ಪೊನ್ನಂಪೇಟೆ, ಫೆ. ೧೫: ಪೊನ್ನಂಪೇಟೆ ಹಳ್ಳಿಗಟ್ಟುವಿನ ಕೊಡವ ಎಜುಕೇಷನ್ ಸೊಸೈಟಿಯ ಅಧೀನಕ್ಕೊಳಪಡುವ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಪಿ.ಯು. ಕಾಲೇಜಿನ ನೂತನ ಕಟ್ಟಡದ ಭೂಮಿ ಪೂಜೆ ನಡೆಯಿತು.

ಈ ಸಂದರ್ಭ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಡಾ.ಎಂ.ಸಿ. ಕಾರ್ಯಪ್ಪ, ಉಪಾಧ್ಯಕ್ಷ ಕೆ.ಎ. ಚಿಣ್ಣಪ್ಪ, ಕಾರ್ಯದರ್ಶಿ ಸಿ.ಪಿ. ರಾಕೇಶ್ ಪೂವಯ್ಯ, ಜಂಟಿ ಕಾರ್ಯದರ್ಶಿ ಸಿ.ಎಂ. ರಾಜ ನಂಜಪ್ಪ, ಖಜಾಂಚಿ ಕೆ.ಎನ್. ಉತ್ತಪ್ಪ, ಆಡಳಿತ ಮಂಡಳಿಯ ನಿರ್ದೇಶಕರು, ಸಿ.ಐ.ಟಿ. ಪ್ರಾಂಶುಪಾಲ ಡಾ. ಎಂ. ಬಸವರಾಜು, ಸಿ.ಐ.ಪಿ.ಯು.ಸಿ. ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ, ಆಡಳಿತಾಧಿಕಾರಿ ಜೀವನ್ ಚಿಣ್ಣಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.