ಕೂಡಿಗೆ, ಫೆ. ೧೫: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಗ್ರಾಮದಲ್ಲಿ ಕೂಸಿನ ಮನೆ ಉದ್ಘಾಟನೆ ತಾ.೧೬ ರಂದು (ಇಂದು) ನಡೆಯಲಿದೆ. ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಉದ್ಘಾಟಿಸಲಿದ್ದು, ಉಪಾಧ್ಯಕ್ಷೆ ಶಶಿಕಲಾ, ಸದಸ್ಯರಾದ ಜ್ಯೋತಿ ಮಂಜುನಾಥ, ಈರಯ್ಯ, ಎಲ್. ಗಿರೀಶ್ ಸೇರಿದಂತೆ ಇಲಾಖೆಯ ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಗ್ರಾಮ ಪಂಚಾಯಿತಿ ಪ್ರಕಟಣೆ ತಿಳಿಸಿದೆ.