ಅಬುಧಾಬಿಯಲ್ಲಿ ಮೊದಲ ಹಿಂದೂ ಮಂದಿರ ಲೋಕಾರ್ಪಣೆ

ಅಬುಧಾಬಿ, ಫೆ. ೧೪: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಬುಧಾಬಿಯಲ್ಲಿ ಮೊಟ್ಟ ಮೊದಲ ಹಿಂದೂ ಮಂದಿರವನ್ನು ಉದ್ಘಾಟನೆ ಮಾಡಿದರು. ಸುಮಾರು ೭೦೦ ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮಂದಿರವನ್ನು ನಿರ್ಮಿಸಲಾಗಿದೆ. ಇಲ್ಲಿ ‘ಥ್ರೀಡಿ ಪ್ರಿಂಟಿAಗ್' ತಂತ್ರಜ್ಞಾನದಲ್ಲಿ ನಿರ್ಮಿಸಲಾಗಿದೆ ವಾಲ್ ಆಫ್ ಹಾರ್ಮೊನಿಯು ಮತ್ತೊಂದು ವಿಶೇಷವಾಗಿದೆ. ಎರಡು ದಿನಗಳ ಯುಎಇ ಪ್ರವಾಸದಲ್ಲಿರುವ ಮೋದಿ ಅವರು ಮಂಗಳವಾರ ಯುಎಇ ಅಧ್ಯಕ್ಷ ಶೇಖ್ ಮೊಹಮದ್ ಬಿನ್ ಜಯೇದ್ ಅಲ್ ನಹ್ಯಾನ್ ಅವರೊಂದಿಗೆ ಪ್ರಮುಖ ಸಭೆಗಳನ್ನು ಕೈಗೊಂಡರು. ರುಪೇ ಕಾರ್ಡ್ ಗಿಫ್ಟ್ ಕೊಡುವ ಮೂಲಕ ದೇಶದ ಫಿನ್‌ಟೆಕ್ ತಂತ್ರಜ್ಞಾನವನ್ನು ಯುಎಇಗೆ ಹಸ್ತಾಂತರಿಸಿದರು. ಇದರೊಂದಿಗೆ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ‘ಅಹ್ಲಾನ್ ಮೋದಿ ಕಾರ್ಯಕ್ರಮದಲ್ಲಿ' ಮಾತನಾಡಿದರು. ಬುಧವಾರ ಸ್ವಾಮಿ ನಾರಾಯಣ ಮಂದಿರವನ್ನು ಉದ್ಘಾಟಿಸಿದ್ದಾರೆ. ಅಬುಧಾಬಿಯಲ್ಲಿ ಹಿಂದೂ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಭಾರತದ ೪ ಭಾಷೆಗಳನ್ನು ಮಾತನಾಡಿ ಗಮನ ಸೆಳೆದರು. ನಿಮ್ಮ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ ಎಂಬುದನ್ನು ತಮಿಳು, ತೆಲುಗು, ಕನ್ನಡ, ಮಲಯಾಳಂನಲ್ಲಿ ಮಾತನಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್‌ನಿAದ ೩ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು, ಫೆ, ೧೪: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು ದೆಹಲಿ ಮೂಲದ ಅಜಯ್ ಮಕೆನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಿದೆ. ಜಿ.ಸಿ.ಚಂದ್ರಶೇಖರ್ ಮತ್ತು ನಾಸೀರ್ ಹುಸೇನ್‌ಗೆ ಮತ್ತೊಮ್ಮೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇನ್ನು ಎಐಸಿಸಿ ಖಜಾಂಚಿಯಾಗಿರುವ ದೆಹಲಿ ಮೂಲದ ಅಜಯ್ ಮಕೆನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದೆ.ಇದಕ್ಕೂ ಮುನ್ನ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಬಾಗಲಕೋಟೆ ಮೂಲದ ಸಂಘ ಪರಿವಾರದ ಕಟ್ಟಾಳು ನಾರಾಯಣ ಬಾಂಡಗೆ ಟಿಕೆಟ್ ಘೋಷಿಸಿತ್ತು. ಫೆಬ್ರವರಿ ೧೫ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು ಈ ಮೂವರು ನಾಯಕರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈಗಿನ ಸಂಖ್ಯಾಬಲದ ಆಧಾರದ ಮೇಲೆ ನೋಡುವುದಾದರೆ ಕಾಂಗ್ರೆಸ್ಸಿನಿAದ ಮೂವರು, ಬಿಜೆಪಿಯಿಂದ ಒಬ್ಬರು ನಿರಾಯಾಸವಾಗಿ ಗೆಲ್ಲಬಹುದಾಗಿದೆ.

