ಗೂಂಡಾಗಿರಿ ಪದ ಬಳಕೆ-ಪರಿಷತ್ತಿನಲ್ಲಿ ವಾಕ್ಸಮರ

ಬೆಂಗಳೂರು, ಫೆ. ೧೫: ವಿಧಾನ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ವೇಳೆ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ಮಧ್ಯೆ ವಾಗ್ಯುದ್ದವೇ ನಡೆಯಿತು. ಕೋಲಾಹಲ ನಿಯಂತ್ರಣಕ್ಕೆ ಬಾರದಿದ್ದಾಗ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ೧೦ ನಿಮಿಷ ಮುಂದೂಡಿದರು. ಕೇಂದ್ರದ ಬಜೆಟ್‌ನಲ್ಲಿ ರೂ. ೫,೩೦೦ ಕೋಟಿ ಭದ್ರಾ ಮೇಲ್ದಂಡೆ ಯೋಜನೆ ಮೀಸಲಿಟ್ಟಿದ್ದೇವೆ ಎಂದಿದ್ದರು. ಈವರೆಗೂ ಅದನ್ನು ಬಿಡುಗಡೆ ಮಾಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು. ಸಿದ್ದರಾಮಯ್ಯರ ಭಾಷಣದ ಮಧ್ಯೆ ನಾನು ಮಾತನ್ನಾಡಬೇಕೆಂದು ಬಿಜೆಪಿಯ ರುದ್ರೇಗೌಡ ಕೈಮೇಲೆ ಮಾಡಿದರು. ಆಗ ಅವರನ್ನು ಸಿದ್ದರಾಮಯ್ಯ ಗದರಿದರು. ಇದೇನು ಪ್ರಶೋತ್ತರ ಸಮಯವೇ? ನಾನು ಮಾತನ್ನಾಡುತ್ತಿರುವುದು ಯು.ಬಿ. ವೆಂಕಟೇಶ್ ಅವರ ಪ್ರಶ್ನೆಯ ಮೇಲೆ. ಈಗಲೇ ಕೈ ಎತ್ತಿದ್ರೆ ಹೇಗೆ? ಎಂದು ಸಿದ್ದರಾಮಯ್ಯ ಜೋರು ಧ್ವನಿಯಲ್ಲಿ ಹೇಳಿದರು. ಗದ್ದಲದ ನಡುವೆ ಸಭಾಪತಿ ಮಧ್ಯ ಪ್ರವೇಶಿಸಿದರು. ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲಿ ಉತ್ತರ ಕೊಡುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ನೀವು ಗದ್ದಲ ಎಬ್ಬಿಸುವುದು ಸರಿಯಲ್ಲ ಎಂದು ಸಭಾಪತಿ ಸಮಾಧಾನ ಪಡಿಸಲು ಮುಂದಾದರು ನಾವು ಉತ್ತರ ಕೊಟ್ಟರೆ ತಡೆದುಕೊಳ್ಳಲು ಆಗಲ್ಲ ಎಂದು ಬಿಜೆಪಿ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, ಈಚಿಛಿಣ is ಚಿ ಈಚಿಛಿಣ ಎಂದರು. ಏನ್ರಿ, ಗೂಂಡಾಗಿರಿ ಮಾಡ್ತೀರಾ? ರಾಜ್ಯದ ಜನ ನೋಡುತ್ತಿದ್ದಾರೆ. ನಿಮ್ಮ ಗೂಂಡಾಗಿರಿಗೆ ನಾನು ಹೆದರಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಸದನದ ನಿಯಮಾವಳಿಗಳು ಬೇಕಾಗಿಲ್ಲ ಇವರಿಗೆ. ಮಧ್ಯದಲ್ಲಿ ಎದ್ದು ಗಲಾಟೆ ಮಾಡ್ತೀರಾ ಅಂದರೆ, ಇದು ಯಾವ ಲಕ್ಷಣನಾ? ಗೂಂಡಾಗಿರಿಗೆ ಹೆದರಲ್ಲ. ಗೂಂಡಾಗಿರಿಗೆ ಸೊಪ್ಪು ಹಾಕಲ್ಲ ಎಂದ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನ ಛೀ ಥು ಅಂತಾ ಇದ್ದಾರೆ ಎಂದರು. ಈ ವೇಳೆ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗಿದರು. ಗದ್ದಲದ ನಡುವೆ ಸದನವನ್ನು ೧೦ ನಿಮಿಷಗಳ ಕಾಲ ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿದರು.

