ಚೆಯ್ಯಂಡಾಣೆ: ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸಂವಿಧಾನದ ಪೀಠಿಕೆ ಮತ್ತು ಸಂವಿಧಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಸಂಬAಧ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾವನ್ನು ಮಾಲ್ದಾರೆಯಲ್ಲಿ ಸ್ವಾಗತಿಸಲಾಯಿತು. ಡಾ. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆರತಿ ಎತ್ತಿ ಪುಷ್ಪನಮನ ಸಲ್ಲಿಸಲಾಯಿತು. ನಾಣಚ್ಚಿ ಕಲಾತಂಡ ಮತ್ತು ಶಾಜಿ ಬಳಗದ ಚಂಡೆ ಮೇಳ ದೊಂದಿಗೆ ಸಾಗಿದ ಮೆರವಣಿಗೆಯಲ್ಲಿ ಬೈಕ್ ರ‍್ಯಾಲಿಯೊಂದಿಗೆ ಶಾಲಾ ಮಕ್ಕಳ ಪಥಸಂಚಲನ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ವಹಿಸಿದ್ದರು. ಈ ಸಂದರ್ಭ ಗ್ರಾ.ಪಂ. ಸದಸ್ಯರು, ಸಂಪನ್ಮೂಲ ವ್ಯಕ್ತಿಗಳಾದ ಸತೀಶ್ ಅಂಬೇಡ್ಕರ್ ಸೇನಾ ಜಿಲ್ಲಾಧ್ಯಕ್ಷರು, ಅಮ್ಮತ್ತಿ ಹೋಬಳಿ ನೋಡೆಲ್ ಅಧಿಕಾರಿಗಳಾದ ಶಿವಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕಮಾದಯ್ಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಹಾಗೂ ನಾಣಚ್ಚಿ ಹಾಡಿ ರಮೇಶ್ ತಂಡದಿAದ ಆಕರ್ಷಕ ನೃತ್ಯ ನಡೆಯಿತು. ಪೀಠಿಕೆ ವಾಚನವನ್ನು ಕಲಾವಿದರಾದ ಬಾವರವರು ನಡೆಸಿಕೊಟ್ಟರು ವಿಜೇತರಿಗೆ ಬಹುಮಾನ ವಿತರಿಸಿ, ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.ಮಡಿಕೇರಿ: ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಯು ಹೊಸೂರು ಗ್ರಾಮ ಪಂಚಾಯಿತಿಗೆ ಆಗಮಿಸಿದ ಪ್ರಯುಕ್ತ ಭವ್ಯ ಸ್ವಾಗತವನ್ನು ಹೊಸೂರು ಗ್ರಾಮ ಪಂಚಾಯಿತಿಯಿAದ ನೀಡಲಾಯಿತು.

ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯಿತಿ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು ಅಂಬೇಡ್ಕರ್ ಪ್ರತಿಮೆಗೆ ಹೂವಿನ ಹಾರ ಹಾಕಿ ಪುಷ್ಪಾರ್ಚನೆ ಮಾಡಿ ತ್ರಿವರ್ಣ ಬಣ್ಣದ ಬಲೂನ್‌ಗಳನ್ನು ರಾರಾಜಿಸುತ್ತ ಬ್ಯಾಂಡ್ ಸೆಟ್‌ನೊಂದಿಗೆ ಘೋಷಣೆಗಳನ್ನು ಕೂಗಿದರು. ಗ್ರಾಮದ ಮಹಿಳೆಯರು ಕಲಶ ಹಿಡಿದು ಬೈಕ್ ಜಾಥಾ ವಾದ್ಯ ಮೇಳದೊಂದಿಗೆ ಆಗಮಿಸಿ ಅತ್ಯಂತ ಸಂಭ್ರಮದಿAದ ಸ್ವಾಗತಿಸಿದರು.

ಮೆರವಣಿಗೆ ನಂತರ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧು ವಹಿಸಿದ್ದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳಾತ್ಮಾಡುವಿನ ಮುಖ್ಯ ಶಿಕ್ಷಕಿ ಭಾಗ್ಯವತಿ ಟಿ.ವಿ. ಸಂವಿಧಾನದ ವಿಷಯದ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಿ, ಸಂವಿಧಾನ ಪೀಠಿಕೆಯಲ್ಲಿ ಅಡಗಿರುವ ವಿಷಯಗಳ ಬಗ್ಗೆ, ರಾಜ್ಯ ನಿರ್ದೇಶಕ ತತ್ವಗಳು, ಮೂಲಭೂತ ಕರ್ತವ್ಯಗಳು ಹಾಗೂ ಹಕ್ಕುಗಳ ಬಗ್ಗೆ ಮಾತನಾಡಿದರು.

