ನಾಪೋಕ್ಲು, ಫೆ. ೧೬: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕರ ಹಾಗೂ ಮಾಲೀಕರ ಸಭೆ ಪೊಲೀಸ್ ಠಾಣೆ ಆವರಣದಲ್ಲಿ ಜರುಗಿತು.

ಸಭೆಯಲ್ಲಿ ಡಿ.ವೈ.ಎಸ್.ಪಿ. ಮಹೇಶ್ ಕುಮಾರ್ ಮಾತನಾಡಿ, ವಾಹನ ಚಾಲಕರು ಸೂಕ್ತ ದಾಖಲಾತಿಗಳನ್ನು ಇರಿಸಿಕೊಳ್ಳತಕ್ಕದ್ದು ದಾಖಲಾತಿ ಇಲ್ಲದೆ ವಾಹನ ಚಾಲನೆ ಮಾಡಿದಲ್ಲಿ ಪೊಲೀಸರು ವಾಹನಗಳನ್ನು ವಶಪಡಿಸಿಕೊಳ್ಳಲಿದ್ದಾರೆ ಎಂದು ಎಚ್ಚರಿಸಿದರು. ಪ್ರತಿಯೊಬ್ಬ ಚಾಲಕರು ಸಮವಸ್ತç ಧರಿಸಿ, ಜೊತೆಗೆ ಸೂಕ್ತ ದಾಖಲೆಗಳನ್ನು ಹೊಂದಿರತಕ್ಕದ್ದು. ಇದಕ್ಕೆ ಒಂದು ವಾರಗಳ ಕಾಲಾವಕಾಶ ನೀಡಲಾಗಿದ್ದು, ಅಷ್ಟರೊಳಗೆ ದಾಖಲಾತಿಗಳನ್ನು ಸರಿಪಡಿಸಿಕೊಳ್ಳಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಪಟ್ಟಣದ ಅಂಗಡಿ ಮಾಲೀಕರು ತಮ್ಮ ವಾಹನಗಳನ್ನು ಅಂಗಡಿಗಳ ಮುಂದೆ ನಿಲ್ಲಿಸುವುದರಿಂದ ಪಾರ್ಕಿಂಗ್ ಸಮಸ್ಯೆ ಎದುರಾಗುತ್ತಿದೆ. ಅಂಗಡಿಗಳ ಮಾಲೀಕರು ತಮ್ಮ ವಾಹನಗಳನ್ನು ಅಂಗಡಿಗಳ ಮುಂದೆ ನಿಲ್ಲಿಸಿ ಸಮಸ್ಯೆ ತಂದೊಡ್ಡಬಾರದು ಎಂದರು.

ಈ ಸಂದರ್ಭ ಆಟೋ ಚಾಲಕರು ಆಟೋ ನಿಲುಗಡೆಗಾಗಿ ಮುಖ್ಯ ರಸ್ತೆಯಲ್ಲಿ ಸ್ಥಳಾವಕಾಶ ಕಲ್ಪಿಸುವಂತೆ ಕೋರಿದರು. ಈಗಾಗಲೇ ಬೇತು ರಸ್ತೆಯಲ್ಲಿ ಆಟೋ ನಿಲ್ದಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮುಖ್ಯ ರಸ್ತೆಯಲ್ಲಿ ಆಟೋಗಳ ನಿಲುಗಡೆಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಅವರು ಗ್ರಾಮ ಪಂಚಾಯಿತಿ ನಿಲುಗಡೆಗೆ ಸೂಕ್ತ ಮಾರ್ಕಿಂಗ್ ವ್ಯವಸ್ಥೆಯನ್ನು ಮಾಡಿಕೊಡುವಂತೆ ಸೂಚಿಸಲಾಯಿತು.

ಕಾಫಿ ಬೆಳೆಗಾರರೊಂದಿಗೆ ಸಭೆಯನ್ನು ನಡೆಸಿ ಕಾಫಿ ಬೆಳೆಗಾರರು ತೋಟದ ಕೆಲಸದಲ್ಲಿ ನಿರ್ವಹಣೆಗಾಗಿ ಪರವೂರಿನ ಕಾರ್ಮಿಕರನ್ನು ಅವಲಂಬಿಸುತ್ತಿದ್ದಾರೆ. ಈ ಸಂದರ್ಭ ಆಗಮಿಸುವ ಕಾರ್ಮಿಕರ ಸಂಪೂರ್ಣ ಮಾಹಿತಿ ದಾಖಲಾತಿಗಳನ್ನು ಇಟ್ಟು ಕೊಳ್ಳಬೇಕು. ಕಾಫಿ ತೋಟಗಳ ಕಾರ್ಮಿಕರಿಂದ ಯಾವುದೇ ಸಮಸ್ಯೆ ಉದ್ಭವಿಸದಂತೆ ಎಚ್ಚರಿಕೆ ವಹಿಸತಕ್ಕದ್ದು ಎಂದು ಬೆಳೆಗಾರರಿಗೆ ಸೂಚಿಸಿದರು. ಸಭೆಯಲ್ಲಿ ಠಾಣಾಧಿಕಾರಿ ಮಂಜುನಾಥ್ ಪಾಲ್ಗೊಂಡು ಸೂಕ್ತ ಮಾಹಿತಿ ಮಾರ್ಗದರ್ಶನಗಳನ್ನು ನೀಡಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್, ಸದಸ್ಯರಾದ ಮಾಚೇಟಿರ ಕುಸು ಕುಶಾಲಪ್ಪ, ಕನ್ನಂಬೀರ ಸುಧಿ ತಿಮ್ಮಯ್ಯ, ಬಿ.ಎಂ ಪ್ರತೀಪ, ಕುಲ್ಲೇಟಿರ ಅರುಣ್ ಬೇಬ, ಮಹಮ್ಮದ್ ಕುರೇಶಿ, ಅಶ್ರಫ್ ಮತ್ತಿತರರು ಪಾಲ್ಗೊಂಡಿದ್ದರು.