ಸೋಮವಾರಪೇಟೆ, ಫೆ. ೧೬: ಸಮೀಪದ ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೧೩ ವರ್ಷ ಗಳಿಂದ ಡಿ. ಗ್ರೂಪ್ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಚಂದ್ರಮ್ಮ ಅವರ ಸೇವೆಯನ್ನು ಗುರುತಿಸಿ ಜೆ.ಸಿ.ಐ. ಭಾರತ ಕಾರ್ಯಕ್ರಮ ದಡಿಯಲ್ಲಿ ಜೆ.ಸಿ.ಐ. ಸೋಮವಾರಪೇಟೆ ಪುಷ್ಪಗಿರಿ ಘಟಕದ ವತಿಯಿಂದ ‘ಸೆಲ್ಯೂಟ್ ದ ಸೈಲೆಂಟ್ ಸ್ಟಾರ್' ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಶಾಂತಳ್ಳಿ ಆರೋಗ್ಯ ಕೇಂದ್ರದಲ್ಲಿ ಆಯೋಜಿತ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಜ್ಞ ವೈದ್ಯ ಡಾ. ಕಿರಣ್ ಕುಮಾರ್, ಜೆ.ಸಿ. ಸಂಸ್ಥೆಯ ವತಿಯಿಂದ ಗ್ರಾಮೀಣ ಭಾಗದ ಮಂದಿಯನ್ನೂ ಗುರುತಿಸಿ ಪ್ರೋತ್ಸಾಹ ತುಂಬುತ್ತಿರುವುದು ಶ್ಲಾಘನೀಯ ಎಂದರು.

ಸಮಾಜಮುಖಿ ಸಂಘ-ಸAಸ್ಥೆಗಳು ಇಂತಹ ಕಾರ್ಯಕ್ರಮ ಆಯೋಜನೆ ಮಾಡುವುದರಿಂದ ಸನ್ಮಾನಿತರಿಗೆ ಇನ್ನಷ್ಟು ಕೆಲಸ ಮಾಡುವ ಹುಮ್ಮಸ್ಸು ಬರುತ್ತದೆ ಹಾಗೂ ಇವರು ಇತರೆ ಸಿಬ್ಬಂದಿ ವರ್ಗದವರಿಗೂ ಮಾದರಿ ಯಾಗಿರುತ್ತಾರೆ. ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜೆ.ಸಿ. ಸೋಮವಾರಪೇಟೆ ಪುಷ್ಪಗಿರಿ ಘಟಕದ ಅಧ್ಯಕ್ಷ ಎಸ್.ಆರ್. ವಸಂತ್ ಮಾತನಾಡಿ, ಸಮುದಾಯ ಅಭಿವೃದ್ಧಿ, ಸಮುದಾಯಗಳಲ್ಲಿ ಧನಾತ್ಮಕ ಮತ್ತು ಸಮರ್ಥನೆಯ ಪ್ರಭಾವವನ್ನು ಸೃಷ್ಟಿಸುವ ಗುರಿಯೊಂದಿಗೆ ಸ್ಥಳೀಯ ಸವಾಲುಗಳನ್ನು ಪರಿಹರಿಸುವ ಯೋಜನೆಗಳಲ್ಲಿ ಭಾಗವಹಿಸಲು ಜೆ.ಸಿ.ಐ. ತನ್ನ ಸದಸ್ಯರನ್ನು ಪ್ರೋತ್ಸಾಹಿಸುತ್ತದೆ.

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವವರನ್ನು ಗುರುತಿಸಿ ಗೌರವಿಸುವುದು ನಮ್ಮ ಧ್ಯೇಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಾರುಮತಿ ಸಿ. ಆಚಾರ್ಯ, ಲೇಡಿ ಜೇಸಿ ಚೇರ್ ಪರ್ಸನ್ ಂಡಿಣisಣ ಸುದೀಪ್, ಕಾರ್ಯದರ್ಶಿ ಜಗದಾಂಬ ಗುರುಪ್ರಸಾದ್, ವಲಯ ಕಾರ್ಯದರ್ಶಿ ಮಾಯಾ ಗಿರೀಶ್, ನಿಕಟಪೂರ್ವ ವಲಯ ಅಧಿಕಾರಿ ವಿದ್ಯಾ ಸೋಮೇಶ್, ಖಜಾಂಚಿ ಪುಷ್ಪಕ್, ಮನೋಹರ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ, ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಜೆ.ಸಿ. ಸದಸ್ಯರು ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.