ಮಡಿಕೇರಿ, ಫೆ. ೧೩: ರಾಜ್ಯಾದ್ಯಂತ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆದಾರರಾಗಿ ಕೆಲಸ ಮಾಡುತ್ತಿರುವ ಪೌರ ಚಾಲಕರು, ನೀರುಗಂಟಿಗಳು, ಲೋಡರ್ಸ್, ಕ್ಲೀರ‍್ಸ್ ಸೇರಿದಂತೆ ಎಲ್ಲರನ್ನೂ ನೇರ ಪಾವತಿಗೆ ಅಳವಡಿಸಬೇಕು ಹಾಗೂ ಪೌರ ಕಾರ್ಮಿಕರ ಬಾಕಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದಿಂದ ನಗರಸಭೆ ಎದುರು ಪ್ರತಿಭಟನೆ ನಡೆಯಿತು.