ಪಾಲಿಬೆಟ್ಟ, ಫೆ. ೧೪: ಭಾವೈಕ್ಯತೆಯ ಧಾರ್ಮಿಕ ಕೇಂದ್ರ ಎಂದೇ ಇತಿಹಾಸ ಪ್ರಸಿದ್ಧಿಯಾಗಿರುವ ಪಾಲಿಬೆಟ್ಟ ಆರ್ಕಾಡ್ ಪಟ್ಟಾಣ್ ಬಾಬ ಶಾಹ್ ವಲಿಯವರ ಉರೂಸ್ ಸಮಾರೋಪ ಸಮಾರಂಭದ ಸರ್ವ ಧರ್ಮ ಸಮ್ಮೇಳನ ದರ್ಗಾ ಆವರಣದಲ್ಲಿ ನಡೆಯಿತು.

ಕನ್ನಡ ಮಠದ ಮಠಾಧಿಕಾರಿ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಸರ್ವ ಧರ್ಮದ ಸಮನ್ವಯ ಕೇಂದ್ರಗಳಿAದ ಶಾಂತಿ ಸಹ ಬಾಳ್ವೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಲಿದ್ದು ಇಂತಹ ಸರ್ವಧರ್ಮ ಸಮ್ಮೇಳನಗಳ ಮೂಲಕ ಭಾವೈಕ್ಯತೆಯೊಂದಿಗೆ ಒಗ್ಗೂಡಿ ಆಚರಣೆಗಳು ಮಾಡಿದಲ್ಲಿ ಸಹೋದರತ್ವ ನಿರ್ಮಾಣವಾಗಲು ಸಾಧ್ಯವಾಗಲಿದೆ.

ನಾವು ನಡೆಯುವ ದಾರಿಗಳು ಬೇರೆ ಇರಬಹುದು ಆದರೆ ತಲುಪುವ ಗುರಿ ಮಾತ್ರ ಭಗವಂತನ ಸನ್ನಿಧಿಗೆ. ಶರಣರ ಹಿತವಚನಗಳನ್ನ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯ ಬೇಕೆಂದು ಹೇಳಿದ ಅವರು ಪ್ರತಿ ಯೊಬ್ಬರು ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.

ಪಾಲಿಬೆಟ್ಟ ಸಿ.ಎಸ್.ಐ. ಚರ್ಚ್ನ ಶಶಿಕುಮಾರ್ ಮಾತನಾಡಿ, ದೇವರು ಮಾನವನ ರೂಪದಲ್ಲಿ ಬದುಕಲು ಅವಕಾಶ ಕಲ್ಪಿಸಿದೆ ನಾವೆಲ್ಲರೂ ಶಾಂತಿ ಸಹಬಾಳ್ವೆಯ ಸಹೋದರತ್ವದೊಂದಿಗೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಲಿದ್ದು, ಎಲ್ಲಾ ಧರ್ಮಗಳ ಬೋಧನೆಯನ್ನು ಅನುಸರಿಸಿದರೆ ನಾವು ಯಾರನ್ನು ದ್ವೇಷಿಸುವುದಿಲ್ಲ. ಎಲ್ಲ ಧರ್ಮಗಳ ಸಾರಾಂಶ ಒಂದೇ ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ. ಇಂತಹ ಸರ್ವ ಧರ್ಮ ಸಮ್ಮೇಳನಗಳು ಹೆಚ್ಚಾಗಿ ನಡೆದಲ್ಲಿ ಸೌಹಾರ್ದ ಸಮಾಜ ನಿರ್ಮಾಣ ಸಾಧ್ಯ ಎಂದರು.

ರಾಜ್ಯ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಶಾಪಿ ಸಹದಿ ಮಾತನಾಡಿ, ನಾವೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಭಾವೈಕ್ಯತೆಯಿಂದ ಬಾಳಿದಲ್ಲಿ ಯಾವುದೇ ಕಾರಣಕ್ಕೂ ನಮ್ಮನ್ನ ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ.