ಶಿಕ್ಷಕಿ ಲಕ್ಷಿö್ಮ ಸಂವಿಧಾನ ಪೀಠಿಕೆಯನ್ನು ಮಂಡನೆ ಮಾಡಿದರು. ನೋಡಲ್ ಅಧಿಕಾರಿಗಳಾಗಿ ಆಗಮಿಸಿದ ಪ್ರೀತಿ ಚಿಕ್ಕಮಾದಯ್ಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಅÀರು ಸಂವಿಧಾನದ ಕುರಿತು ಮಾತನಾಡಿ, ಸಮಾಜದ ನಾಗರಿಕರಾದ ನಾವೆಲ್ಲರೂ ಸಂವಿಧಾನವನ್ನು ಗೌರವಿಸೋಣ ಮತ್ತು ಜನಜಾಗೃತ ರಾಗೋಣ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧು ಸಂವಿಧಾನ ಕುರಿತು ಮಾತನಾಡಿ, ಶುಭಕೋರಿದರು. ಸಂಗೀತ, ಪ್ರಬಂಧ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಯಂತಿ, ತಾರ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ವಿವಿಧ ಇಲಾಖಾ ಅಧಿಕಾರಿಗಳು, ಸಂಘ ಸಂಸ್ಥೆಯವರು, ಆಶಾ ಕಾರ್ಯಕತೆಯರು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಾಂತಿ ಸೋಮಯ್ಯ, ಸದಸ್ಯರಾದ ವಿ.ವಿ. ಪ್ರಕಾಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇದಪ್ಪ, ಸಿಬ್ಬಂದಿಗಳು ಹಾಜರಿದ್ದರು. ಗ್ರಂಥಾಲಯ ಪಾಲಕಿ ಕಾರುಣ್ಯ ಸ್ವಾಗತಿಸಿ, ವಾರಿಜ ಪ್ರಾರ್ಥಿಸಿದರು. ಶಿಕ್ಷಕಿ ದಿವ್ಯ ನಿರೂಪಣೆ ಮಾಡಿದರು. ರಾಷ್ಟçಗೀತೆ ಹಾಡುವುದರೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.ಶನಿವಾರಸಂತೆ: ಅಸ್ಪೃಶ್ಯತೆಯ ನಿವಾರಣೆಗೆ, ಉದ್ಯೋಗದಲ್ಲಿನ ಮೀಸಲಾತಿಗೆ ಸಂವಿಧಾನ ಬದ್ಧವಾಗಿದ್ದು ಇದರ ಸದುಪಯೋಗದಿಂದ ದೀನದಲಿತರ, ಬಡವರ ಉದ್ಧಾರ ಸಾಧ್ಯ ಎಂದು ಕಳಲೆ ಗ್ರಾಮದ ಶ್ರೀ ಬಸವೇಶ್ವರ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಇಂದಿರಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸಮೀಪದ ಗಡಿಭಾಗ ಹೊಸೂರು ಗ್ರಾ.ಪಂ. ವತಿಯಿಂದ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಂವಿಧಾನ ರಚನೆಯಲ್ಲಿ ಡಾ. ಅಂಬೇಡ್ಕರ್ ಪಾತ್ರ ಮಹತ್ವವಾದುದು. ಜಾಥಾದ ಉದ್ದೇಶ ಸಂವಿಧಾನ ವಿಚಾರವನ್ನು ಪ್ರತಿಯೊಬ್ಬರಿಗೂ ತಿಳಿಸುವುದಾಗಿದ್ದು ಇದೊಂದು ಅತ್ಯುತ್ತಮ ಕಾರ್ಯಕ್ರಮವಾಗಿದೆ ಎಂದರು. ವೇದಿಕೆಯಲ್ಲಿದ್ದ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು. ಉಪನ್ಯಾಸಕಿ ರೂಹಿ ಸಲ್ಮಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆನಂದ್ ಹಾಗೂ ಸುಂಡುವಳ್ಳಿಯ ಬಸಪ್ಪಣ್ಣ ಮಾತನಾಡಿ, ಸಂವಿಧಾನದ ವಿಧಿವಿಧಾನ, ಮಹತ್ವ, ಉಪಯೋಗ ಇತ್ಯಾದಿಗಳ ಬಗ್ಗೆ ತಿಳಿಸಿ ಜಾಗೃತಿ ಮೂಡಿಸಿದರು. ಹೊಸೂರು ಗ್ರಾ.ಪಂ. ಅಧ್ಯಕ್ಷೆ ಮಂಜುಳಾ ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಜಾನಕಿ ಶಿವಣ್ಣ, ಸದಸ್ಯ ಗುರುರಾಜ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಡಿ. ವೀಣಾ, ಸಿಬ್ಬಂದಿ ಹಾಜರಿದ್ದರು. ವಿವಿಧ ಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ವಿದ್ಯಾರ್ಥಿಗಳು ಜಾಥಾ ಹಾಗೂ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.ವೀರಾಜಪೇಟೆ: ರಾಜ್ಯ ಸರ್ಕಾರ ದಿಂದ ಆಯೋಜಿತ ಕಾರ್ಯಕ್ರಮ ವಾದ ಸಂವಿಧಾನ ಜಾಗೃತಿ ಜಾಥಾಕ್ಕೆ ಆರ್ಜಿ ಗ್ರಾಮ ಪಂಚಾಯಿತಿ ವತಿಯಿಂದ ಭವ್ಯ ಸ್ವಾಗತ ಕೋರಿದರು.

