ಮಡಿಕೇರಿ, ಫೆ. ೧೭: ‘ಕರ್ನಾಟಕ ಸಾಂಸ್ಕೃತಿಕ ನಾಯಕ’ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರರ ಭಾವಚಿತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಗರದ ಗಾಂಧಿ ಭವನದಲ್ಲಿ ಅನಾವರಣ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಗೌತಮ ಬುದ್ಧ ನಂತರ ಬಸವೇಶ್ವರರು ರಾಷ್ಟçದಲ್ಲಿ ಸಾಮಾಜಿಕ ಕ್ರಾಂತಿ ಉಂಟು ಮಾಡಿದರು. ೧೨ನೇ ಶತಮಾನದಲ್ಲಿ ಕಾಯಕ ಜೀವಿಗಳ ಚಳವಳಿಯ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ನಡೆಸಿ ವಚನಗಳ ಮೂಲಕ ಜಾಗೃತಿ ಮೂಡಿಸಿದ ಬಸವೇಶ್ವರರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಸರ್ಕಾರ ಘೋಷಿಸಿರುವುದು ವಿಶೇಷವಾಗಿದೆ ಎಂದು ಹೇಳಿದರು.

ಗೌತಮ ಬುದ್ಧ, ಬಸವಣ್ಣ ನಂತರ ಮಹಾತ್ಮ ಗಾಂಧೀಜಿ ಅವರು ಸಮಾಜದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಜಾಗೃತಿ ಮೂಡಿಸಿದರು. ಬಸವೇಶ್ವರರು ವಚನಗಳ ಮೂಲಕ ನಾಡಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಸರ್ಕಾರ ವಿಶ್ವಗುರು ಬಸವೇಶ್ವರರನ್ನು ‘ನಾಡಿನ ಸಾಂಸ್ಕೃತಿಕ ನಾಯಕ’ ಎಂದು ಸಾರಿದೆ.

೧೨ನೇ ಶತಮಾನದ ಬಸವೇಶ್ವರರ ನಂತರ ಹಲವು ವಚನಕಾರರು ಸಮಾಜ ಸುಧಾರಣೆಗೆ ಶ್ರಮಿಸಿದ್ದು, ಬಸವಾದಿ ಶರಣರು ಸೇರಿದಂತೆ ವಚನಕಾರರ ಬಗ್ಗೆ ಅಧ್ಯಯನ ಮಾಡಬೇಕು. ಬಸವಣ್ಣ ಅವರನ್ನು ಸದಾ ಸ್ಮರಿಸಬೇಕು.

ಬಸವಣ್ಣನವರ ಸಾಮಾಜಿಕ ಸುಧಾರಣೆಗಳು

(ಮೊದಲ ಪುಟದಿಂದ) ಸಾರ್ವಕಾಲಿಕ ವಾಗಿದ್ದು, ಅವರ ಸಂದೇಶಗಳು, ಚಿಂತನೆಗಳು ವಿಶ್ವಕ್ಕೆ ಮಾದರಿಯಾಗಿದೆ. ಭಾರತ ಸಂಸತ್ತಿನಲ್ಲಿ ಹಾಗೂ ಲಂಡನ್‌ನಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸಿರುವುದೇ ಸಾಕ್ಷಿ ಎಂದರು.

ಬಸವೇಶ್ವರರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯ ವಾಗಿ ಅಳವಡಿಸಬೇಕು. ಬಸವೇಶ್ವರರ ವಿಚಾರಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳು ವಂತಾಗಬೇಕು ಎಂದು ಹೇಳಿದರು. ಕೊಪ್ಪ ಭಾರತ ಮಾತಾ ಪದವಿ ಪೂರ್ವ ಕಾಲೇಜಿನ ಉಪ ನ್ಯಾಸಕ ಜ್ಞಾನೇಶ್ ಮಾತನಾಡಿ, ಬಸವ ಪಥಕ್ಕೆ ಅಗ್ರ ಸ್ಥಾನ ನೀಡಲು ಸರ್ಕಾರ ತೀರ್ಮಾನಿ ಸಿರುವುದು ವಿಶೇಷವಾಗಿದೆ. ಬಸವೇಶ್ವ ರರು ಕನ್ನಡ ನಾಡಿನ ಸಂಸ್ಕೃತಿ ಪ್ರತಿಪಾದಿ ಸಿದ ಮೌಲ್ಯಗಳ ರೂಪಕ. ಬಸವಣ್ಣ ನವರ ಕತೃತ್ವ ಶಕ್ತಿಯಿಂದ ರೂಪುಗೊಂಡ ವಚನಕಾರರ ಅನುಭವ ಮಂಟಪ ಇಂದಿನ ಪ್ರಜಾಪ್ರಭುತ್ವದ ಅಡಿಗಲ್ಲೇ ಆಗಿದೆ. ನಾಡಿನ ಸಾಂಸ್ಕೃತಿಕ, ಸಾಹಿತ್ಯಕ, ಪರಂಪರೆ ವಿಶ್ವಕ್ಕೆ ಕೊಡುಗೆ ನೀಡಿರುವ ವಿಶ್ವ ಮಾನವ ಪರಂಪರೆಯ ಬಹುಮುಖ್ಯವಾದ ಕೊಂಡಿಯಾಗಿ ದ್ದಾರೆ ಎಂದು ನುಡಿದರು. ೧೨ನೇ ಶತಮಾನದಲ್ಲಿಯೇ ಬಸವಣ್ಣನವರು ಅಂತರಜಾತಿ ವಿವಾಹವನ್ನು ಪ್ರೋತ್ಸಾಹಿಸಿದ್ದರು. ಸಂಪ್ರದಾಯಗಳನ್ನು ಬದಿಗೊತ್ತಿ ಎಲ್ಲರೂ ಸಮಾನರು ಎಂಬುದನ್ನು ಸಾರಿದರು. ಕಾಯಕವೇ ಕೈಲಾಸವೆಂದು ಒತ್ತಿ ಹೇಳಿದ್ದಾರೆ. ಅನುಭವ ಮಂಟಪದ ಮೂಲಕ ಎಲ್ಲರನ್ನು ಒಳಗೊಂಡ ಕಲ್ಯಾಣ ಕ್ರಾಂತಿ ಉಂಟು ಮಾಡಿದರು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್, ಸೆಸ್ಕ್ ಇಇ ಅನಿತಾ ಬಾಯಿ, ಐಟಿಡಿಪಿ ಅಧಿಕಾರಿ ಹೊನ್ನೇಗೌಡ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಾಲಸುಬ್ರಮಣ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಪೌರಾಯುಕ್ತರಾದ ವಿಜಯ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಎಂ.ಎA.ಯತ್ನಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಜಿ.ಪಂ. ಇಇ ಮುತ್ತುರಾಜ್, ಸುರೇಶ್ ಕುಮಾರ್, ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಸನ್ನ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಕೃಷ್ಣಪ್ಪ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು. ಮೈಸೂರಿನ ರಾಘವೇಂದ್ರ ತಂಡದವರು ವಚನ ಗಾಯನ ನಡೆಸಿಕೊಟ್ಟರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.