ಸೋಮವಾರಪೇಟೆ, ಫೆ. ೧೨: ವಿದ್ಯಾರ್ಥಿಗಳು ಕಲಿಕೆಯಲ್ಲಿ ಶಿಸ್ತು, ಸಮಯಪಾಲನೆಯನ್ನು ಅಳವಡಿಸಿಕೊಳ್ಳಬೇಕು. ಒತ್ತಡಕ್ಕೆ ಒಳಗಾಗಬಾರದು ಎಂದು ಮಡಿಕೇರಿ ಶಾಸಕ ಡಾ. ಮಂಥರ್‌ಗೌಡ ಅಭಿಪ್ರಾಯಿಸಿದರು.
ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ವಾರ್ಷಿಕ ಪುರಸ್ಕಾರ ಮತ್ತು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ತನಕ ವಿದ್ಯಾರ್ಥಿ ಜೀವನವನ್ನು ಸಂಭ್ರಮಿಸಬೇಕು. ಆಟವಾಡಿಕೊಂಡು ಓದಬೇಕು. ನಂತರ ಕಲಿಕೆಯ ಬಗ್ಗೆ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.
ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಮಾತನಾಡಿ, ಸಂಘದ ವತಿಯಿಂದ ನಡೆಯುತ್ತಿರುವ ಕುವೆಂಪು ಶಾಲೆಗೆ ಅನೇಕ ದಾನಿಗಳು ಸಹಕಾರ ನೀಡಿದ್ದಾರೆ. ಪ್ರಸಕ್ತ ವರ್ಷ ಶಾಸಕ ಡಾ.ಮಂಥರ್‌ಗೌಡ ೧೦ ಲಕ್ಷ ರೂ.ಗಳ ಸಹಾಯಧನ ಘೋಷಿಸಿದ್ದಾರೆ. ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ ಎಂದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪಳ್ಳಿ ರವೀಂದ್ರ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆ ಇರಬೇಕು. ಮನಸ್ಸನ್ನು ಕಲಿಕೆಗೆ ಮುಡಿಪಾಗಿಡಬೇಕು. ವಿದ್ಯೆ ಕಲಿಯುವುದ್ಕಕೆ ಬಡವ ಬಲ್ಲಿದ ಎಂಬ ಭೇದವಿಲ್ಲ. ಯಾರು ಶ್ರದ್ಧೆಯಿಂದ ಓದುತ್ತಾರೋ ಅವರಿಗೆ ವಿದ್ಯೆ ಒಲಿಯುತ್ತದೆ ಎಂದರು.
ಕುವೆAಪು ಕಾರಂಜಿ ೨೦೨೩-೨೪ ರ ಸ್ಟುಡೆಂಟ್ ಆಫ್ ದಿ ಇಯರ್ ಪುರಸ್ಕಾರಕ್ಕೆ ಭಾಜನರಾದ ಹತ್ತನೇ ತರಗತಿ ವಿದ್ಯಾರ್ಥಿನಿ ಎಚ್.ಆರ್. ಜೀವಿತ ಅವರನ್ನು ಶಾಸಕರು ಮತ್ತು ಸಂಘದ ಅಧ್ಯಕ್ಷರು ಗೌರವಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು.
ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಭಾತ್ಮೀಯದಾರ ಕೆ.ಎಂ. ಜಗದೀಶ್, ಸಂಘದ ಕಾರ್ಯದರ್ಶಿ ಎನ್.ಬಿ. ಗಣಪತಿ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷೆ ಪೂರ್ಣಿಮ ಗೋಪಾಲ್, ಒಕ್ಕಲಿಗರ ಯುವ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಲ್ಲಪ್ಪ, ಪ್ರಾಂಶುಪಾಲರಾದ ಮಿಲ್ಡೆçಡ್ ಗೋನ್ಸಾಲ್ವೆಸ್ ಇದ್ದರು.