ರೈತರ ಮೇಲೆ ಆಶ್ರುವಾಯು ಪ್ರಯೋಗ-ಹಲವರು ವಶಕ್ಕೆ

ನವದೆಹಲಿ, ಫೆ. ೧೩: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊAಡು ರಾಷ್ಟç ರಾಜಧಾನಿ ದೆಹಲಿಯತ್ತ ಹೊರಟಿರುವ ಸಾವಿರಾರು ರೈತರು ಪಂಜಾಬ್ ಮತ್ತು ಹರ್ಯಾಣ ನಡುವಿನ ಶಂಭು ಗಡಿಯಲ್ಲಿ ಸೇರುತ್ತಿದ್ದಂತೆಯೇ ಪೊಲೀಸರು ಅವರತ್ತ ಅಶ್ರುವಾಯು ಪ್ರಯೋಗಿಸಿ ಪ್ರತಿಭಟನಾನಿರತರನ್ನು ಚದುರಿಸಲು ಯತ್ನಿಸಿದ್ದಾರೆ. ಚಂಡೀಗಢದ ಅಂಬಾಲಾದ ಶಂಭು ಗಡಿಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ರೈತರ ದೆಹಲಿ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಲವರ ಗುಂಪೊAದು ಮುರಿಯಲು ಯತ್ನಿಸಿದ್ದು, ಈ ವೇಳೆ ಹರಿಯಾಣ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆಂದು ತಿಳಿದುಬಂದಿದೆ. ಬ್ಯಾರಿಕೇಡ್‌ಗಳಿಂದ ದೂರವಿರಲು ಹರಿಯಾಣ ಪೊಲೀಸರು ಸೂಚಿಸಿದರೂ, ಕೆಲವರು ಬ್ಯಾರಿಕೇಡ್‌ಗಳ ಮೇಲೆ ನಿಂತಿದ್ದರು. ಕೆಲವರು ಕಬ್ಬಿಣದ ಬ್ಯಾರಿಕೇಡ್ ಅನ್ನು ಮುರಿದು ಸೇತುವೆಯಿಂದ ಘಗ್ಗರ್ ನದಿಗೆ ಎಸೆಯಲು ಪ್ರಯತ್ನಿಸಿದರು. ಕೇಂದ್ರ ಸರ್ಕಾರದ ವಿರುದ್ಧ ರೈತರ ಈ ಬೃಹತ್ ದಿಲ್ಲಿ ಚಲೋ ಯಾತ್ರೆಯನ್ನು ತಡೆಯಲು ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಪೊಲೀಸರು ವ್ಯಾಪಕ ವ್ಯವಸ್ಥೆಯನ್ನು ಮಾಡಿದ್ದು, ದೆಹಲಿಯ ಗಡಿಗಳಾದ ಸಿಂಘು, ಟಿಕ್ರಿ ಮತ್ತು ಯಪಿ ಗೇಟ್ ಅನ್ನು ಸೀಲ್ ಮಾಡಿದ್ದಾರೆ.

ಬಂಧನಕ್ಕೊಳಗಾಗಿದ್ದ ತಮಿಳುನಾಡಿನ ಮೀನುಗಾರರ ಬಿಡುಗಡೆ

ಚೆನ್ನೆöÊ, ಫೆ. ೧೩: ಇತ್ತೀಚೆಗೆ ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ ತಮಿಳುನಾಡಿನ ೧೮ ಭಾರತೀಯ ಮೀನುಗಾರರು ಮಂಗಳವಾರ ತವರಿಗೆ ಮರಳಿದ್ದಾರೆ. ಕೊಲಂಬೊದಿAದ ವಿಮಾನದ ಮೂಲಕ ಚೆನ್ನೆöÊಗೆ ಆಗಮಿಸಿದ ಅವರನ್ನು ತಮಿಳುನಾಡು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಬಿಜೆಪಿಯ ಕೆಲವು ಕಾರ್ಯಕರ್ತರು ಬರಮಾಡಿಕೊಂಡರು. ಕಳೆದ ತಿಂಗಳು ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಲಂಕಾ ನೌಕಾಪಡೆ ಮೀನುಗಾರರನ್ನು ಬಂಧಿಸಿ ಅಲ್ಲಿನ ಜೈಲಿನಲ್ಲಿ ಇರಿಸಿತ್ತು.. ಸ್ಥಳೀಯ ನ್ಯಾಯಾಲಯವು ಈ ತಿಂಗಳ ಆರಂಭದಲ್ಲಿ ಅವರನ್ನು ಬಿಡುಗಡೆ ಮಾಡಲು ಆದೇಶಿಸಿತ್ತು. ನಂತರ ಅವರನ್ನು ಅಲ್ಲಿನ ಶಿಬಿರದಲ್ಲಿ ಇರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿಕೆಶಿ ಅಕ್ರಮ ಆಸ್ತಿ ಅರೋಪ ಅರ್ಜಿ ವಿಚಾರಣೆ ಮುಂದಕ್ಕೆ

ಬೆAಗಳೂರು, ಫೆ. ೧೩: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬAಧಿಸಿದAತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಲಾದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇದೇ ೨೯ಕ್ಕೆ ನಿಗದಿಪಡಿಸಿದೆ. ಈ ಸಂಬAಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಲ್ಲಿಸಿರುವ ರಿಟ್ ಅರ್ಜಿ ಹಾಗೂ ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಿರುವುದನ್ನು ತಡೆಯಬೇಕು ಎಂದು ಕೋರಿ ಸಿಬಿಐ ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಮಧ್ಯಂತರ ಮತ್ತು ಮೂಲ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದರು. ಅಂತೆಯೇ, ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಕೆAಪುಕೋಟೆಗೆ ಪ್ರವಾಸಿಗರ ಭೇಟಿ ನಿರ್ಬಂಧ