ಜಿಲ್ಲಾ ಪಂಚಾಯಿತಿ ಕೊಡಗು, ತಾಲೂಕು ಪಂಚಾಯಿತಿ ವೀರಾಜ ಪೇಟೆ ವತಿಯಿಂದ ಆಯೋಜಿಸ ಲಾಗಿದ್ದ ಸಂವಿಧಾನ ಜಾಗೃತಿ ಜಾಥಾದ ಸ್ತಬ್ದಚಿತ್ರದ ರಥಕ್ಕೆ ಗಡಿಭಾಗವಾದ ಆರ್ಜಿ ಗ್ರಾಮ ಪಂಚಾಯಿತಿ ವತಿಯಿಂದ ಹೂಗಳನ್ನು ಅರ್ಪಿಸಿ ಬೆಲೋನ್ ಗಳನ್ನು ಗಾಳಿಯಲ್ಲಿ ಹಾರಿಬಿಡುವ ಮೂಲಕ ಭೌವ್ಯ ಸ್ವಾಗತ ಕೋರಲಾಯಿತು.

ಆರ್ಜಿ ಜಂಕ್ಷನ್‌ನಿAದ ಜಾಥಾವು ಆರಂಭವಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊನೆಗೊಂಡಿತು. ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬದ್ರೀಯಾ ಆಂಗ್ಲ ಮಾಧ್ಯಮ ಶಾಲೆ, ಶಂಶುಲ್ ಉಲಮಾ ಆಂಗ್ಲ ಮಾಧ್ಯಮ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆರ್ಜಿ, ಆನ್ವರ್ ಹುಲ್ ಹುದಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಅಲ್ವಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಆರ್ಜಿ ಗ್ರಾಮ ಶಾಲೆಗಳ ವಿದ್ಯಾರ್ಥಿಗಳು, ಗ್ರಾ.ಪಂ. ಪ್ರತಿನಿಧಿಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ನಾಗರಹೊಳೆ ನಾಣಚ್ಚಿ ಗದ್ದೆಹಾಡಿ ಗಿರಿಜನ ಅಭಿವೃದ್ಧಿ ಕಲಾ ಸಂಸ್ಥೆಯ ಆಕರ್ಷಕ ಜನಪದ ನೃತ್ಯವು ಜಾಥಾಕ್ಕೆ ಮೆರೆಗು ನೀಡಿತ್ತು. ವಸತಿ ಶಾಲೆಯಲ್ಲಿ ನಡೆಯ ಸಭಾ ಕಾರ್ಯಕ್ರಮದಲ್ಲಿ ಆರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಾತಿಮಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಲ್ವಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲೆ ಮಮತಾ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಅಲ್ವಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಮಾಜ ವಿಜ್ಞಾನ ವಿಭಾಗದ ಶಿಕ್ಷಕ ನಟರಾಜ್ ಸಂವಿಧಾನ ಪೀಠಿಕೆ ಮತ್ತು ಭಾರತ ಸಂವಿಧಾನ ನಡೆದುಬಂದ ಹಾದಿ ಹಾಗೂ ಹಿನ್ನೆಲೆಯ ಬಗ್ಗೆ ಉಪನ್ಯಾಸ ನೀಡಿದರು. ಅತಿಥಿಗಳಿಂದ ಮತ್ತು ಇಲಾಖೆಯ ಅಧಿಕಾರಿಗಳಿಂದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ರಸಪ್ರಶ್ನೆ, ಸಂಗೀತ ಮತ್ತು ಚಿತ್ರಕಲೆ ಸ್ಪರ್ಧೆಗಳನ್ನು ಆಯೋಜಿಸಲಾಗಿ ವಿಜೇತ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ನಾರಾಯಣ, ತಾಲೂಕು ನೋಡಲ್ ಅಧಿಕಾರಿ ರಾಜೇಶ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಪ್ರೀತಿ ಚಿಕ್ಕಮಾದಯ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಹೆಚ್.ಕೆ. ಕವಿತಾ, ಗ್ರಾಮ ಪಂಚಾಯಿತಿಯ ಎಲ್ಲಾ ಪ್ರತಿನಿಧಿಗಳು, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಾದ ಸಿ.ಪಿ. ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ವಿವಿಧ ಶಾಲೆಯ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

