ಬೆಂಗಳೂರು, ಫೆ. ೧೪: ಹೆಚ್.ಎಸ್.ಆರ್.ಪಿ. ಹೆಸರಲ್ಲಿ ಆನ್‌ಲೈನ್ ವಂಚನೆ ವ್ಯಾಪಕವಾಗಿ ನಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ವಾಹನಗಳಿಗೆ ಹೆಚ್.ಎಸ್. ಆರ್.ಪಿ. ಅಳವಡಿಸಿ ಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೆಚ್.ಎಸ್. ಆರ್.ಪಿ.) ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ ನೀಡಿದ ಗಡುವು ಸಮೀಪ ಬಂದಿರುವAತೆಯೇ ಈ ಅಂತಿಮ ಗಡುವಿನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ವಿಧಾನ ಮಂಡಲ ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಿದ್ದು, ಅವಧಿ ವಿಸ್ತರಣೆ ಮಾಡು ವಂತೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮೂರು ತಿಂಗಳು ಅವಧಿಯನ್ನು ವಿಸ್ತರಣೆ ಮಾಡು ವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸುವಂತೆ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಅವರು ಸರ್ಕಾರಕ್ಕೆ ಮನವಿ ಮಾಡಿದರು. ಈವರೆಗೆ ಹೆಚ್ಚಿನ ವಾಹನಗಳು ನೋಂದಣಿ ಮಾಡಿಸಿ ಕೊಂಡಿಲ್ಲ. ೧೮ ಲಕ್ಷ ವಾಹನಗಳಷ್ಟೇ ಈಗ ನೋಂದಣಿ ಆಗಿವೆ. ಅಲ್ಲದೆ, ಇದರ ಬಗ್ಗೆ ಆನ್‌ಲೈನ್ ವಂಚನೆ ಸಹ ನಡೆಯುತ್ತಿದೆ. ಹೀಗಾಗಿ ಅವಧಿಯನ್ನು ವಿಸ್ತರಣೆ ಮಾಡುವುದರ ಜೊತೆಗೆ ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನೋಂದಣಿಯನ್ನು ವಿಸ್ತರಣೆ ಮಾಡುವ ಬಗ್ಗೆ ಸರ್ಕಾರವೂ ಚಿಂತನೆ ನಡೆಸಿದ್ದು, ಮತ್ತೆ ಮೂರು ತಿಂಗಳು ಮುಂದಕ್ಕೆ ಬೆಂಗಳೂರು, ಫೆ. ೧೪: ಹೆಚ್.ಎಸ್.ಆರ್.ಪಿ. ಹೆಸರಲ್ಲಿ ಆನ್‌ಲೈನ್ ವಂಚನೆ ವ್ಯಾಪಕವಾಗಿ ನಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ವಾಹನಗಳಿಗೆ ಹೆಚ್.ಎಸ್. ಆರ್.ಪಿ. ಅಳವಡಿಸಿ ಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೆಚ್.ಎಸ್. ಆರ್.ಪಿ.) ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ ನೀಡಿದ ಗಡುವು ಸಮೀಪ ಬಂದಿರುವAತೆಯೇ ಈ ಅಂತಿಮ ಗಡುವಿನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ವಿಧಾನ ಮಂಡಲ ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಿದ್ದು, ಅವಧಿ ವಿಸ್ತರಣೆ ಮಾಡು ವಂತೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮೂರು ತಿಂಗಳು ಅವಧಿಯನ್ನು ವಿಸ್ತರಣೆ ಮಾಡು ವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸುವಂತೆ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಅವರು ಸರ್ಕಾರಕ್ಕೆ ಮನವಿ ಮಾಡಿದರು. ಈವರೆಗೆ ಹೆಚ್ಚಿನ ವಾಹನಗಳು ನೋಂದಣಿ ಮಾಡಿಸಿ ಕೊಂಡಿಲ್ಲ. ೧೮ ಲಕ್ಷ ವಾಹನಗಳಷ್ಟೇ ಈಗ ನೋಂದಣಿ ಆಗಿವೆ. ಅಲ್ಲದೆ, ಇದರ ಬಗ್ಗೆ ಆನ್‌ಲೈನ್ ವಂಚನೆ ಸಹ ನಡೆಯುತ್ತಿದೆ. ಹೀಗಾಗಿ ಅವಧಿಯನ್ನು ವಿಸ್ತರಣೆ ಮಾಡುವುದರ ಜೊತೆಗೆ ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನೋಂದಣಿಯನ್ನು ವಿಸ್ತರಣೆ ಮಾಡುವ ಬಗ್ಗೆ ಸರ್ಕಾರವೂ ಚಿಂತನೆ ನಡೆಸಿದ್ದು, ಮತ್ತೆ ಮೂರು ತಿಂಗಳು ಮುಂದಕ್ಕೆ ಅಲ್ಲದೆ, ಸರಿಯಾಗಿ ಅಳವಡಿಸದೇ ಇದ್ದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು. ನಾಗರಿಕರು ಹೆಚ್ಚುವರಿ ಹಣ ವಸೂಲಿ ಮಾಡುವಂತಹ ಡೀಲರ್‌ಗಳ ಮೇಲೆ ದೂರು ನೀಡಬೇಕು. ಸಾರಿಗೆ ಇಲಾಖೆಯ ಆಯುಕ್ತರಿಗೆ ದೂರು ನೀಡಿದರೆ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಪದೇ ಪದೆ ಗ್ರಾಹಕರಿಗೆ ಕಿರಿಕಿರಿ ಮಾಡಿದರೆ ಅಂತಹ ಡೀಲರ್‌ಗಳನ್ನು ಬ್ಲಾಕ್ ಲಿಸ್ಟ್ಗೆ ಸೇರಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಸಿದ್ದಾರೆ.