ಸಿದ್ದಾಪುರ, ಫೆ. ೧೪: ವಿವಾಹಿತ ಕಾರ್ಮಿಕನೋರ್ವ ಎರಡು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ಘಟನೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತೋಟದ ಕಾರ್ಮಿಕ ಮಣಿ (೩೭) ಎಂಬಾತ ಲೈನ್ ಮನೆಯಲ್ಲಿ ವಾಸವಿದ್ದ ಅಂತರರಾಜ್ಯ ಕಾರ್ಮಿಕ ದಂಪತಿಯ ಎರಡು ವರ್ಷ ಪ್ರಾಯದ ಮಗುವಿನ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ಕಾರ್ಮಿಕರು ಹಿಡಿದು ಸಿದ್ದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಪೋಕ್ಸೋ ಕಾಯ್ದೆಯಡಿ ಎಫ್.ಐ.ಆರ್. ದಾಖಲಿಸಿಕೊಂಡು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾಯಿಸಿದ್ದಾರೆ. ಮಗುವನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.