ಆರ್ಜಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಆರ್. ರಾಜನ್ ಸ್ವಾಗತಿಸಿ, ಅಲ್ವಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಿಕ್ಷಕರು ನಿರೂಪಿಸಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಮೋದ್ ವಂದಿಸಿದರು.ವೀರಾಜಪೇಟೆ: ಡಾ. ಬಿ.ಆರ್. ಅಂಬೇಡ್ಕರ್ ಸೂಕ್ತವಾದ ಸಂವಿಧಾನ ನೀಡುವ ಮೂಲಕ ನಮಗೆ ಸಮಾನ ಅವಕಾಶ ನೀಡಿದ್ದಾರೆ ಎಂದು ವೀರಾಜಪೇಟೆ ಕಾವೇರಿ ಕಾಲೇಜಿನ ಉಪನ್ಯಾಸಕಿ ಅಕ್ಷಿತಾ ಹೇಳಿದರು.

ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಮೆರವಣಿಗೆ ವೀರಾಜಪೇಟೆ ಬಳಿಯ ಬೇಟೋಳಿ ಗ್ರಾಮ ಪಂಚಾಯಿತಿಗೆ ಆಗಮಿಸಿದ ಸಂದರ್ಭ ಪಂಚಾಯಿತಿ ಆವರಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅಕ್ಷಿತಾ ಮಾತನಾಡಿ, ಪ್ರತಿಯೊಬ್ಬರು ಶಿಕ್ಷಣ ಕಲಿಯಬೇಕೆನ್ನುವುದೇ ಸರಕಾರದ ಉದ್ದೇಶ. ಇದಕ್ಕೆ ಪೋಷಕರು ಮತ್ತು ಶಿಕ್ಷಕರ ಜವಾಬ್ದಾರಿ ಅಗತ್ಯ. ವಿದ್ಯಾರ್ಥಿಗಳು ಲೋಕಜ್ಞಾನವನ್ನು ಬಳಸಿಕೊಂಡು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಕೆಯ ಜಿಲ್ಲಾ ಉಪನಿರ್ದೇಶಕ ಚಂದ್ರಕಾAತ್ ಮಾತನಾಡಿ, ಪ್ರತಿಯೊಬ್ಬರೂ ಅನೇಕತೆಯಲ್ಲಿ ಏಕತೆಯನ್ನು ಮಾಡುವಂತದ್ದು ಪ್ರಪಂಚದಲ್ಲಿ ಭಾರತದಿಂದ ಮಾತ್ರ ಸಾಧ್ಯವಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕಮಾದಯ್ಯ ಮಾತನಾಡಿ, ನಮ್ಮ ದೇಶ ಶಾಂತಿಯುತವಾಗಿರಲು ಗ್ರಾಮೀಣ ಭಾಗದ ಹಳ್ಳಿ ಹಳ್ಳಿಗೂ ಹೋಗಿ ಸರ್ವರಿಗೂ ಸಂವಿಧಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಂಡಿರುವುದಾಗಿ ತಿಳಿಸಿದರು. ವೇದಿಕೆಯಲ್ಲಿ ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್, ಕ್ಷೇತ್ರ ಸಮನ್ವಾಯಧಿಕಾರಿ ವನಜಾಕ್ಷಿ, ಮಡಿಕೇರಿ ಭೂ ವಿಜ್ಞಾನಿ ರಾಹುಲ್ ಉಪಸ್ಥಿತರಿದ್ದರು.

ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಚ್ಚಪಂಡ ಎಂ. ಬೋಪಣ್ಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಭಾರತದ ಸಂವಿಧಾನದ ಕುರಿತು ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅತಿಥಿಗಳು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿದರು.

ಇಲ್ಲಿನ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನ ರುಧ್ರಂ ಮಹಿಳಾ ಸಂಘಟನೆಯಿAದ ಚಂಡೆ ಬಳಗ ಭಾಗವಹಿಸಿದ್ದರು. ಹೆಗ್ಗಳ ರಾಮನಗರ ಶಾಲಾ ವಿದ್ಯಾರ್ಥಿಗಳು ಶಿಕ್ಷರು ಕಾರ್ಯಕ್ರಮದಲ್ಲಿದ್ದರು.