ಮಡಿಕೇರಿ, ಫೆ. ೧೭: ಕರ್ನಾಟಕ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಪ್ರಯತ್ನ ನಡೆಸಿರುವ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಬೆಂಗಳೂರು ವಕೀಲರ ಸಂಘದ ಹೈಕೋರ್ಟ್ ಘಟಕದಿಂದ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ಸಂದರ್ಭ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ಕಾರ್ಯದರ್ಶಿ ಟಿ.ಜಿ. ರವಿ, ಅಡ್ವೋಕೇಟ್ ಜನರಲ್ ಶಶಿಕಿರಣ್ ಮತ್ತಿತರರು ಪಾಲ್ಗೊಂಡಿದ್ದರು.