ಹೆಚ್.ಡಿ. ದೇವೇಗೌಡ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು, ಫೆ. ೧೫: ಅನಾರೋಗ್ಯದ ಕಾರಣ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಗುರುವಾರ ಬೆಳಿಗ್ಗೆ ದೇವೇಗೌಡರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿನ ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ದಾಖಲಿಸಿಕೊಂಡು ನಿಗಾವಹಿಸಿದ್ದಾರೆ. ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ೯೦ ವರ್ಷದ ಹೆಚ್.ಡಿ. ದೇವೇಗೌಡ ಅವರು ಸಕ್ರಿಯ ರಾಜಕಾರಣದಲ್ಲಿದ್ದು, ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ.

ಬಾಂಡ್‌ಗಳ ಬಗ್ಗೆ ಆಯೋಗಕ್ಕೆ ಮಾಹಿತಿ ಸಲ್ಲಿಸಿ : ಸುಪ್ರೀಂಕೋರ್ಟ್

ನವದೆಹಲಿ, ಫೆ. ೧೫: ಸುಪ್ರೀಂಕೋರ್ಟ್ ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣಾ ಬಾಂಡ್‌ಗಳನ್ನು ನಿಷೇಧಿಸಿದ್ದು, ಚುನಾವಣಾ ಬಾಂಡ್‌ಗಳ ಯೋಜನೆ ಅಸಂವಿಧಾನಿಕ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ.ಆರ್. ಗವಾಯಿ, ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠ ಗುರುವಾರ ಸರ್ವಾನುಮತದ ತೀರ್ಪು ನೀಡಿದೆ. ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‌ಗಳ ಯೋಜನೆಯ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಚುನಾವಣಾ ಬಾಂಡ್‌ಗಳನ್ನು ನಿಷೇಧಿಸಿದ್ದು, ಮಾರ್ಚ್ ೬, ೨೦೨೪ ರೊಳಗೆ ಎಸ್‌ಬಿಐ, ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಎಸ್‌ಬಿಐ ನಗದೀಕರಣದ ದಿನಾಂಕ, ಮುಖಬೆಲೆಯ ದಿನಾಂಕ ಸೇರಿದಂತೆ ರಾಜಕೀಯ ಪಕ್ಷಗಳು ಎನ್ಚೇಸ್ ಮಾಡಿದ ಪ್ರತಿಯೊಂದು ಚುನಾವಣಾ ಬಾಂಡ್‌ನ ವಿವರಗಳನ್ನು ಬಹಿರಂಗಪಡಿಸಬೇಕು. ಚುನಾವಣಾ ಆಯೋಗವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾರ್ಚ್ ೧೩ ರೊಳಗೆ ಮಾಹಿತಿಯನ್ನು ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ೨೦೧೯ ರಿಂದ ಎಷ್ಟು ದೇಣಿಗೆ ಬಂದಿದೆ, ಎಷ್ಟು ಹಣವನ್ನು ರಾಜಕೀಯ ಪಕ್ಷಗಳು ಬಳಸಿಕೊಂಡಿದೆ ಎಂದು ಮಾಹಿತಿ ನೀಡಲು ಇದೇ ವೇಳೆ ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಕಪ್ಪು ಹಣಕ್ಕೆ ಕಡಿವಾಣ ಹಾಕಲು ಚುನಾವಣಾ ಬಾಂಡ್ ಯೋಜನೆ ಒಂದೇ ದಾರಿಯಲ್ಲ ಅದಕ್ಕೆ ಪರ್ಯಾಯ ಮಾರ್ಗಗಳಿವೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ರೈತರ ಬಿಡುಗಡೆಗೆ ಒತ್ತಾಯಿಸಿ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಫೆ. ೧೫: ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶ ಸರ್ಕಾರ ಬಂಧಿಸಿ ಜೈಲಿನಲ್ಲಿ ಇಟ್ಟಿರುವುದು ಸಂವಿಧಾನ ಬಾಹಿರ ಕ್ರಮ ಎಂದು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ರಾಜ್ಯದ ರೈತರ ಗುಂಪೊAದನ್ನು ಭೋಪಾಲ್‌ನಲ್ಲಿ ಬಂಧಿಸಿ ೪ ದಿನಗಳೇ ಕಳೆದಿವೆ. ಇನ್ನೂ ಅವರನ್ನು ಬಿಡುಗಡೆ ಮಾಡದೆ ವಾರಣಾಸಿಗೆ ವರ್ಗಾಯಿಸುತ್ತಿದ್ದಾರೆಂದು ತಿಳಿದುಬಂದಿದೆ. ಶಾಂತಿಯುತ ಪ್ರತಿಭನೆಯಲ್ಲಿ ಭಾಗವಹಿಸುವುದು ನಾಗರಿಕರ ಸಂವಿಧಾನಿಕ ಹಕ್ಕಾಗಿರುತ್ತದೆ. ತಮ್ಮ ಬೆಳೆಗಳಿಗೆ ಹೆಚ್ಚಿನ ಬೆಲೆ ಕೇಳುವ ರೈತರನ್ನು ಬಂಧಿಸಿ ಅವರಿಗೆ ಕಿರುಕುಳ ನೀಡುವುದು ಸಂವಿಧಾನ ಪರ ಕ್ರಮವಲ್ಲ ಖಂಡನೀಯ, ಕೂಡಲೇ ಅವರನನು ಬಿಡುಗಡೆ ಮಾಡಿ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಬೆಂಕಿಯ ಕೆನ್ನಾಲಿಗೆಗೆ ೫೦೦ ಎಕರೆ ಅರಣ್ಯ ಆಹುತಿ

