ಮಡಿಕೇರಿ, ಫೆ. ೧೫: ವನ್ಯಪ್ರಾಣಿಗಳ ಉತ್ಪನ್ನವನ್ನು ಅರಣ್ಯ ಇಲಾಖೆಗೆ ಹಿಂದಿರುಗಿಸುವ ವಿಚಾರದಲ್ಲಿ ಜಿಲ್ಲೆಯ ಜನ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಗೊಂದಲ ಪರಿಹಾರಕ್ಕೆ ಶ್ರಮಿಸ ಲಾಗುವುದು ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅಭಯ ನೀಡಿದ್ದಾರೆ.

ತಾ. ೧೫ ರಂದು ‘ಶಕ್ತಿ’ಯಲ್ಲಿ ಈ ಕುರಿತು ವರದಿ ಪ್ರಕಟಗೊಂಡ ಹಿನ್ನೆಲೆ ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಪೊನ್ನಣ್ಣ ಅವರು, ವನ್ಯಜೀವಿ ಉತ್ಪನ್ನಗಳನ್ನು ಅರಣ್ಯ ಇಲಾಖೆ ವಶಕ್ಕೆ ನೀಡುವ ಅಧಿನಿಯಮ ತಂದಿರುವುದು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ತಲತಲಾಂತರಗಳ ಹಿಂದೆ ಹಿರಿಯರಿಂದ ಬಳುವಳಿಯಾಗಿ ಬಂದ ವನ್ಯಪ್ರಾಣಿಗಳ ಉತ್ಪನ್ನವನ್ನು ಕೊಡಗು ಜಿಲ್ಲೆಯಲ್ಲಿ ಸಂಗ್ರಹಿಸಲಾಗಿದ್ದು, ಧಾರ್ಮಿಕ ಕಾರ್ಯ ಗಳಲ್ಲಿಯೂ ಬಳಕೆ ಮಾಡಲಾಗುತ್ತಿದೆ. ಜೊತೆಗೆ ಆಭರಣಗಳಲ್ಲಿಯೂ ವನ್ಯಪ್ರಾಣಿ ಉತ್ಪನ್ನದ ಬಳಕೆ ಇದೆ. ಈ ನಿಯಮ ಜಾರಿಗೊಂಡ ಬಳಿಕ ಜಿಲ್ಲೆಯ ಜನತೆ ಆತಂಕವನ್ನು ತೋಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಈ ವಿಚಾರ ಸಮಸ್ಯೆ ಉಂಟು ಮಾಡುತ್ತದೆ. ಈ ಹಿಂದೆ ಈ ಕ್ರಮದ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದೇನೆ. ಈ ವಿಚಾರದಲ್ಲಿ ಯಾರೂ ಆತಂಕಪಡಬೇಡಿ. ಸೂಕ್ತ ಪರಿಹಾರ ಕಂಡುಕೊಳ್ಳುವ

(ಮೊದಲ ಪುಟದಿಂದ) ಕೆಲಸ ಮಾಡಲಾಗುವುದು. ಮುಖ್ಯಮಂತ್ರಿ, ಅರಣ್ಯ ಸಚಿವರ ಗಮನ ಸೆಳೆಯುವ ಪ್ರಯತ್ನ ಈಗಾಗಲೇ ಮಾಡಲಾಗಿದೆ ಎಂದರು.

ರಾಜ್ಯ ಸರಕಾರ ಒಳ್ಳೆ ಉದ್ದೇಶದಿಂದ ಕಾನೂನು ಜಾರಿಗೊಳಿಸಿದೆ. ಆದರೆ, ಕೊಡಗಿನಲ್ಲಿ ತೊಂದರೆಯಾಗಿದೆ. ಜಿಲ್ಲೆಯ ಜನ ತಾಳ್ಮೆ ವಹಿಸಬೇಕು. ಸರಕಾರದ ಮಟ್ಟದಲ್ಲಿ ಪರಿಹಾರ ದೊರೆಯದಿದ್ದಲ್ಲಿ. ನ್ಯಾಯಾಂಗದ ಮೂಲಕ ಪರಿಹಾರ ಕಂಡುಕೊಳ್ಳಲಾ ಗುವುದು. ಜಿಲ್ಲೆಯಲ್ಲಿ ತಲಾತಲಾಂತ ರಗಳಿಂದ ನಡೆದು ಕೊಂಡ ಬಂದ ಪದ್ಧತಿಗೆ ಧಕ್ಕೆ ಬರದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಸಮಯವಕಾಶ ನೀಡಿದರೆ ಸೂಕ್ತ ಪರಿಹಾರ ಕಂಡುಕೊಳ್ಳಬಹುದು ಎಂದು ಎ.ಎಸ್. ಪೊನ್ನಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.