ನಾಪೋಕ್ಲು, ಫೆ. ೧೫: ಇಲ್ಲಿಗೆ ಸಮೀಪದ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಮತ್ತು ಆರೋಗ್ಯ ಇಲಾಖೆಯ ಸಹಕಾರದಿಂದ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮವನ್ನು ಮೂರ್ನಾಡಿನಲ್ಲಿ ಹಮ್ಮಿಕೊಳ್ಳಲಾಯಿತು.

ಪಂಚಾಯಿತಿ ಎದುರಿನ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಸಾರ್ವಜನಿಕರಿಗೆ ಬಿಪಿ, ಶುಗರ್ ಸೇರಿದಂತೆ ವಿವಿಧ ತಪಾಸಣೆ ಮಾಡಿ ಸೂಕ್ತ ಮಾರ್ಗದರ್ಶನವನ್ನು ನೀಡಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ, ಉಪ ಅಧ್ಯಕ್ಷ ರೇಖಾ ಬಿ.ಎಸ್., ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಮೌಳಿ, ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.