ವೀರಾಜಪೇಟೆ, ಫೆ. ೧೬: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ವೀರಾಜಪೇಟೆ ನಗರದ ಖಾಸಗಿ ಬಸ್ ನಿಲ್ದಾಣದ ಶೌಚಾಲಯದ ಬಳಿ ಇಂದು ಮಧ್ಯಾಹ್ನ ಮಲಗಿರುವ ಸ್ಥಿತಿಯಲ್ಲಿ ಪುರುಷನ ಮೃತ ದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಗೆ ಸುಮಾರು ೫೦ ವರ್ಷ ಪ್ರಾಯ ಎಂದು ಅಂದಾಜಿಸಲಾಗಿದೆ. ಮೃತ ದೇಹವನ್ನು ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾರಿಸು ದಾರರಿದ್ದಲ್ಲಿ ವೀರಾಜ ಪೇಟೆ ನಗರ ಠಾಣೆ, ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಕಚೇರಿ, ಪೊಲೀಸ್ ಕಂಟ್ರೋಲ್ ರೂಂ ಅನ್ನು ಸಂಪರ್ಕಿಸುವAತೆ ಪೊಲೀಸ್ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.