ಮಡಿಕೇರಿ, ಫೆ. ೧೩: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ವತಿಯಿಂದ ಫೆಬ್ರವರಿ ೨೫ ರಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಪತ್ರಿಕಾ ಭವನದಲ್ಲಿ ಟಿ.ಪಿ.ರಮೇಶ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.

ಈ ಸಂದರ್ಭ ೨೦೨೨/೨೩ ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸೋಮವಾರಪೇಟೆ ತಾಲೂಕು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ ವಿದ್ಯಾರ್ಥಿ ಬೆಸಿಲ್ ಸಿ. ಬಿ. ಇವರನ್ನು ದತ್ತಿ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಹಾಗೂ ಜಿಲ್ಲೆಯ ಎಲ್ಲಾ ಕನ್ನಡ ಮಾಧ್ಯಮದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಮುಕ್ತವಾಗಿ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.

ವಿಷಯ: ಕಲೆ ಮತ್ತು ಸಾಹಿತ್ಯ ಬೆಳೆಸುವಲ್ಲಿ ಶಿಕ್ಷಕರ ಪಾತ್ರ. ಸಮಯ ೫ ನಿಮಿಷ. ಮೊದಲು ಹೆಸರು ನೊಂದಾಯಿಸಿದ ಹತ್ತು ಮಂದಿಗೆ ಮಾತ್ರ ಅವಕಾಶ ನೀಡಲಾಗುವುದು. ಇದು ಜಿಲ್ಲಾ ಮಟ್ಟದಲ್ಲಿ ನಡೆಯುವ ಸ್ಪರ್ಧೆ ಆಗಿದ್ದು ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಶಿಕ್ಷಕರು ಬಳಗದ ಕಾರ್ಯದರ್ಶಿ ಭಾರತಿ ರಮೇಶ್ ೯೪೪೮೫೮೭೯೧೫ ಹಾಗೂ ಕೋಶಾಧಿಕಾರಿ ಕಡ್ಲೇರ ತುಳಸಿ ಮೋಹನ್ ೭೦೨೨೮೮೪೮೦೩ ಈ ಮೊಬೈಲ್ ಸಂಖ್ಯೆಗೆ ಕರೆಮಾಡಿ ತಾ.೨೦ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಬಳಗದ ಅಧ್ಯಕ್ಷರಾದ ಲೋಕನಾಥ್ ಅಮೇಚೂರ್ ಅವರು ತಿಳಿಸಿದ್ದಾರೆ.