲಿ ಫೆ. ೧೨: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಹಿರಿಯ ಎಎಪಿ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ತಮ್ಮ ಸಂಬAಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯ ಸೋಮವಾರ ಮೂರು ದಿನಗಳ ಮಧ್ಯಂತರ ಜಾಮೀನು ನೀಡಿದೆ. ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫೆಬ್ರವರಿ ೧೩ ರಿಂದ ೧೫ ರವರೆಗೆ ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಅವರು ಸಿಸೋಡಿಯಾಗೆ ಜಾಮೀನು ಮಂಜೂರು ಮಾಡಿದ್ದಾರೆ.
‘ತನಿಖೆಗೆ ಸಹಕರಿಸದ ಜಾರ್ಖಂಡ್ ಮಾಜಿ ಸಿಎಂ’
ರಾAಚಿ, ಫೆ. ೧೨: ಭೂ ಹಗರಣಕ್ಕೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ತನಿಖೆಗೆ ತೀವ್ರ ಅಸಹಕಾರ ತೋರಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಸೋಮವಾರ ಆರೋಪಿಸಿದೆ. ಸೋರೆನ್ ಅವರು ಸ್ವಾಧೀನಪಡಿಸಿಕೊಂಡಿದ್ದಾರೆ ಎನ್ನಲಾದ ಜಮೀನುಗಳ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲು ಇಷ್ಟಪಡುತ್ತಿಲ್ಲ ಎಂದು ಕೇಂದ್ರ ತನಿಖಾ ಸಂಸ್ಥೆ ಹೇಳಿದೆ. ಕೇಂದ್ರ ತನಿಖಾ ಸಂಸ್ಥೆ ೪೮ ವರ್ಷದ ಜೆಎಂಎA ನಾಯಕನನ್ನು ಇಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಜೀವ್ ರಂಜನ್ ಅವರ ಮುಂದೆ ಹಾಜರುಪಡಿಸಿತು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ಇನ್ನೂ ಮೂರು ದಿನ ಇಡಿ ವಶಕ್ಕೆ ನೀಡಿದೆ. ಸೋರೆನ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜನವರಿ ೩೧ ರಂದು ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿತ್ತು.
೨೪ ವರ್ಷ ನಂತರ ಆರೋಪಿ ಬಂಧನ!
ಬೆAಗಳೂರು, ಫೆ. ೧೨: ಸರಗಳ್ಳತನ ಪ್ರಕರಣದಲ್ಲಿ ೨೪ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜಯನಗರ ಪೊಲೀಸರು ಕನಕಪುರದಲ್ಲಿ ಬಂಧಿಸಿದ್ದಾರೆ. ೧೯೯೮ರಲ್ಲಿ ಗುಲಾಬ್ ಖಾನ್ ಅಲಿಯಾಸ್ ಗುಲ್ಲು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಿಡುಗಡೆಯಾದ ನಂತರ, ಪ್ರಕರಣವನ್ನು ಎರಡನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟೆçÃಟ್ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. ಆದರೆ ಅಂದಿನಿAದ ಅವರು ಯಾವುದೇ ವಿಚಾರಣೆಗೆ ಹಾಜರಾಗಲಿಲ್ಲ. ನ್ಯಾಯಾಲಯವು ಸಮನ್ಸ್, ವಾರಂಟ್ ಮತ್ತು ಘೋಷಣೆಗಳನ್ನು ಹೊರಡಿಸಿತು ಮತ್ತು ಪ್ರಕರಣವು ಸುಮಾರು ೨೪ ವರ್ಷಗಳಿಂದ ಬಾಕಿ ಉಳಿದಿತ್ತು.