ಮಡಿಕೇರಿ, ಫೆ. ೧೬: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ‘ಯುವ ಸ್ಪಂದನ’ ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆ ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆದ್ದರಿಂದ ೨೧ ರಿಂದ ೩೫ ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವವಿವರಗಳು ಮತ್ತು ಅಂಕಪಟ್ಟಿಗಳೊAದಿಗೆ ತಾ. ೨೮ ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು, ದೂರವಾಣಿ ಸಂಖ್ಯೆ ೦೮೨೭೨-೨೨೦೯೮೬ ಹಾಗೂ ೯೪೮೦೦೩೨೭೧೨ ಇವರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ತಿಳಿಸಿದ್ದಾರೆ.

ಸ್ವಯಂ ಉದ್ಯೋಗ ಯೋಜನೆಗೆ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೊಡಗು ಇವರ ವತಿಯಿಂದ ೨೦೨೩-೨೪ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ್ರ, ಕೃಷಿ ಆಧಾರಿತ ಮುಂತಾದ ಚಟುವಟಿಕೆಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಒದಗಿಸಲಾಗುವುದು. ಘಟಕ ವೆಚ್ಚ ಶೇ. ೩೩ ಅಥವಾ ಗರಿಷ್ಠ ಮಿತಿ ರೂ.೧ ಲಕ್ಷದ ಸಹಾಯಧನ ನೀಡಲಾಗುವುದು ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ ವೆಬ್‌ಸೈಟ್: hಣಣಠಿs://ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ನಂತರ ಸೂಕ್ತ ದಾಖಲಾತಿಗಳ ಪ್ರತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಎಫ್.ಎಂ.ಸಿ. ಕಾಲೇಜು ರಸ್ತೆ, ಮಡಿಕೇರಿ ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ ೦೮೨೭೨-೨೦೧೪೪೯ ಸಹಾಯವಾಣಿ ಸಂಖ್ಯೆ ೮೨೭೭೭೯೯೯೯೦ಗೆ ಸಂಪರ್ಕಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೨೯ ಕಡೆ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ರೈತರು ಹಾಗೂ ಸಂಘ-ಸAಸ್ಥೆಗಳಿAದ

ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಈ ಯೋಜನೆಯಡಿ ಈಗಾಗಲೇ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾದಾರ ಸಂಸ್ಥೆಗಳು, ಕೃಷಿ ಯಂತ್ರೋಪಕರಣಗಳ ಬ್ಯಾಂಕ್ ಹಾಗೂ ನೋಂದಾಯಿತ ಸಂಘ-ಸAಸ್ಥೆಗಳು (ಎಫ್‌ಪಿಒಗಳನ್ನು ಒಳಗೊಂಡAತೆ) ಭಾಗವಹಿಸಬಹುದಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಸಾಮಾನ್ಯ ವರ್ಗದಡಿ ಶೇ. ೭೦ ರಷ್ಟು ಸಹಾಯಧನದಲ್ಲಿ (ಗರಿಷ್ಠ ರೂ. ೫೦ ಲಕ್ಷ) ಯಂತ್ರೋಪಕರಣಗಳನ್ನು ಪಡೆಯಲು ಸಂಘ-ಸAಸ್ಥೆಗಳಿಗೆ ಅವಕಾಶವಿದೆ. ಸಹಾಯಧನವು ಅಡಿeಜiಣ ಐiಟಿಞeಜ ಃಚಿಛಿಞ ಇಟಿಜeಜ Subsiಜಥಿ ಮುಖಾಂತರ ಪಾವತಿಯಾಗುತ್ತದೆ.

ಈ ಯೋಜನೆಯಡಿ ಸಹಾಯಧನ ಪಡೆದ ಸಂಸ್ಥೆಗಳು ಕಂಬೈನ್ಡ್ ಹಾರ್ವೆಸ್ಟರ್ ಹಾಗೂ ಟ್ರಾö್ಯಕ್ಟರ್ ಚಾಲಿತ ಬೇಲರ್ ಅನ್ನು ಕಡ್ಡಾಯವಾಗಿ ದಾಸ್ತಾನೀಕರಿಸುವುದು ಹಾಗೂ ಇತರೆ ಕೃಷಿ ಯಂತ್ರೋಪಕರಣಗಳನ್ನು ಐಚ್ಚಿಕವಾಗಿ ಹಬ್‌ನಲ್ಲಿ ದಾಸ್ತಾನೀಕರಿಸಲು ಅವಕಾಶವಿದೆ.

ಸಂಘ-ಸAಸ್ಥೆಗಳು ಅರ್ಜಿಗಳೊಂದಿಗೆ ಸಲ್ಲಿಸಬೇಕಾದ ದಾಖಲೆಗಳು: ಸಂಸ್ಥೆ ನೋಂದಾಯಿಸಿದ ಪ್ರಮಾಣ ಪತ್ರ, ಗುರುತಿನ ಪತ್ರ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ರೂ. ೨೦ ಗಳ ಛಾಪಾ ಕಾಗದದ ಮೇಲೆ ಹಬ್‌ಅನ್ನು ಪರಬಾರೆ ಮಾಡುವುದಿಲ್ಲ ವೆಂದು ಮುಚ್ಚಳಿಕೆ ಪತ್ರ, ೨ ವರ್ಷಗಳ ಲೆಕ್ಕ ಪರಿಶೋದನಾ ಪತ್ರ. ಸಹಕಾರ ಸಂಘಗಳ ನಿಬಂಧನೆಯAತೆ/ ಕಂಪೆನಿ ಕಾಯ್ದೆಯಡಿ ನೋಂದಾಯಿಸಿದ ಸಂಘ-ಸAಸ್ಥೆಗಳು ಮಾತ್ರ ಅರ್ಹತೆ ಹೊಂದಿರುತ್ತಾರೆ.

ಅರ್ಜಿಯನ್ನು ಸಂಬAದಿಸಿದ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ-ಜಂಟಿ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ತಾ. ೨೧ ಕೊನೆಯ ದಿನವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ ತಿಳಿಸಿದ್ದಾರೆ.