ರಾಷ್ಟç ರಾಜಧಾನಿಯಲ್ಲಿ ಮುಂದುವರೆದ ರೈತರ ಪ್ರತಿಭಟನೆ

ನವದೆಹಲಿ, ಫೆ. ೧೪: ಕನಿಷ್ಟ ಬೆಂಬಲ ಬೆಲ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ೨ನೇ ದಿನಕ್ಕೆ ಕಾಲಿಟ್ಟಿದ್ದು, ರೈತರ ಪ್ರತಿಭಟನೆಗೆ ತಮಿಳುನಾಡು ರೈತರು ಕೂಡ ಬೆಂಬಲ ಘೋಷಣೆ ಮಾಡಿದ್ದಾರೆ. ಮಂಗಳವಾರ ಉಭಯ ರಾಜ್ಯಗಳ ನಡುವಿನ ಎರಡು ಗಡಿಗಳಲ್ಲಿ ಪ್ರತಿಭಟನಾಕಾರರು ಹರಿಯಾಣ ಪೊಲೀಸರೊಂದಿಗೆ ಮುಖಾಮುಖಿಯಾಗಿದ್ದರು. ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್ ಗಳನ್ನು ಮುರಿದು ದೆಹಲಿ ಪ್ರವೇಶಕ್ಕೆ ಯತ್ನಿಸಿದರು. ಈ ವೇಳೆ ಪೊಲೀಸರು ಅಶ್ರುವಾಯು ಮತ್ತು ಜಲ ಫಿರಂಗಿಗಳನ್ನು ಬಳಸಿ ಅವರನ್ನು ನಿಯಂತ್ರಿಸುವ ಪ್ರಯತ್ನ ಮಾಡಿದರು. ಹರಿಯಾಣದ ಜಿಂದ್ ಜಿಲ್ಲೆಯ ಗಡಿಯಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಬಳಸಿದ್ದರು.

ಡಿಲಿಮಿಟೇಶನ್ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

ಚೆನ್ನೆöÊ, ಫೆ. ೧೪: ಕೇಂದ್ರದ ಎನ್‌ಡಿಎ ಸರ್ಕಾರದ ‘ಒಂದು ರಾಷ್ಟç ಒಂದು ಚುನಾವಣೆ' ಡಿಲಿಮಿಟೇಶನ್ ವಿರುದ್ಧ ಬುಧವಾರ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಬುಧವಾರ ತಮಿಳುನಾಡು ವಿಧಾನಸಭೆಯಲ್ಲಿ ಎರಡು ನಿರ್ಣಯಗಳನ್ನು ಮಂಡಿಸಿದ್ದು, ಒಂದು ‘ಒಂದು ರಾಷ್ಟç, ಒಂದು ಚುನಾವಣೆ' ನೀತಿಯ ವಿರುದ್ಧ ಮತ್ತು ಎರಡನೆಯದು ಹೊಸ ಜನಗಣತಿಯ ಆಧಾರದ ಮೇಲೆ ಡಿಲಿಮಿಟೇಶನ್ ವಿರುದ್ಧ ನಿರ್ಣಯ ಮಂಡಿಸಿದ್ದಾರೆ. ‘ಒಂದು ರಾಷ್ಟç, ಒಂದು ಚುನಾವಣೆ' ಎಂಬುದು ಭಾರತ ಸರ್ಕಾರದ ಪ್ರಸ್ತಾವನೆಯಾಗಿದ್ದು, ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಗುರಿ ಹೊಂದಿದೆ. ಪ್ರಸ್ತುತ ಪ್ರಸ್ತಾವನೆಯು ಮಾಜಿ ರಾಷ್ಟçಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯ ಪರಿಶೀಲನೆಯಲ್ಲಿದೆ.

ಮಾಜಿ ಕಾರ್ಪೋರೇಟರ್‌ನಿಂದ ಶಾಸಕ ಗೋಪಾಲಯ್ಯಗೆ ಬೆದರಿಕೆ ಕರೆ

ಬೆಂಗಳೂರು, ಫೆ. ೧೪: ವಿಧಾನಸೌಧಕ್ಕೆ ಹೋಗುವಾಗ ಕೊಲ್ತೀನಿ, ಇಲ್ಲ ಮನೆಯೊಳಗೆ ಬಂದು ಕೊಲೆ ಮಾಡ್ತೀನಿ ಎಂದು ಬಿಜೆಪಿ ಶಾಸಕ ಗೋಪಾಲಯ್ಯಗೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳವಾರ ಮಧ್ಯರಾತ್ರಿ ಗೋಪಾಲಯ್ಯ ಅವರಿಗೆ ಕರೆ ಮಾಡಿದ ಮಾಜಿ ಕಾರ್ಪೊರೇಟರ್ ಪದ್ಮರಾಜ್? ನನಗೆ ಹಣ ಕೊಡಬೇಕು, ಕೊಡದಿದ್ದರೆ ನಿಮ್ಮನ್ನೂ ನಿಮ್ಮ ಕುಟುಂಬವನ್ನು ಕೊಲ್ಲದೆ ಬಿಡುವುದಿಲ್ಲ' ಎಂದು ಬೆದರಿಕೆ ಹಾಕಿದ್ದಾನೆ. ಈ ಕರೆ ಬಂದ ತಕ್ಷಣವೇ ಗೋಪಾಲಯ್ಯ ಅವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ, ವಿಧಾನಸಭೆಯ ಸ್ಪೀಕರ್ ಅವರಿಗೂ ಜೀವ ಬೆದರಿಕೆ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ ಪೊಲೀಸರು ಗೋಪಾಲಯ್ಯ ಅವರ ಮನೆಗೆ ಬಿಗಿ ಭದ್ರತೆ ವ್ಯವಸ್ಥೆ ಮಾಡಿದ್ದಾರೆ.

