ವೀರಾಜಪೇಟೆ, ಫೆ. ೧೭: ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಾರ್ಜಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಅರಿವು ಪೀಠಿಕೆ ಕಾರ್ಯಕ್ರಮದಲ್ಲಿ ಛದ್ಮವೇಷ ಸ್ಪರ್ಧೆಯಲ್ಲಿ ವೀರಾಜಪೇಟೆ ಮಗ್ಗುಲದ ರೋಲಿಕ್ಸ್ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಆದರ್ಶ್ ಕೆ.ಎಂ. ಅಂಬೇಡ್ಕರ್ ಅವರ ವೇಷಧಾರಿಯಾಗಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳು ೨೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.