ಗೋಣಿಕೊಪ್ಪಲು. ಫೆ. ೧೨: ಅರಣ್ಯ ಇಲಾಖೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಬಿ.ಎಸ್ಸಿ. ಅರಣ್ಯ ಶಾಸ್ತç ಪದವೀಧರರನ್ನೇ ನೇರ ನೇಮಕಾತಿ ಮಾಡುವುದರ ಮೂಲಕ ಶೇ. ೧೦೦ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಳೆದ ೪ ದಿನಗಳಿಂದ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊAಡು ಪ್ರತಿಭಟನೆ ನಡೆಸುತ್ತಿರುವ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಾಲ್ಕನೇ ದಿನದ ಕಾರ್ಯಕ್ರಮದ ಅಂಗವಾಗಿ ಕಾಲೇಜು ಆವರಣದಿಂದ ಮುಖ್ಯ ರಸ್ತೆಯಿಂದ ಆಗಮಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕಗಳ ಮೂಲಕ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ನಂತರ ಮೆರವಣಿಗೆ ಯಲ್ಲಿ ಸಾಗಿ ಬಂದ ನೂರಾರು ವಿದ್ಯಾರ್ಥಿಗಳು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಕಚೇರಿಯ ಮುಂದೆ ಜಮಾವಣೆಗೊಂಡರು. ನಂತರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ನಮ್ಮನ್ನು ಉದ್ಯೋಗಕ್ಕೆ ಸೇರಿಸಿಕೊಳ್ಳಲು ಮೊದಲ ಆದ್ಯತೆ ನೀಡಲು ಸರ್ಕಾರಕ್ಕೆ ಒತ್ತಾಯಿ ಸಿದರು. ೫ ವರ್ಷಗಳ ವಿದ್ಯಾಭ್ಯಾಸದಲ್ಲಿ ಕಠಿಣ ಶ್ರಮದೊಂದಿಗೆ ಅರಣ್ಯದೊಂ ದಿಗೆ ಬೆರೆತು ತಮ್ಮ ಜೀವವನ್ನು ಪಣಕ್ಕಿಟ್ಟು ವಿದ್ಯಾಭ್ಯಾಸವನ್ನು ಪೂರೈಸಿದ್ದೇವೆ. ಉದ್ಯೋಗ ನೀಡುವ ಸಂದರ್ಭ ನಮ್ಮನ್ನು ಸರ್ಕಾರ ಗಣನೆಗೆ ಪರಿಗಣಿಸದಿರುವುದು ಸರಿಯಾದ ಕ್ರಮವಲ್ಲ ಹಾಗಾಗಿ ಪ್ರತಿಭಟನೆಯ ಹಾದಿ ಹಿಡಿಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಎಂದು ವಿದ್ಯಾರ್ಥಿಗಳ ಪ್ರಮುಖ ನಾಯಕರು ಗಳು ತಮ್ಮ ಅಭಿಪ್ರಾಯವನ್ನು ಮಂಡಿಸಿದರು.
ವೀರಾಜಪೇಟೆ ತಾಲೂಕು ತಹಶೀ ಲ್ದಾರ್ ರಾಮಚಂದ್ರರವರಿಗೆ ಮನವಿ ಪತ್ರವನ್ನು ಸಲ್ಲಿಸುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಭಾರತೀಯ ಅರಣ್ಯ ನೀತಿ ೧೯೮೮ ಭಾರತೀಯ ಅರಣ್ಯ ಸೇವೆ ಹಾಗೂ ರಾಜ್ಯ ಅರಣ್ಯ ಸೇವೆಗಳಲ್ಲಿ ತಾಂತ್ರಿಕ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿ.ಎಸ್ಸಿ ಪದವಿಯನ್ನು ಪಡೆದಿರಬೇಕೆಂದು ಉಲ್ಲೇಖಿಸಲಾಗಿದೆ. ಕಾಮನ್‌ವೆಲ್ತ್ ವರದಿಯಲ್ಲಿಯೂ ಕೂಡಾ ಪರಿಸರ ನಾಶ ತಡೆಯಲು ಪರಿಹಾರ ಕ್ರಮವಾಗಿ ವೃತ್ತಿಪರ ಅರಣ್ಯ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕೆಂದು ಉಲ್ಲೇಖಿಸಿದೆ. ರಿಯೋ ಅರ್ಥ ಸಮ್ಮಟ್ ೧೯೯೨ ರಲ್ಲಿಯೂ ಕೂಡಾ ವೈಜ್ಞಾನಿಕವಾಗಿ ಅರಣ್ಯ ಸಂರಕ್ಷಿಸಲು ತಾಂತ್ರಿಕ ಅರಣ್ಯ ಶಿಕ್ಷಣದ ಮಹತ್ವವನ್ನು ಪುನರುಚ್ಚರಿಸಿದೆ.
ಅರಣ್ಯಶಾಸ್ತç ಪದವಿ ಸೇರುವವರು ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಂಡು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿ.ಇ.ಟಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ ಬಂದಿದ್ದಾರೆ. ವರ್ಷದಿಂದ ವರ್ಷಕ್ಕೆ ಈ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದ ವಿದ್ಯಾರ್ಥಿಗಳು ಬಿಎಸ್ಸಿ ಪದವಿಯನ್ನೇ ಬೇರೆ ವಿಷಯಗಳಿಗಿಂತ ಹೆಚ್ಚು ಆಸಕ್ತಿಯಿಂದ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳೆ ಈ ಕ್ಷೇತ್ರಕ್ಕೆ ಹೆಚ್ಚಾಗಿ ಬರುತ್ತಿರುವುದು ಈ ಪದವಿ ವ್ಯಾಸಂ ಗದ ಮಹತ್ವವನ್ನು ಸೂಚಿಸುತ್ತದೆ ಎಂದು ವಿದ್ಯಾರ್ಥಿಗಳು ಹೇಳಿದರು.
ಅರಣ್ಯ ಪದವೀಧರ ವಿದ್ಯಾ ರ್ಥಿಗಳ ವೃತ್ತಿ ಜೀವನದ ಹಿತದೃಷ್ಟಿಯಿಂದ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಇಲಾಖೆಯ ಗ್ರೂಪ್ ಎ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಲ್ಲಿ ಬಿಎಸ್ಸಿಯನ್ನು ಕನಿಷ್ಟ ವಿದ್ಯಾರ್ಹ ತೆಯನ್ನಾಗಿ ಮಾಡಿ ಬಿಎಸ್ಸಿ ಪದವೀಧರರಿಗೆ ನ್ಯಾಯ ಒದಗಿಸಬೇಕೆಂದು ಹಾಗೂ ವಿಜಯ ಭಾಸ್ಕರ್‌ರವರು ಸಲ್ಲಿಸಿದ ವರದಿಯ ಅಧ್ಯಾಯ ನಾಲ್ಕರ ಕ್ರಮ ಸಂಖ್ಯೆ ೮೧ನ್ನು ಕೈಬಿಡುವಂತೆ ವಿದ್ಯಾರ್ಥಿಗಳು ಸರ್ಕಾರವನ್ನು ಆಗ್ರಹಿಸಿದ್ದಾರೆ. ಪ್ರತಿಭಟನಾ ವೇಳೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ನಾಯಕರುಗಳಾದ ನವನೀತ್, ಸಂತೋಷ್, ಶ್ರೀವತ್ಸಾ ಹಾಗೂ ಸಿ.ಮನೋಜ್ ತಮ್ಮ ಬೇಡಿಕೆಗಳ ವಿಚಾರವಾಗಿ ಮಾತನಾಡಿದರು.