ಬಿಜೆಪಿ ಸೇರಿದ ಪಿಡಿಪಿ ನಾಯಕ ಆರ್ಶಿದ್ ಖಾನ್

ಜಮ್ಮು, ಫೆ. ೧೪: ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ (ಪಿಡಿಪಿ)ದ ಮಾಜಿ ನಾಯಕ ಆರ್ಶಿದ್ ಮೆಹಮೂದ್ ಖಾನ್ ತಮ್ಮ ಬೆಂಬಲಿಗರೊAದಿಗೆ ಬುಧವಾರ ಬಿಜೆಪಿಗೆ ಸೇರಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷ ರವೀಂದರ್ ರೈನಾ, ಮಾಜಿ ಉಪಮುಖ್ಯಮಂತ್ರಿ ಕವಿಂದರ್ ಗುಪ್ತಾ, ಸಂಸದ ಜುಗಲ್ ಕಿಶೋರ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಮೆಹಮೂದ್ ಖಾನ್ ಪಕ್ಷಕ್ಕೆ ಸೇರಿದರು. ಮೆಹಮೂದ್ ಖಾನ್ ಅವರು ರಜೆರಿ ಜಿಲ್ಲೆಯ ನೌಶೆರಾದ ದಾಂಡೇಸರ್ ಗ್ರಾಮ ಪಂಚಾಯ್ತಿಗೆ ಮೂರು ಸಲ ಸರ್‌ಪಂಚ್ ಆಗಿದ್ದರು. ೨೦೦೮ರ ವಿಧಾನಸಭಾ ಚುನಾವಣೆಯಲ್ಲಿ ನೌಶೆರಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳನ್ನು ಘೋಷಿಸುವುದು ಚುನಾವಣಾ ಆಯೋಗದ ವಿಶೇಷಾಧಿಕಾರವಾಗಿದೆ. ಆದರೆ ನಾವು ಯಾವುದೇ ಚುನಾವಣೆಗೆ ಸಿದ್ದರಿದ್ದೇವೆ. ಇದೇ ೨೦ರಂದು ಪ್ರಧಾನಿ ನರೇಂದ್ರ ಮೋದಿ ಜಮ್ಮುವಿಗೆ ಬರಲಿದ್ದು ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರವೀಂದರ್ ರೈನಾ ಹೇಳಿದರು.

ರಾಜಸ್ಥಾನದಿಂದ ಸೋನಿಯಾ ಗಾಂಧಿ - ಗುಜರಾತ್‌ನಿಂದ ಜೆ.ಪಿ. ನಡ್ಡಾ ಕಣಕ್ಕೆ

ನವದೆಹಲಿ, ಫೆ. ೧೪: ರಾಜ್ಯಸಭೆ ದೈವಾರ್ಷಿಕ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ರಾಜಸ್ಥಾನದಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕಣಕ್ಕಿಳಿಯಲಿದ್ದು, ಬಿಹಾರದಿಂದ ಡಾ. ಅಖೀಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ. ಮಹಾರಾಷ್ಟçದಿಂದ ಚಂದ್ರಕಾAತ್ ಹಂದೋರೆ ಕಣಕ್ಕಿಳಿಯಲಿದ್ದಾರೆ. ತಾ. ೨೭ ರಂದು ಒಟ್ಟು ೧೫ ರಾಜ್ಯಗಳ ೫೬ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ರಾಜ್ಯಸಭಾ ದೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಎರಡು ದಿನಗಳ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಹಾರಾಷ್ಟç ಮಾಜಿ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಮಹಾರಾಷ್ಟçದಿಂದ ರಾಜ್ಯಸಭೆಗೆ ಸ್ಪರ್ಧಿಸಲಿದ್ದಾರೆ. ಗುಜರಾತ್‌ನಿಂದ ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೋವಿಂದಭಾಯಿ ಧೋಲಾಕಿಯಾ, ಮಾಯಾಂಕ್ ಭಾಯ್ ನಾಯಕ್, ಮತ್ತು ಡಾ. ಜಶ್ವಂತ್ ಸಿನ್ಹ ಪರ್ಮಾರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಹಾರಾಷ್ಟçದಿಂದ ಚವ್ಹಾಣ್ ಸೇರಿದಂತೆ ಮೇಧಾ ಕುಲಕರ್ಣಿ, ಅಜಿತ್ ಗೋಪ್ಯಡೆ ಸ್ಪರ್ಧಿಸಲಿದ್ದಾರೆ. ಒಟ್ಟು ೧೫ ರಾಜ್ಯಗಳ ೫೬ ಸ್ಥಾನಗಳಿಗೆ ತಾ. ೨೭ ರಂದು ದೈವಾರ್ಷಿಕ ಚುನಾವಣೆ ನಡೆಯಲಿದೆ.