ಇತ್ತೀಚಿನ ದಿನಗಳಲ್ಲಿ ರಾಜಕೀಯ ಲಾಭಕ್ಕಾಗಿ ಮಂದಿರ ಮಸೀದಿಗಳನ್ನು ಬಳಸಿಕೊಂಡು ಕೋಮು ಭಾವನೆ ಗಳೊಂದಿಗೆ ಅಶಾಂತಿ ಸೃಷ್ಟಿಸಲು ಮುಂದಾಗುತ್ತಿರುವುದು ವಿಷಾದನೀಯ. ಈ ಜಗತ್ತಿನಲ್ಲಿ ಸರ್ವಧರ್ಮೀಯರು ಒಂದಾಗಿ ಜೀವನ ನಡೆಸುತ್ತಿರುವ ದೇಶ ಭಾರತವಾಗಿದೆ ಎಂದರು.

ಸಮಸ್ತ ಕೇಂದ್ರ ಮುಶಾವರ ಸದಸ್ಯ ಹಾಗೂ ಕೊಡಗು ಜಿಲ್ಲಾ ಖಾಝಿ ಎಂ.ಎA. ಅಬ್ದುಲ್ಲ ಫೈಜಿ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿ, ಧಾರ್ಮಿಕ ಕೇಂದ್ರಗಳು ಸೌಹಾರ್ದತೆಯ ಸಂಕೇತದ ಮೂಲಕ ಭಾವೈಕ್ಯತೆಯ ಕೇಂದ್ರಗಳಿಗೆ ಎಲ್ಲರೂ ಪಾಲ್ಗೊಳ್ಳುತ್ತಿರುವುದರಿಂದಲೇ ಗ್ರಾಮಗಳಲ್ಲಿ ಸೌಹಾರ್ದ ಸಮಾಜ ನಿರ್ಮಾಣವಾಗುತ್ತಿದೆ ಎಂದರು.

ಕಾAಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಪಿ.ಎ. ಅನೀಫ್, ವೀರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಹೆಚ್. ಮೊಹಮ್ಮದ್ ರಾಫಿ, ಅನ್ವಾರಲ್ ಉದಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಸಹನಿ, ಪಾಲಿಬೆಟ್ಟ ಜಮಾ ಮಸೀದಿ ಸಮಿತಿಯ ಅಧ್ಯಕ್ಷ ಪಿ.ಕೆ. ಇಸ್ಮಾಯಿಲ್ ಹಾಜಿ, ಖತೀಬ್ ಅಲಿ ಸಖಾಫಿ, ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ನಾಸರ್, ಕಮಿಟಿ ಉಪಾಧ್ಯಕ್ಷ ಸೈನುದ್ದಿನ್, ಪ್ರಧಾನ ಕಾರ್ಯದರ್ಶಿ ಸಮೀರ್ ಮುನ್ನ, ಕಾರ್ಯದರ್ಶಿ ಸಮೀರ್, ಖಜಾಂಚಿ ಮುಸ್ತಫ, ಪ್ರಮುಖರಾದ ಬಶೀರ್, ಫೈಝಲ್ ರಹಮಾನ್, ಮುನೀರ್, ಫೈಸಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣಾ ಕಾರ್ಯ ಮಾಡಲಾಯಿತು. ಪೊಲೀಸ್ ಬಿಗಿ ಬಂದೋಬಸ್ತ್ನೊAದಿಗೆ ಸುಗಮ ಸಂಚಾರ ವ್ಯವಸ್ಥೆ ಮಾಡಲಾಗಿತ್ತು.

ಕೇರಳದ ಹಲ್ವಾ ಸೇರಿದಂತೆ ಆಕರ್ಷಕ ತಿಂಡಿ ತಿನಿಸುಗಳು, ಆಟಿಕೆ ಸಾಮಗ್ರಿಗಳ ಮಾರಾಟ ಎಂದಿನAತೆ ಇತ್ತು. ಉರೂಸ್‌ನಲ್ಲಿ ಮಹಿಳೆಯರು, ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಜಾತಿ ಮತ ಭೇದವಿಲ್ಲದೆ ಎಲ್ಲ ಭಕ್ತಾದಿಗಳು ತಮ್ಮ ಇಷ್ಟಾರ್ಥ ಹರಕೆ ತೀರಿಸಿದರು. ಉರೂಸ್ ಅಂಗವಾಗಿ ಪಾಲಿಬೆಟ್ಟ ಪಟ್ಟಣ ದರ್ಗಾ ಆವರಣ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿತ್ತು.