ಬೆಂಗಳೂರು, ಫೆ. ೧೫: ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ದೇಶ-ವಿದೇಶಿಗರ ನೆಚ್ಚಿನ ಪ್ರವಾಸಿ ತಾಣವು ಆಗಿರುವ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿಯ ಕೆನ್ನಾಲಿಗೆಗೆ ೫೦೦ ಎಕರೆಯಷ್ಟು ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರಲ್ಲಿ ಹೋಗುವಾಗ ಚಾರಣಿಗನೊಬ್ಬ ಸಿಗರೇಟಿನ ತುಂಡು ಎಸೆದ ಪರಿಣಾಮ ಕಾಡ್ಗಿಚ್ಚು ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಕಂದಾಯ ಇಲಾಖೆಯೊಂದಿಗೆ ಮಾತುಕತೆ ನಡೆಸಿ ಕನಿಷ್ಟಮೂರು ತಿಂಗಳ ಕಾಲ ಅರಣ್ಯ ಪ್ರದೇಶ ಮತ್ತು ಸುತ್ತಮುತ್ತಲಿನ ಟ್ರೆಕ್ಕಿಂಗ್ ಮತ್ತು ಇತರ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಿಲ್ಲಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಏಪ್ರಿಲ್ ೧ ರಿಂದ ಪಡಿತರ ಚೀಟಿ ವಿತರಣೆ

ಬೆಂಗಳೂರು, ಫೆ. ೧೫: ರಾಜ್ಯಾದ್ಯಂತ ಪಡಿತರ ಚೀಟಿಗೆ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ ೩೧ ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ ೧ ರಿಂದ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಕಲಾಪದಲ್ಲಿಂದು ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಸದನದಲ್ಲಿ ಮಾತನಾಡಿದ ಶಾಸಕಿ ನಯನ ಮೋಟಮ್ಮ, ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಹಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ ಜೊತೆ ಲಿಂಕ್ ಆಗಿಲ್ಲ. ಇದರಿಂದ ಐದು ಕೆ.ಜಿ.ಯ ಅಕ್ಕಿಯ ಹಣ ಹಲವು ಫಲಾನುಭವಿಗಳಿಗೆ ಕೆಲವು ತಿಂಗಳಿAದ ತಲುಪುತ್ತಿಲ್ಲ. ಈ ಹಣ ಇಂತಹ ಫಲಾನುಭವಿಗಳಿಗೆ ಕೊಡುತ್ತಿದ್ದೀರಾ? ಇಲ್ಲವೇ ಎಂದು ಪ್ರಶ್ನಿಸಿದರು.