ಕೂಡಿಗೆ, ಫೆ.೧೧ : ತಾಲೂಕು ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಅಡಿಯಲ್ಲಿ ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆಗೆ ಇಲಾಖೆಯ ಮುಖೇನ ೩. ಗ್ರಾಮ ಪಂಚಾಯತಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶಕ್ಕೆ ಸಂಬAಧಿಸಿದAತೆ ೫.ಕೋಟಿ ವೆಚ್ಚದ ಕಾಮಗಾರಿಗೆ ಸಂಬAಧಿಸಿದ ಇಲಾಖೆಯ ಮೂಲಕ ಸರಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಈ ಯೋಜನೆಯಲ್ಲಿ ಕೂಡಿಗೆ, ಕೂಡುಮಂಗಳೂರು ಐಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವು ಗ್ರಾಮಗಳು ಸೇರ್ಪಡೆಗೊಂಡAತೆ ಹಾರಂಗಿ ನದಿಯಿಂದ ಆಧುನಿಕ ತಂತ್ರಜ್ಞಾನದ ಯಂತ್ರಗಳ ಅಳವಡಿಕೆ ಮೂಲಕ ನೀರನ್ನು ಎತ್ತಿ, ಯಡವನಾಡು ಸಮೀಪದ ಶಾಲೆ ಹಿಂಭಾಗದ ಜಾಗದಲ್ಲಿ ಬೃಹತ್ ಪ್ರಮಾಣದ ನೀರಿನ ಟ್ಯಾಂಕ್ ನಿರ್ಮಾಣ ಮಾಡಿ ಅದರ ಮೂಲಕ ಮೂರು ಗ್ರಾಮ ಪಂಚಾಯತಿಯ ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ಬೃಹತ್ ಯೋಜನೆ ಇದಾಗಿದೆ.

ಇದಕ್ಕೆ ಸಂಬAಧಿಸಿದAತೆ ಕ್ರಿಯಾ ಯೋಜನೆಗಳನ್ನು ಸಿದ್ದಪಡಿಸಿ ಅದಕ್ಕೆ ತಗಲುವ ವೆಚ್ಚದ ಅನುಮೋದನೆಯ ನಿಯಮಾನುಸಾರ ಇಲಾಖೆಯ ಮುಖೇನ ೫. ಕೋಟಿ ವೆಚ್ಚ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಲಾಗಿದೆ. ಬಹು ಕುಡಿಯುವ ನೀರಿನ ಸರಬರಾಜು ಯೋಜನೆಗೆ ಸಂಬAಧಿಸಿದAತೆ ಈಗಾಗಲೇ ರಾಜ್ಯ ಮಟ್ಟದ ಅಧಿಕಾರಿ ವರ್ಗದವರು ಸ್ಧಳ ಪರಿಶೀಲನೆ ನಡೆಸಿ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಹಣ ಬಿಡುಗಡೆಗೊಂಡ ನಂತರ ಕ್ರಿಯಾ ಯೋಜನೆ ಅನುಗುಣವಾಗಿ ಕಾಮಗಾರಿಗಳು ಆರಂಭಗೊಳ್ಳಲಿವೆ ಎಂಬ ಮಾಹಿತಿ ತಿಳಿದುಬಂದಿದೆ.