ಗೋಣಿಕೊಪ್ಪಲು, ಫೆ. ೧೩: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಗೋಣಿಕೊಪ್ಪಲುವಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮವು ಜರುಗಿತು.ಕಾರ್ಯಕ್ರಮದಲ್ಲಿ ದಸಂಸ ಕೊಡಗು ಜಿಲ್ಲಾ ಸಂಚಾಲಕರಾದ ಹೆಚ್.ಆರ್.ಸತೀಶ್ (ಸಿಂಗಿ) ಅಧಿಕಾರ ಸ್ವೀಕರಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕರಾದ ಟಿ.ಎನ್.ಗೋವಿಂದಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಸಂಚಾಲಕರು ಸೇರಿದಂತೆ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು. ಗೋಣಿಕೊಪ್ಪಲುವಿನ ಪತ್ರಕರ್ತ ಹಾಗೂ ಸಾಹಿತಿಗಳಾದ ಜಗದೀಶ್ ಜೋಡುಬೀಟಿ, ದಿಕ್ಸೂಚಿ ಭಾಷಣ ಮಾಡುವ ಮೂಲಕ ಅಂಬೇಡ್ಕರ್‌ರವರ ಮೂಲ ತತ್ವ,ಆದರ್ಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ತಿಳುವಳಿಕೆ ನೀಡುವ ಕೆಲಸ ಸಂಘಟನೆಗಳಿAದ ಆಗಬೇಕಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗೋಣಿಕೊಪ್ಪ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷರಾದ ಕಡೇಮಾಡ ಸುನೀಲ್ ಮಾದಪ್ಪ, ಮರ್ಚೆಂಟ್ ಬ್ಯಾಂಕಿನ ಅಧ್ಯಕ್ಷರಾದ ಕಿರಿಯಮಾಡ ಅರುಣ್ ಪೂಣಚ್ಚ, ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ ಸೇರಿದಂತೆ ಇನ್ನಿತರ ಗಣ್ಯರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲಾ ಸಂಚಾಲಕರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಸತೀಶ್ ಸಿಂಗಿ ಸಂಘಟನೆಯ ಮೂಲಕ ನೊಂದ ಜನರಿಗೆ ನ್ಯಾಯ ಒದಗಿಸುವುದು ಮೂಲ ಉದ್ದೇಶವಾಗಿದೆ. ಬಡತನದಲ್ಲಿರುವ ಶೋಷಿತ ಕುಟುಂಬಗಳ ವಿದ್ಯಾರ್ಥಿ ಗಳನ್ನು ಗುರುತಿಸಿ ಶೈಕ್ಷಣಿಕವಾಗಿ ಇವರನ್ನು ವಿದ್ಯಾವಂತರನ್ನಾಗಿ ಮಾಡುವ ಪ್ರಯತ್ನ ಆರಂಭಿಸಲಾಗುವುದು ಎಂದರು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಕೋಡಿಗಲ್ ರಮೇಶ್ ನೂತನವಾಗಿ ನೇಮಕಗೊಂಡ ಜಿಲ್ಲಾ ಸಂಚಾಲಕ ಸಿಂಗಿ ಸತೀಶ್‌ರವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜ್ಯ ಸಂಘಟನಾ ಸಂಚಾಲಕರಾದ ತರಿಕೆರೆ ಎನ್.ವೆಂಕಟೇಶ್, ರಾಜ್ಯ ಸಂಚಾಲಕಿ ಎಂ.ಆರ್.ನವ್ಯಶ್ರೀ, ಎಂ.ವಿ. ಭವಾನಿ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಎಂ.ಮAಜುಳ, ಕಟ್ಟಡ ಕಾರ್ಮಿಕರ ಸಂಘದ ಮೆಹಬೂಬ್, ಕೊಡಗು ಜಿಲ್ಲಾ ಸಂಘಟನಾ ಸಂಚಾಲಕಿ ಲಕ್ಷಿö್ಮ, ಸೇರಿದಂತೆ ಇನ್ನಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರುಗಳಾದ ಪ್ರಮೋದ್ ಗಣಪತಿ, ಎಂ.ಮAಜುಳ, ಮುಖ್ಯ ಶಿಕ್ಷಕರಾದ ಹೆಚ್.ಕೆ. ಕುಮಾರ್, ಶಿಕ್ಷಕರ ಸಂಘದ ಅಧ್ಯಕ್ಷರಾದ ಸುರೇಂದ್ರ, ಶಿಕ್ಷಕಿ ಹೆಚ್.ಎಂ. ಪಾರ್ವತಿ, ಪಿಡಿಒ ತಿಮ್ಮಯ್ಯ ಹಾಗೂ ಪತ್ರಕರ್ತ ಜಗದೀಶ್ ಜೋಡುಬೀಟಿರವರನ್ನು ಸನ್ಮಾನಿಸಿ ಗೌರವಿಸಲಾಯಿತು. ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಎಸ್.ಟಿ.ಗಿರೀಶ್ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಗೋಣಿಕೊಪ್ಪ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದರು. ಜಾಥಾಕ್ಕೆ ಗೋಣಿಕೊಪ್ಪಲುವಿನ ಗ್ರಾ.ಪಂ. ಪಿಡಿಒ ತಿಮ್ಮಯ್ಯ ಚಾಲನೆ ನೀಡಿದರು.

-ಹೆಚ್.ಕೆ.ಜಗದೀಶ್