ಸೋಮವಾರಪೇಟೆ, ಫೆ. ೧೬: ಇಲ್ಲಿನ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿದರು.

ಲೋಕಾಯುಕ್ತ ಡಿ.ವೈ.ಎಸ್.ಪಿ., ಎಂ.ಎಸ್. ಪವನ್‌ಕುಮಾರ್ ಅವರ ಅಧ್ಯಕ್ಷತೆಯಲ್ಲಿ ದೂರು ಅರ್ಜಿ ಸ್ವೀಕಾರ ಮತ್ತು ಕುಂದುಕೊರತೆ ಸಭೆ ನಡೆಯಿತು. ಬೀಕಳ್ಳಿ ಗ್ರಾಮದ ಬಿ.ಆರ್. ಮಂಜುನಾಥ್ ಕಂದಾಯ ಇಲಾಖೆಗೆ ಕಳೆದ ನಾಲ್ಕು ವರ್ಷಗಳಿಂದ ಅರ್ಜಿಯೊಂದಿಗೆ ವಂಶವೃಕ್ಷಕ್ಕೆ ಬೇಕಾದ ಎಲ್ಲ ದಾಖಲಾತಿಗಳನ್ನು ಸೇರಿಸಿ ವಂಶವೃಕ್ಷಕ್ಕೆ ಅರ್ಜಿ ಸಲ್ಲಿಸುತ್ತಿದ್ದರೂ, ಸಕಾರಣ ಇಲ್ಲದೆ ಅರ್ಜಿಯನ್ನು ತಿರಸ್ಕರಿಸುತ್ತಿದ್ದಾರೆ ಎಂದು ದೂರಿದರು.

ಕೂಡಲೇ ದಾಖಲಾತಿಯನ್ನು ಪರಿಶೀಲಿಸಿ ವಂಶವೃಕ್ಷ ಸೋಮವಾರಪೇಟೆ, ಫೆ. ೧೬: ಇಲ್ಲಿನ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿದರು.

ಲೋಕಾಯುಕ್ತ ಡಿ.ವೈ.ಎಸ್.ಪಿ., ಎಂ.ಎಸ್. ಪವನ್‌ಕುಮಾರ್ ಅವರ ಅಧ್ಯಕ್ಷತೆಯಲ್ಲಿ ದೂರು ಅರ್ಜಿ ಸ್ವೀಕಾರ ಮತ್ತು ಕುಂದುಕೊರತೆ ಸಭೆ ನಡೆಯಿತು. ಬೀಕಳ್ಳಿ ಗ್ರಾಮದ ಬಿ.ಆರ್. ಮಂಜುನಾಥ್ ಕಂದಾಯ ಇಲಾಖೆಗೆ ಕಳೆದ ನಾಲ್ಕು ವರ್ಷಗಳಿಂದ ಅರ್ಜಿಯೊಂದಿಗೆ ವಂಶವೃಕ್ಷಕ್ಕೆ ಬೇಕಾದ ಎಲ್ಲ ದಾಖಲಾತಿಗಳನ್ನು ಸೇರಿಸಿ ವಂಶವೃಕ್ಷಕ್ಕೆ ಅರ್ಜಿ ಸಲ್ಲಿಸುತ್ತಿದ್ದರೂ, ಸಕಾರಣ ಇಲ್ಲದೆ ಅರ್ಜಿಯನ್ನು ತಿರಸ್ಕರಿಸುತ್ತಿದ್ದಾರೆ ಎಂದು ದೂರಿದರು.

ಕೂಡಲೇ ದಾಖಲಾತಿಯನ್ನು ಪರಿಶೀಲಿಸಿ ವಂಶವೃಕ್ಷ ಎಂದು ಮಾಹಿತಿ ನೀಡುವ ಬಗ್ಗೆ ದೂರು ನೀಡಿದರು.

ಗ್ರಾಹಕರ ರಕ್ಷಣಾ ವೇದಿಕೆಯ ಸುಬ್ರಮಣಿ, ಇಲ್ಲಿನ ಲೋಕೋಪಯೋಗಿ ಇಲಾಖೆಯಲ್ಲಿ ಯಾವುದೇ ಮಾಹಿತಿ ನೀಡುತ್ತಿಲ್ಲ. ಸಿ.ಸಿ.ಟಿ.ವಿ. ಇರುವುದಿಲ್ಲ, ಎಲ್ಲ ಕಚೇರಿಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿ ಮಾಡಿಲ್ಲ ಎಂದು ಆರೋಪಿಸಿದರು. ಬಾಗೂರು ಗ್ರಾಮದ ಕಾವೇರಮ್ಮ, ೧೯೮೭ರಲ್ಲಿ ಮಂಜೂರಾದ ಕೃಷಿ ಭೂಮಿಯನ್ನು ಬೇರೆಯವರಿಗೆ ಮತ್ತೆ ಮಂಜೂರು ಮಾಡಿದ್ದು, ಬಿಡಿಸಿಕೊಡುವಂತೆ ಮನವಿ ಮಾಡಿದರು. ಹರಗ ಗ್ರಾಮದ ಹೆಚ್.ಕೆ. ಗಿರೀಶ್, ಶಾಂತಳ್ಳಿ ಕಂದಾಯ ಇಲಾಖೆಯ ಅಧಿಕಾರಿಗಳು ರಸ್ತೆಯನ್ನು ಬಿಡಿಸಿಕೊಡುವ ನೆಪದಲ್ಲಿ ಸ್ಮಶಾನ ಜಾಗವನ್ನು ಬೇರೆ ಸ್ಥಳದಲ್ಲಿ ಗುರುತಿಸಿ ನೀಡಿರುವ ಬಗ್ಗೆ ದೂರು ನೀಡಿದರು.

ನಂತರ ಮಾತನಾಡಿದ ಡಿ.ವೈ.ಎಸ್.ಪಿ., ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಬೇಕು. ಬಯೋ ಮೆಟ್ರಿಕ್ ಅಳವಡಿಸಿ, ಬೆಳಿಗ್ಗೆ ೯.೪೫ ರೊಳಗೆ ಕಚೇರಿಗೆ ಆಗಮಿಸಿ ಹೆಬ್ಬೆಟ್ಟಿನ ಗುರುತು ನೀಡಬೇಕು. ಸಾರ್ವಜನಿಕರು ತಮ್ಮ ಸಮಸ್ಯೆಗೆ ಸಂಬAಧಿಸಿದAತೆ ಯಾವುದೇ ದೂರು ನೀಡುವಾಗಲೂ ಹಿಂಬರಹ ಪಡೆಯಬೇಕು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು ಎಂದರು.

ಇಲಾಖೆಗಳಿAದ, ಯಾವುದೇ ಅಧಿಕಾರಿಗಳಿಂದ ಸಮಸ್ಯೆಗೊಳಪಟ್ಟಲ್ಲಿ ತಮ್ಮ ಸಮಸ್ಯೆಗೆ ಸಂಬAಧಿಸಿದAತೆ, ಅರ್ಜಿ ಭರ್ತಿ ಮಾಡಿ, ನೋಟರಿಯಿಂದ ಅಫಿಡವಿಟ್ ಮಾಡಿಸಿ ಅರ್ಜಿಗಳನ್ನು ದೂರಿನೊಂದಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. ೦೮೨೭೨-೨೯೫೨೯೭ನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. ತಹಶೀಲ್ದಾರ್ ವಿ.ಎಸ್. ನವೀನ್ ಕುಮಾರ್ ಉಪಸ್ಥಿತರಿದ್ದರು.