ಪೊನ್ನಂಪೇಟೆ, ಫೆ. ೧೫: ಅರಣ್ಯಶಾಸ್ತç ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆ ಹುದ್ದೆಯಲ್ಲಿ ಶೇ.೧೦೦ ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ, ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳ ಮುಷ್ಕರ ೭ನೇ ದಿನಕ್ಕೆ ಕಾಲಿಟ್ಟಿದ್ದು, ತಾ.೧೬ ರಂದು (ಇಂದು) ಮಡಿಕೇರಿ ಹಳೆ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಜಾಥಾ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಕಳೆದ ೭ ದಿನಗಳಿಂದ ತರಗತಿ ಬಹಿಷ್ಕರಿಸಿರುವ ವಿದ್ಯಾರ್ಥಿಗಳು ಬೇಡಿಕೆ ಈಡೇರಿಕೆಗಾಗಿ ಕಾಲೇಜಿನ ಕಚೇರಿ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದು, ಅರಣ್ಯ ಇಲಾಖೆ ಹುದ್ದೆಗಳಿಗೆ ಅರಣ್ಯಶಾಸ್ತçವೇ ಕನಿಷ್ಟ ವಿದ್ಯಾರ್ಹತೆ ಆಗಬೇಕು. ಅರಣ್ಯಶಾಸ್ತç ಪದವೀಧರರಿಗೆ ಅರಣ್ಯ ಇಲಾಖೆ ಹುದ್ದೆಗಳ ನೇಮಕಾತಿಯಲ್ಲಿ ಇದ್ದ ಮೀಸಲಾತಿ ಕಡಿತ ಆದೇಶವನ್ನು ರದ್ದುಪಡಿಸಿ ಶೇ.೧೦೦ ರಷ್ಟು ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.