ನವದೆಹಲಿ, ಫೆ. ೧೩: ರಾಷ್ಟç ರಾಜಧಾನಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಭದ್ರತೆಗಾಗಿ ಕೆಂಪುಕೋಟೆಗೆ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿವಾಗಿ ನಿರ್ಬಂಧಿಸಲಾಗಿದೆ ಎಂದು ಎಎಸ್‌ಐ ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ ಹಳೆಯ ದೆಹಲಿಯಲ್ಲಿರುವ ಯುನೆಸ್ಕೊ ವಿಶ್ವ ಪರಂಪರೆಯ ತಾಣವಾದ ಮೊಘಲ್ ಸ್ಮಾರಕವನ್ನೂ ಸೋಮವಾರ ರಾತ್ರಿ ಬಂದ್ ಮಾಡಲಾಗಿದ್ದು, ಬಿಗಿ ಭದ್ರತೆ ನಿಯೋಜಿಸಲಾಗಿದೆ. ಮುಂದಿನ ಆದೇಶದವರೆಗೂ ಪ್ರವಾಸಿಗರು ಭೇಟಿ ನೀಡುವಂತಿಲ್ಲ ಎಂದು ತಿಳಿಸಲಾಗಿದೆ.

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಶರದ್ ಪವಾರ್

ನವದೆಹಲಿ, ಫೆ. ೧೩: ಮಹಾರಾಷ್ಟç ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ರಾಷ್ಟಿçÃಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಎಂದು ಗುರುತಿಸಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಹಿರಿಯ ನಾಯಕ ಶರದ್ ಪವಾರ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ವಕೀಲ ಅಭಿಷೇಕ್ ಜೆಬರಾಜ್ ಮೂಲಕ ಪವಾರ್ ಮನವಿ ಸಲ್ಲಿಸಿದ್ದಾರೆ. ಶರದ್ ಪವಾರ್ ಬಣವು ಈ ಸಂಬAಧ ಯಾವುದೇ ಅರ್ಜಿ ಸಲ್ಲಿಸಿದರೂ ಅದರ ವಿಚಾರಣೆಗೂ ಮುನ್ನ ನಮ್ಮ ವಾದ ಆಲಿಸಬೇಕೆಂದು ಅಜಿತ್ ಪವಾರ್ ಬಣವು ವಕೀಲ ಅಭಿಕಲ್ಸ್ ಪ್ರತಾಪ್ ಸಿಂಗ್ ಮೂಲಕ ಕೇವಿಯಟ್ ಸಲ್ಲಿಸಿದೆ. ತಾ. ೬ ರಂದು ಚುನಾವಣಾ ಆಯೋಗವು ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದು ಘೋಷಿಸಿತ್ತು. ಆ ಮೂಲಕ, ಪಕ್ಷದ ಸಂಸ್ಥಾಪಕ ಶರದ್ ಪವಾರ್ ಅವರಿಗೆ ದೊಡ್ಡ ಹಿನ್ನಡೆಯಾಗಿತ್ತು.

ವಕ್ಫ್ ಆಸ್ತಿಗಳ ಸಂರಕ್ಷಣೆಗೆ ರೂ. ೩೯.೮೪ ಕೋಟಿ ಅನುದಾನ

ಬೆಂಗಳೂರು, ಫೆ. ೧೩: ರಾಜ್ಯದ ಒಟ್ಟು ೪೧೬ ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌAಡ್ ಗೋಡೆ ನಿರ್ಮಾಣ ಮಾಡಲು ಒಟ್ಟು ರೂ. ೩೯.೮೪ ಕೋಟಿ ಅನುದಾನವನ್ನು ಮಂಜೂರು ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಸದರಿ ವಕ್ಫ್ ಆಸ್ತಿಗಳು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿ ಯಾಗಿರುವ ಬಗ್ಗೆ ವಿವರಗಳನ್ನು ಪಡೆದು ಸಂಬAಧಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ, ಗ್ರಾಂಟ್-ಇನ್-ಏಡ್ ನಿಯಮಗಳ ಪ್ರಕಾರ ಅನುದಾನ ಮಂಜೂರು ಮಾಡಲು ಅರ್ಹರಿರುವ ಬಗ್ಗೆ ದೃಢಪಡಿಸಿಕೊಂಡ ನಂತರ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು. ತದನಂತರ ಕಾಮಗಾರಿಯ ಪ್ರಗತಿಯನ್ನು ಕಡ್ಡಾಯವಾಗಿ ಪರಿಶೀಲಿಸಿ, ಮೊದಲನೇ ಕಂತಿನಲ್ಲಿ ಬಿಡುಗಡೆಯಾದ ಅನುದಾನಕ್ಕೆ ಹಣ ಬಳಕೆ ಪ್ರಮಾಣ ಪತ್ರವನ್ನು ಪಡೆದ ನಂತರ ಮುಂದಿನ ಆರ್ಥಿಕ ವರ್ಷದಲ್ಲಿ ಎರಡನೇ ಕಂತಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.